ಆಟಿಡು ಒಂಜಿ ದಿನ ಕಾರ್ಯಕ್ರಮ:ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣೆ
ಬಿಲ್ಲವ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಮುಂಡ್ಕೂರು, ಮುಲ್ಲಡ್ಕ, ಇನ್ನಾ, ಇದರ ವತಿಯಿಂದ ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣೆ, ಆಟಿಡು ಒಂಜಿ ದಿನ ಕಾರ್ಯಕ್ರಮ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಮುದಾಯ ಭವನದಲ್ಲಿ ನಡೆಯಿತು.
ತೋಟ ಮನೆ ಉಷಾ ವಾಸು ಅಂಚನ್ ದೀಪ ಬೆಳಗಿಸಿ ಕಾರ್ಯಕ್ರಮನ್ನು ಉದ್ಘಾಟಿಸಿದರು. ವಿದ್ಯಾ ವರ್ಧಕ ಪದವಿ ಪೂರ್ವ ಕಾಲೇಜಿನ ಮುಖ್ಯ ಶಿಕ್ಷಕಿ ಸವಿತಾ ಸದಾನಂದ ಪೂಜಾರಿ ಮುಖ್ಯ ಅತಿಥಿಯಾಗಿ ಮಾತನಾಡಿ ತುಳುನಾಡಿನಲ್ಲಿ ಆಷಾಡ ತಿಂಗಳಿಗೆ ತನ್ನದೇ ಆದ ಮಹತ್ವವಿದೆ. ತುಳುನಾಡಿನಲ್ಲಿ ಆಟಿ ಆಚರಣೆ ಸಾಂಸ್ಕೃತಿಕ, ಧಾರ್ಮಿಕ ನಂಬಿಕೆ ಉಳಿಸುವಲ್ಲಿ ಹಾಗೂ ವ್ಯಾವಹಾರಿಕ ಅನುಕೂಲತೆಯನ್ನು ಮಾಡಿಕೊಡುವಲ್ಲಿ ಸಹಕಾರಿಯಾಗಿದೆ ಎಂದರು.
ಬಿಲ್ಲವ ಯವ ವೇದಿಕೆಯ ಅಧ್ಯಕ್ಷ ಹರೀಶ್ ಪೂಜಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ವಸಂತ ಪೂಜಾರಿ ಮುಂಬೈ, ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪಾನ ಸಮಿತಿಯ ಸದಸ್ಯ ಕೃಷ್ಣ ಪೂಜಾರಿ ಬಂಟ್ಟೋಟು, ಬಿಲ್ಲವ ಸಂಘದ ಗೌರವ ಅಧ್ಯಕ್ಷ ಶ್ರೀಧರ್ ಸನಿಲ್, ಗ್ರಾಮ ಪಂಚಾಯತಿ ಸದಸ್ಯೆ ಶಶಿಕಲ ಕೃಷ್ಣ ಸಾಲ್ಯಾನ್ ,ಬಿಲ್ಲವ ಮಹಿಳಾ ವೇದಿಕೆಯ ಕೋಶಾಧಿಕಾರಿ ರಂಜನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.