ಅಟಲ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ ಪೂರ್ವಭಾವಿಯಾಗಿ ವಿವಿಧ ಸಮಿತಿ ಪ್ರಮುಖರ ಜೊತೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು “ಕಾಪು ಕಡಲ ಪರ್ಬ” ನಡೆಯಲಿದ್ದು ಇದರ ಪೂರ್ವಭಾವಿಯಾಗಿ ವಿವಿಧ ಸಮಿತಿಗಳನ್ನು ರಚಿಸಲಿಗಿದ್ದು ಸಮಿತಿಯ ಪ್ರಮುಖರೊಂದಿಗೆ ಇಂದು ದಿನಾಂಕ 21-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಭೆ ನಡೆಸಿ ಚರ್ಚಿಸಿದರು.

3 ದಿನಗಳ ಕಾಲ ನಡೆಯುವ ಈ ಕಡಲ ಪರ್ಬ ಕಾರ್ಯಕ್ರಮದಲ್ಲಿ ಬೀಚ್ ಉತ್ಸವ, ಅಹಾರ ಮೇಳ, ಕ್ರೀಡೋತ್ಸವ, ಸಾಂಸ್ಕೃತಿಕ ಉತ್ಸವ ನಡೆಯಲ್ಲಿದ್ದು ಖ್ಯಾತ ಗಾಯಕರಾದ ರಘು ದೀಕ್ಷಿತ್, ಕುನಾಲ್ ಗಾಂಜಾವಾಲ ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದು ಜೊತೆಯಲ್ಲಿ ಪುರುಷರಿಗೆ ಹಾಗೂ ಮಹಿಳೆಯರಿಗಾಗಿ ಬೀಚ್ ಟಗ್ ಆಫ್ ವಾರ್, ಪುರುಷರಿಗೆ ಬೀಚ್ ವಾಲಿಬಾಲ್, ಮಹಿಳೆಯರಿಗೆ ಬೀಚ್ ತ್ರೋಬಾಲ್ ಹಾಗೂ ವೈದ್ಯಕೀಯ ತಪಾಸಣಾ ಶಿಬಿರ, ದಂತ ತಪಾಸಣಾ ಶಿಬಿರ, ಕಣ್ಣಿನ ತಪಾಸಣಾ ಶಿಬಿರ ನಡೆಯಲಿದೆ.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಉಡುಪಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ್ ಹೆಗ್ಡೆ, ಮಾಜಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಹಾಗೂ ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.


















