ಮಂಗಳೂರು: ಆತ್ಮಶಕ್ತಿ ಸ್ಥಾಪನಾ ದಿನ: ಸೌರ ವಿದ್ಯುತ್ ಘಟಕದ ಉದ್ಘಾಟನೆ

ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆತ್ಮಶಕ್ತಿ ಸ್ಥಾಪನಾ ದಿನಾಚರಣೆ ಮತ್ತು ಹವಾ ನಿಯಂತ್ರಿತ ಸಭಾಂಗಣ ಹಾಗೂ ನೂತನ ಸೌರ ವಿದ್ಯುತ್ ಘಟಕದ ಉದ್ಘಾಟನಾ ಕಾರ್ಯಕ್ರಮವು ಪಡೀಲ್‌ನ ಆತ್ಮಶಕ್ತಿ ಸೌಧದಲ್ಲಿ ನಡೆಯಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆತ್ಮಶಕ್ತಿ ಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಮಾಜಿ ಸಚಿವರಾದ ರಮಾನಾಥ ರೈ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಅವರು ಸೌರ ವಿದ್ಯುತ್ ಘಟಕವನ್ನು ಲೋಕಾರ್ಪಣೆಗೊಳಿಸಿದರು. ಇದೇ ವೇಳೆ ಮಾತನಾಡಿದ ಅವರು, ಚಿಕ್ಕ ಅವಧಿಯಲ್ಲಿ ಬಹುದೊಡ್ಡ ಸಾಧನೆಯನ್ನು ಆತ್ಮಶಕ್ತಿ ಸಹಕಾರಿ ಸಂಘ ಮಾಡುತ್ತಿರುವುದು ಸಂತೋಷದ ವಿಚಾರ. ಸಹಕಾರಿ ಸಂಘವನ್ನು ಮೇಲ್ದರ್ಜೆಗೆ ಏರಿಸಬೇಕೆಂಬ ಕನಸನ್ನು ಹೊತ್ತು ಚಿತ್ತರಂಜ್ ಬೋಳಾರ್ ಅವರು ವಿಶೇಷವಾದ ವ್ಯವಸ್ಥೆಗಳನ್ನು ಅಳವಡಿಸಿಕೊಂಡು ಇನ್ನಷ್ಟು ವಿಸ್ತರಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ವೇದವ್ಯಾಸ ಕಾಮತ್ ಅವರು ಹವಾ ನಿಯಂತ್ರಿತ ಸಭಾಂಗಣವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ಕರ್ನಾಟಕದ ಕರಾವಳಿಯ ತುಳುನಾಡಿನ ಕೊಡುಗೆ ಅಪಾರ ಇದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮುಂದಿನ ದಿನಗಳಲ್ಲಿ ನಮ್ಮ ಜನತೆಗೆ ಇನ್ನಷ್ಟು ಅವಕಾಶಗಳನ್ನು ಕಲ್ಪಿಸಿಕೊಡಲಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ವಹಿಸಿ ಮಾತನಾಡಿ, ನಾವು ಹಾಕಿಕೊಂಡ ಯೋಜನೆಗಳು ಸಹಕಾರಗೊಂಡಿದೆ. ಪಿಗ್ಮಿ ಸಂಗ್ರಹಗಾರರಿಗೆ ೨ ಲಕ್ಷದ ವರೆಗೆ ಆರೋಗ್ಯ ವಿಮೆಯನ್ನು ನೀಡುವ ವ್ಯವಸ್ಥೆಗಳನ್ನು ಮಾಡಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಪಿಗ್ಮಿ ಸಂಗ್ರಹಗಾರರಿಗೆ ಯು.ಟಿ. ಝುಲ್ಪಿಕರ್ ಅವರು ವಿಮಾ ಕಾರ್ಡ್‌ಗಳನ್ನು ವಿತರಿಸಿದರು.

ಇದೇ ವೇಳೆ ಸಂಘದ ಸಿಬ್ಬಂದಿಗೆ ಸಾಧನಾ ಪ್ರಶಸ್ತಿ ವಿತರಣೆ ಕಾರ್ಯಕ್ರಮವೂ ನಡೆಯಿತು.

ಈ ಸಂದರ್ಭ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ವಾಮನ, ಆತ್ಮಶಕ್ತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.