ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ : ಆಟಿಡೊಂಜಿ ದಿನದ ‘ಆಟಿದ ಅರಗಣೆ’
ಆಟಿ ತಿಂಗಳಲ್ಲಿ ತುಳು ಜನರು ಆಚರಣೆ ಮಾಡುವ ಆಟಿಡೊಂಜಿ ದಿನವನ್ನು “ಆಟಿದ ಅರಗಣೆ ” ಎಂಬ ಹೆಸರಿನಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ಪ್ರಧಾನ ಕಛೇರಿಯಲ್ಲಿ ಆಚರಿಸಲಾಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತಾಡಿದ ಇವರು ಆಟಿ ತಿಂಗಳಲ್ಲಿ ಆಚರಣೆ ಮಾಡುವ ಆಟಿಡೊಂಜಿ ದಿನವನ್ನು ನಮ್ಮ ಸಂಸ್ಥೆಯಲ್ಲಿ “ಆಟಿದ ಅರಗಣೆ ” ಎಂಬ ಹೆಸರಿನಿಂದ ನಮ್ಮ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳ ಪೂರ್ಣ ಸಹಕಾರದಿಂದ ಅತ್ಯಂತ ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಾ ಇದ್ದೇವೆ. ಇದರಲ್ಲಿ ನಮ್ಮ ಸಿಬ್ಬಂದಿಗಳು ಅವರ ಮನೆಯಲ್ಲಿ ತಯಾರು ಮಾಡಿದ ರುಚಿ ರುಚಿಯಾದ ತುಳುನಾಡಿನ ಆಟಿ ತಿಂಗಳಿನ ವಿವಿಧ ತಿಂಡಿ ತಿನಿಸುಗಳು, ಭಕ್ಷ ಭೋಜನಗಳನ್ನು ತಂದಿರುತ್ತಾರೆ. ಆತ್ಮಶಕ್ತಿ ಎಂಬುದು ಒಂದು ಕುಟುಂಬ ಇದ್ದ ಹಾಗೆ ಇಲ್ಲಿಯ ಸಿಬ್ಬಂದಿಗಳು ಇಲ್ಲಿಯ ಕೆಲಸವನ್ನು ತನ್ನ ಸ್ವಂತ ಕುಟುಂಬದ ಕೆಲಸ ಎನ್ನುವ ಹಾಗೆ ಮಾಡುತ್ತಾ ಇದ್ದು ಈ ಆಟಿದ ಕೂಟದಲ್ಲಿ ಭಾಗವಹಿಸಿದ ಎಲ್ಲಾ ಸಿಬ್ಬಂದಿಗಳಿಗೆ ಹಾಗೂ ಅವರ ಮನೆಯವರಿಗೆ ಧನ್ಯವಾದಗಳನ್ನು ಸಮರ್ಪಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ನಿರ್ದೇಶಕರಾದ ಆನಂದ್ ಎಸ್ ಕೊಂಡಾಣ, ಸೀತಾರಾಮ್ ಎನ್, ರಮಾನಾಥ್ ಸನಿಲ್, ಚಂದ್ರಹಾಸ್ ಮರೋಳಿ, ಮುದ್ದು ಮೂಡು ಬೆಳ್ಳೆ, ಗೋಪಾಲ್ ಎಮ್, ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ವಾಮನ್ ಕೆ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಪೂರ್ವ ಅಧ್ಯಕ್ಷರಾದ ಜಯರಾಮ ಕಾರಂದೂರು, ಅಂತರಾಷ್ಟ್ರೀಯ ತರಬೇತಿ ಸಂಸ್ಥೆ ಜೂನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಇಂಡಿಯಾ ಇದರ ರಾಷ್ಟ್ರಮಟ್ಟದ ತರಬೇತುದಾರರದ ರಾಜೇಂದ್ರ ಭಟ್ ಕೆ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಮತ್ತು ಸಂಘದ ಸಿಬ್ಬಂದಿಗಳು ಭಾಗವಹಿಸಿದರು.