HomeFresh Newsಅಟಲ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ ಪೂರ್ವಭಾವಿಯಾಗಿ ಕಾರ್ಯಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ...

ಅಟಲ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ ಪೂರ್ವಭಾವಿಯಾಗಿ ಕಾರ್ಯಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು “ಕಾಪು ಕಡಲ ಪರ್ಬ” ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 13-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಚರ್ಚಿಸಿದರು.

3 ದಿನಗಳ ಕಾಲ ನಡೆಯುವ ಈ ಕಡಲ ಪರ್ಬ ಕಾರ್ಯಕ್ರಮದಲ್ಲಿ ಬೀಚ್ ಉತ್ಸವ, ಅಹಾರ ಮೇಳ, ಕ್ರೀಡೋತ್ಸವ, ಸಾಂಸ್ಕೃತಿಕ ಉತ್ಸವ ನಡೆಯಲ್ಲಿದ್ದು ಖ್ಯಾತ ಗಾಯಕರಾದ ರಘು ದೀಕ್ಷಿತ್, ಕುನಾಲ್ ಗಾಂಜಾವಾಲ ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು ಹಾಗೂ ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರುಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments