ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಸಾಗರ ಮಾಲಾ ಯೋಜನೆ ಕರ್ನಾಟಕ ಕರಾವಳಿ ಜಿಲ್ಲೆಗಳ ಮೀನುಗಾರ ಸಮುದಾಯದಲ್ಲಿ ಆತಂಕವನ್ನು ಸೃಷ್ಟಿಸುತ್ತಿದೆ. ಮಂಗಳೂರು ಬೆಂಗರೆಯ ಪಲ್ಗುಣಿ ನದಿ ದಂಡೆಯಲ್ಲಿ ಸಾಗರ ಮಾಲಾ ಯೋಜನೆಯಡಿ ದೇಶೀಯ ಹಡಗುಗಳ ನಿಲುಗಡೆಗಾಗಿ ಕೋಸ್ಟಲ್ ಬರ್ತ್ ನೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ. ಇದು ಸ್ಥಳೀಯ ಸಾಂಪ್ರದಾಯಿಕ ನಾಡದೋಣಿ
ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ಖಂಡಿಸಿ CPIM ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ವಾರಾಚರಣೆ ನಡೆಯತ್ತಿದ್ದು, ಇಂದು ನಗರದ ಹ್ರದಯ ಭಾಗವಾದ ಹಂಪನಕಟ್ಟಾ ಪ್ರದೇಶದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು.ಬೆಲೆಯೇರಿಕೆಗೆ ಕಾರಣವಾದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ತಪ್ಪು ಆರ್ಥಿಕ ನೀತಿಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಭರಿತರಾಗಿ ಘೋಷಣೆಗಳನ್ನು ಕೂಗುವ ಮೂಲಕ ಸರಕಾರದ ಕ್ರಮವನ್ನು
ಕೇಂದ್ರ ಸಚಿವ ಸಂಪುಟದ ಪುನರ್ ರಚನೆ ಇಂದು ಸಂಜೆ 6ಕ್ಕೆ ನಡೆಯಲಿದ್ದು, ಹಲವು ಮಂದಿ ಹೊಸಬರಿಗೆ ಸಚಿವ ಸ್ಥಾನ ದೊರೆಯಲಿದೆ. ಹಾಲಿ ಸಚಿವರ ಪೈಕಿ ಕೆಲವೊಬ್ಬರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ. ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಸೇರಿದಂತೆ ಆರು ಮಂದಿ ಸಚಿವರು ರಾಜೀನಾಮೆ ನೀಡಿದ್ದಾರೆ.ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್, ರಾಜ್ಯ ಖಾತೆ ಸಚಿವರಾದ ರಾವೋಸಾಹೇಬ್ ದನ್ವೆ, ಸಂಜಯ್
ಉಳ್ಳಾಲ: ಎರಡು ಮನೆಗಳಿಗೆ ಬಾಗಿಲು ಮುರಿದು ನುಗ್ಗಿದ ಕಳ್ಳರ ತಂಡ, ಮನೆಯೊಳಗಿದ್ದ ಸೊತ್ತುಗಳನ್ನು ಹಾನಿಗೈದು ಒಂದು ಮನೆಯಿಂದ ವಾಚ್ ಕಳವುಗೈದು ಪರಾರಿಯಾಗಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಮೂಕಾಂಬಿಕಾ ದೇವಸ್ಥಾನ ಬಳಿ ವೇಳೆ ನಡೆದಿದೆ. ವಿದೇಶದಲ್ಲಿ ನೆಲೆಸಿರುವ ಸುರೇಶ್ ಎಂಬವರಿಗೆ ಸೇರಿದ ಮನೆಯ ಬಾಗಿಲು ಒಡೆದು ಒಳನುಗ್ಗಿರುವ ಕಳ್ಳರು ಕಪಾಟು ಪುಡಿಗೈದು, ಮನೆಯೊಳಗಿನ ಸಾಮಗ್ರಿಗಳನ್ನು ಚೆಲ್ಲಾಪಿಲ್ಲಿಗೈದು ಹಣ ಹಾಗೂ ಒಡವೆಗಾಗಿ ಹುಡುಕಾಡಿ ಏನೂ ಸಿಗದೇ
ವಿಟ್ಲ : ಅಡುಗೆ ಅನಿಲ ದರ ಕೂಡಲೇ ಇಳಿಸುವಂತೆ ಒತ್ತಾಯಿಸಿ ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ವತಿಯಿಂದ ವಿಟ್ಲ ನಾಡ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಸಿ.ಪಿ.ಐ.ಎಂ ಬಂಟ್ವಾಳ ತಾಲೂಕು ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿ ಕೋವಿಡ್ ಮಹಾಮಾರಿಯಿಂದ ಜನತೆ ಈಗಾಗಲೇ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಪೆಟ್ರೋಲ್ ಡೀಸೆಲ್ ಬೆಲೆ ಈಗಾಗಲೇ ಗಗನಕ್ಕೇರಿದ್ದು, ಅಲ್ಲದೇ ದಿನ ಬಳಕೆಯ ಎಲ್ಲಾ ಸಾಮಾಗ್ರಿಗಳ ಬೆಲೆ ಏರಿಕೆಯಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್, ಅಡುಗೆ ಅನಿಲ ಬೆಲೆಯೇರಿಕೆ ಖಂಡಿಸಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕೆ.ಅಭಯಚಂದ್ರ ಜೈನ್ ಅವರು ಮೂಡುಬಿದಿರೆಯಲ್ಲಿ ಒಂಟಿಯಾಗಿ ಪ್ರತಿಭಟನೆ ನಡೆಸಿ ಗಮನಸೆಳೆದರು. ಇಂಧನ ತೈಲ, ಅಡುಗೆ ಅನಿಲ ಬೆಲೆಯೇರಿಕೆ ವಿರುದ್ಧ ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ಮೂಡುಬಿದಿರೆಯಲ್ಲಿ ಸೈಕಲ್ ಜಾಥಾ ಮೂಲಕ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಮೂಡುಬಿದಿರೆ ಪೊಲೀಸರು ಇದಕ್ಕೆ ಅನುಮತಿ ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಭಯಚಂದ್ರ ಜೈನ್
ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೆಲೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಸೈಕಲ್ ರ್‍ಯಾಲಿ ಮತ್ತು ಪಾದಯಾತ್ರೆಯನ್ನು ಹಮ್ಮಿಕೊಂಡರು. ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪಿವಿಎಸ್ ಸರ್ಕಲ್ ಮುಖಾಂತರ ಮಂಗಳೂರು ಪಾಲಿಕೆ ಕಚೇರಿ ವರೆಗೆ ಸೈಕಲ್ ರ್‍ಯಾಲಿ ಮತ್ತು ಪಾದಯಾತ್ರೆ ನಡೆಯಿತು. ರ್‍ಯಾಲಿಯಲ್ಲಿ ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ, ವಿಶ್ವಾಸ್‌ದಾಸ್ ಕುಮಾರ್, ಎಸಿ ವಿನಯರಾಜ್, ಟಿ.ಕೆ ಸುಧೀರ್ ಸೇರಿದಂತೆ ಮತ್ತಿತ್ತರ
ಕುಂದಾಪುರ: ರಾಜಕೀಯ ದ್ವೇಷ ಸಾಧನೆಗಾಗಿ ಯಡಮೊಗೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ತಮ್ಮ ಪಕ್ಷದವರೇ ಆದ ಉದಯ್ ಗಾಣಿಗ ಅವರನ್ನು ಅಮಾನುಷವಾಗಿ ಹತ್ಯೆ ನಡೆಸಿರುವುದು ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.ತಾಲೂಕಿನ ಯಡಮೊಗೆಯ ಹೊಸಬಾಳು ಉದಯ್ ಗಾಣಿಗ ಅವರ ಮನೆಗೆ ಮಂಗಳವಾರ ಸಂಜೆ ಭೇಟಿ ನೀಡಿ ಅವರ ಪತ್ನಿ ಹಾಗೂ ಕುಟುಂಬಿಕರಿಗೆ ಸಾಂತ್ವನ ಹೇಳಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಪಕ್ಷ, ಜಾತಿ, ಧರ್ಮದ ನೆಲೆಯಲ್ಲಿ
ಅಚ್ಚೇದಿನ್ ಹೆಸರಿನಲ್ಲಿ ದೇಶವನ್ನೇ ಸರ್ವನಾಶಗೊಳಿಸಿದ ನರೇಂದ್ರ ಮೋದಿ ಸರಕಾರ. ಅಚ್ಚೇದಿನ್ ತರುವುದಾಗಿ, ಬೆಲೆಯೇರಿಕೆಯನ್ನು ನಿಯಂತ್ರಿಸುವುದಾಗಿ, ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದಾಗಿ ಬೊಗಳೆ ಬಿಟ್ಟು, ದೇಶದ ಜನತೆಗೆ ಮಂಕುಬೂದಿ ಎರಚಿ, ಕಳೆದ 7 ವರ್ಷಗಳ ಅವಧಿಯಲ್ಲಿ ದೇಶದ ಆರ್ಥಿಕತೆಯನ್ನು ದಿವಾಳಿನಂಚಿಗೆ ಕೊಂಡೊಯ್ದು, ಜನರ ಬದುಕನ್ನೇ ಸರ್ವನಾಶ ಮಾಡಿದ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರದ ವಿರುದ್ಧ ಪ್ರಬಲ ಜನಚಳುವಳಿ ಬೆಳೆದು ಬರುವ ಮೂಲಕ
ರಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆ ನಡೆಯುತ್ತಿದೆ. ನಾನು ಯಾವತ್ತೂ ಯಾರಿಗೂ ನನ್ನನ್ನು ಅಭ್ಯರ್ಥಿ ಮಾಡಿ ಎಂದು ಹೇಳಿಲ್ಲ. ಈಗ ಅದನ್ನು ಚರ್ಚೆ ಮಾಡುವ ಅಗತ್ಯ ಇಲ್ಲ. ಜನರ ಸಮಸ್ಯೆ ಆಲಿಸಿ ನ್ಯಾಯ ಒದಗಿಸೋಣ ಎಂದು ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕೊರೋನಾ ಕಾಲದಲ್ಲಿ ಜೀವ ಇದ್ದರೆ ಜೀವನ ಎಂದು ಹೇಳಿದರು. ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧೆ ವಿಚಾರದ ಬಗ್ಗೆ


















