ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಎರಡನೇ ಅವಧಿಯ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಆಯ್ಕೆ
ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್ ಕುಮಾರ್ ಶೆಟ್ಟಿಯವರ ಪದಗ್ರಹಣ ಕಾರ್ಯಕ್ರಮ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಪಾಧ್ಯಕ್ಷ ಪ್ರಸನ್ನ ಮಾರ್ತ ಮತ್ತು ಬಿಜೆಪಿ ಮುಖಂಡರು ಭಾಗಿ. ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್ ಕುಮಾರ್ ಶೆಟ್ಟಿಯವರ ಪದಗ್ರಹಣ ಕಾರ್ಯಕ್ರಮ ಪಟ್ಟಣ ಪಂಚಾಯತ್‌ನ ಸಭಾಂಗಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಮಾಜಿ ಶಾಸಕರಾದ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಚನಿಲ ತಿಮ್ಮಪ್ಪ ಶೆಟ್ಟಿ, ಸಾಜ ರಾಧಕೃಷ್ಣ ಆಳ್ವ, ನರ್ಸಪ್ಪ ಪೂಜಾರಿ, ವಿಟ್ಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಉದಯ್ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು.


















