HomeFresh Newsಪುತ್ತೂರಿನಲ್ಲಿ ಅಶೋಕ ಜನಮನ : ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣಕ್ಕೆ ಐಜಿಪಿ ಅಮಿತ್ ಸಿಂಗ್, ಎಸ್ಪಿ...

ಪುತ್ತೂರಿನಲ್ಲಿ ಅಶೋಕ ಜನಮನ : ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣಕ್ಕೆ ಐಜಿಪಿ ಅಮಿತ್ ಸಿಂಗ್, ಎಸ್ಪಿ ಅರುಣ್ ಡಿ. ಭೇಟಿ -ಪರಿಶೀಲನೆ.

ಪುತ್ತೂರು: ಪುತ್ತೂರಿನಲ್ಲಿ ಅ.20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅಶೋಕ ಜನಮನ 2025 ಕಾರ್ಯಕ್ರಮ ನಡೆಯಲಿದೆ.

ಇದರ ಸಿದ್ಧತೆ, ಭದ್ರತಾ ದೃಷ್ಟಿಯಿಂದ ಪರಿಶೀಲಿಸುವ ನಿಟ್ಟಿನಲ್ಲಿ ಹಾಗೂ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸುವ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯಿಂದ ಸಿದ್ಧತಾ ಸ್ಥಳ ಪರಿಶೀಲನೆ ನಡೆಯುತ್ತಿದೆ.

ಜಿಲ್ಲಾ ಎಸ್ ಪಿ ಅರುಣ್ ಕುಮಾರ್, ಡಿವೈಎಸ್ಪಿ ಅರುಣ್ ನಾಗೇಗೌಡ, ಪುತ್ತೂರು ಸರ್ಕಲ್ ಇನ್ಸ್ ಪೆಕ್ಟರ್ ಜಾನ್ಸನ್ ರವರು ನಿನ್ನೆ(ಅ.16) ಭೇಟಿ ನೀಡಿದ್ದು, ಇಂದು ಐಜಿಪಿ ಅಮಿತ್ ಸಿಂಗ್, ಎಸ್ಪಿ ಅರುಣ್ ಡಿ. ಭೇಟಿ ನೀಡಿ, ಸಿದ್ಧತೆಗಳ ಬಗ್ಗೆ ಪರಿಶೀಲಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments