Homeಎಸ್‌.ಡಿ.ಎಂಮೂಡುಬಿದಿರೆಯಲ್ಲಿ ಮಹಿಳೆಗೆ ಹಲ್ಲೆ, ಜಾತಿ ನಿಂದನೆ : ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲು

ಮೂಡುಬಿದಿರೆಯಲ್ಲಿ ಮಹಿಳೆಗೆ ಹಲ್ಲೆ, ಜಾತಿ ನಿಂದನೆ : ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲು

ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕೋಟೆಬಾಗಿಲಿನಲ್ಲಿ ಮಹಿಳೆಯೋವ೯ರ ಮೇಲೆ ಹಲ್ಲೆ ನಡೆಸಿ , ಜಾತಿ ನಿಂದನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.

ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಪಡುಕೊಣಾಜೆ ನಿವಾಸಿ ಪವಿತ್ರ ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮಾರ್ಚ್‌ 5ರಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಕೋಟೆಬಾಗಿಲು ಮಾರಿಗುಡಿ ಸಮೀಪ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.


ದೂರಿನಲ್ಲಿ ನೀಡಿರುವ ಮಾಹಿತಿಯಂತೆ, ಆಸಿಫ್ ಎಂಬಾತನು ಮಹಿಳೆಯೊಂದಿಗೆ ವಾಗ್ವಾದ ನಡೆಸಿ ಮಹಿಳೆ ಮೇಲೆ ಹಲ್ಲೆ ನಡೆಸಿದುದಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆ ಮಾಡುವ ಉದ್ದೇಶದಿಂದ ಅವಹೇಳನಕಾರಿ ಪದಗಳನ್ನು ಬಳಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪವಿತ್ರ ಅವರು ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.


ಈ ಪ್ರಕರಣವನ್ನು ಭಾರತೀಯ ನ್ಯಾಯ ಸಂಹಿತೆ 2023ರ ಸಂಬಂಧಿತ ಕಲಂಗಳು ಹಾಗೂ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಮೇಲಿನ ಅಟ್ಟಹಾಸ ತಡೆ ಕಾಯ್ದೆಯಡಿ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆಯ ಬಗ್ಗೆ ಹಿಂದೂ ಜಾಗರಣ ವೇದಿಕೆ ಖಂಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments