ವಿಜಯಪುರ ಜಿಲ್ಲೆ ದೇವರಹಿಪ್ಪಗಿ ತಾಲೂಕಿನಲ್ಲಿ ಮರ್ಯಾದ ಹತ್ಯೆ ನಡೆದಿದೆ. ಇಂತಹದೊಂದು ಅಮಾನವೀಯ ಕೃತ್ಯ ನಡೆದಿರೋದು ಭೀಮಾತೀರದಲ್ಲಿ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಸಲಾದಹಳ್ಳಿ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಬಸವರಾಜ್ ಮಡಿವಾಳಪ್ಪ ಬಡಿಗೇರ್ ಎಂಬ ಯುವಕ ದವಾಲಬಿ. ಬಂದಗಿಸಾಬ ತಂಬಡ. ಎಂಬ ಯುವತಿಯ ಜೊತೆ ಪ್ರೀತಿ ಮಾಡುತ್ತಿದ್ದರು. ಇಬ್ಬರೂ
ಮಂಗಳೂರು: ಕ್ ಡೌನ್ ಅವಧಿಯಲ್ಲಿ ಜನ ಸಾಮಾನ್ಯರಿಗೆ ಅನ್ನ ಕೊಡಲಿಲ್ಲ, ಅಕ್ಕಿ ಕೊಡಲಿಲ್ಲ, ಬೇಳೆ ಕೊಡಲಿಲ್ಲ, ನಮ್ಮ ಮಕ್ಕಳ ಶಾಲಾ ಫೀಸು ಕೊಡಲಿಲ್ಲ, ಬ್ಯಾಂಕಿಗೆ ಕಟ್ಟಬೇಕಾದ ಸಾಲದ ಕಂತನ್ನು ಬಿಡದೆ ವಸೂಲಿ ಮಾಡಿದಿರಿ, ಈಗ ಕನಿಷ್ಟ ಈ ಮೂರು ತಿಂಗಳ ಅವಧಿಯ ವಿದ್ಯುತ್ ಬಿಲ್ , ನೀರಿನ ಬಿಲ್ಲನ್ನಾದರೂ ಮನ್ನ ಮಾಡಬೇಕೆಂದು ಡಿವೈಎಫ್ಐ ರಾಜ್ಯಾದ್ಯಕ್ಷರಾದ ಮುನೀರ್ ಕಾಟಿಪಳ್ಳ ನಿನ್ನೆ ಡಿವೈಎಫ್ಐ ರಾಜ್ಯಾದ್ಯಂತ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಹಾಗೂ ಮೂರು ತಿಂಗಳ
ಮಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಲಾಕ್‌ಡೌನ್ ವಿನಾಯಿತಿ ಅವಧಿಯಲ್ಲಿ ವಾಹನಗಳ ದಟ್ಟಣೆ ಕಂಡುಬರುತ್ತಿದ್ದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸರು ದಿಢೀರ್ ತಪಾಸಣೆ ನಡೆಸಿದರು. ನಗರದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಲಾಕ್‌ಡೌನ್ ಅವಧಿಯನ್ನು ವಿಸ್ತರಿಸಲಾಗಿದ್ದು, ಈ ಸಮಯದಲ್ಲಿಯೂ ನಗರಾದ್ಯಂತ ವಾಹನಗಳ ಓಡಾಟ ಹೆಚ್ಚಾಗಿತ್ತು. ಇದರಿಂದಾಗಿ ಇಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್,
ಕೊವಿಡ್ ಲಾಕ್ ಡೌನ್ ನಿಂದ ಖಾಸಗಿ ಬಸ್ ಉದ್ಯಮ ಸಂಕಷ್ಟದಲ್ಲಿದೆ.ಸರಕಾರ ಡಿಸೇಲ್ ದರ ಏರಿಕೆಯನುಸಾರ ದರ ಪರಿಷ್ಕರಿಸಿ ಒಂದಷ್ಟು ತೆರಿಗೆ ವಿನಾಯಿತಿಗಳನ್ನು ಮಾಡಿದ್ರೆ ಖಾಸಗಿ ಬಸ್ಸುಗಳು ಸುಗಮ ಸಂಚಾರ ಮಾಡಲು ಅನುಕೂಲವಾಗುವುದು ಎಂದು ಉಡುಪಿ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಗ್ರಹಿಸಿದ್ದಾರೆ. ಕಳೆದ ವರುಷ ಕೆ ಎಸ್ ಅರ್ ಟಿಸಿ ದರ ಕಡಿತ ಹಾಗೂ ವಿದ್ಯಾರ್ಥಿಗಳಿಗೆ ವಿನಾಯಿತಿ ಮಾಡಿರುವ ಕಾರಣಗಳನ್ನು ನೀಡಿದ ಹಿನ್ನಲೆಯಲ್ಲಿ, ಸರಕಾರ ಸುಮಾರು
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಾಂತರ ಭಾಗದಲ್ಲಿರುವ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ಆಶಯ ಮತ್ತು ನೇತೃತ್ವದಲ್ಲಿ ಅದೇ ಪ್ರದೇಶದಲ್ಲಿ ಕೋವಿಡ್ ಲಸಿಕಾ ಸೌಲಭ್ಯ ನೀಡುವ ಅಂಗವಾಗಿ ಗುರುಪುರ- ಕೈಕಂಬದ ಮಾತೃಭೂಮಿ ಸಭಾಂಗಣದಲ್ಲಿ ಮಂಗಳವಾರ ಲಸಿಕಾ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಭಾಜಪಾ ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ಪಚ್ಚನಾಡಿ, ರಾಜೇಶ್ ಕೊಟ್ಟಾರಿ, ತಾಲೂಕು ಪಂಚಾಯತ್ ಮಾಜಿ
ಕೋವಿಡ್ ಲಸಿಕೆಯನ್ನು ಎಲ್ಲರಿಗೂ ಉಚಿತವಾಗಿ ನೀಡಬೇಕು. ಲಸಿಕೆ ವ್ಯಾಪರೀಕರಣದ ವಸ್ತುವಾಗಬಾರದು. ಸರ್ಕಾರವೇ ಲಸಿಕೆಯನ್ನು ಭರಿಸಿ ಉಚಿತವಾಗಿ ಎಲ್ಲರಿಗೂ ಉಚಿತವಾಗಿ ನೀಡಬೇಕು ಎಂದು ಮಾಜಿ ಎಂಎಲ್‌ಸಿ ಐವನ್ ಡಿಸೋಜಾ ಆಗ್ರಹಿಸಿದರು.ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ದೇಶದ 130 ಕೋಟಿ ಜನರಿಗೆ ಉಚಿತ ಲಸಿಕೆಯನ್ನು ನೀಡಬೇಕೆಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಅದಕ್ಕಾಗಿಯೇ 35,000 ಕೋಟಿ ರೂಪಾಯಿ ತೆರಿಗೆಯ ಹಣವನ್ನು
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆಯೂ ಕೋವಿಡ್ ಸಂಕಷ್ಟ ಕಾಲದಲ್ಲಿ ಜನರಿಗೆ ಪ್ಯಾಕೇಜ್ ಗಳನ್ನು ನೀಡುವಂತೆ ಅಗ್ರಹಿಸಿ ಹಮ್ಮಿಕೊಂಡಿರುವ ಜನಂದೋಲನವು ಇಂದು ಉಡುಪಿ ಶಾಸಕ ರಘುಪತಿ ಭಟ್ ಕಚೇರಿ ಮುಂದುಗಡೆ ನಡೆಸಲಾಯಿತು.ವಿವಿಧ ಸಂಘಟನೆಗಳ ಕಾರ್ಯಕರ್ತರು ಜನಾಂದೋಲನದಲ್ಲಿ ಭಾಗವಹಿಸಿ ಶಾಸಕ ರಘುಪತಿ ಭಟ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ದ ಘೊಷಣೆಗಳನ್ನು ಕೂಗಿದ್ರು. ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಮಾತನಾಡಿ ಕೊವಿಡ್ ಸಂಕಷ್ಟ ಕಾಲದಲ್ಲಿ ಜನರಿಗೆ ಪ್ಯಾಕೇಜ್ ಗಳನ್ನ
ಹೆಜಮಾಡಿಯ ನದಿ ಹಾಗೂ ಸಮುದ್ರ ಒಂದಾಗುವ ಅಳುವೆ ಬಾಗಿಲಿಗೆ ಮೀನುಗಾರಿಕೆಗೆ ತೆರಳಿದ ಮೀನುಗಾರರೋರ್ವರು ಸಮುದ್ರದ ಬೃಹತ್ ಅಲೆಯ ದಾಳಿಗೆ ತುತ್ತಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರು ಹೆಜಮಾಡಿ ಕೋಡಿ ಮಾನಂಪಾಡಿ ನಿವಾಸಿ ಜಯಂತ್ (51).ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಹೊಂದಿದ್ದ ಇವರು ಮುಂಜಾನೆ ತೀರ ಮೀನುಗಾರಿಕೆ ನಡೆಸುವುದಕ್ಕಾಗಿ ಅಳವೆ ಪ್ರದೇಶಕ್ಕೆ ತೆರಳಿದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಂದ ಪಡುಬಿದ್ರಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು,
ಜಪ್ಪಿನಮೊಗರು ಗ್ರಾಮದ ಕೊಪ್ಪರಿಗುತ್ತು ಎಂಬಲ್ಲಿ ಸಾಕು ದನಗಳನ್ನು ಹೊರಗಡೆ ಕಟ್ಟಿ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಗಿ ತಂದೆಯೇ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನುವ ಘಟನೆ ನಡೆದಿದೆ. ಕೊಪ್ಪರಿಗೆಗುತ್ತು ನಿವಾಸಿ ಆರೋಪಿ ವಿಶ್ವನಾಥ ಶೆಟ್ಟಿ (52) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸ್ವಾಮೀತ್ ಶೆಟ್ಟಿ (25) ಸುಟ್ಟ ಗಾಯಗೊಂದಿಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಾಕುದನಗಳನ್ನು ಹೊರಗಡೆ ಕಟ್ಟಿಹಾಕಿದ್ದ ಬಗ್ಗೆ
ಮಂಗಳೂರಿನ ವಿ4 ಡಿಜಿಟಲ್ ಇನ್ಫೋಟೆಕ್ ಮತ್ತು ಡಿಜಿಟಲ್‌ನ ಕೇಬಲ್ ಆಪರೇಟರ್ ಹಾಗೂ ಸಿಬ್ಬಂದಿಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಯೆಯ್ಯಡಿಯಲ್ಲಿರುವ ವಿ4 ಡಿಜಿಟಲ್ ಇನ್ಫೋಟೆಕ್ ಮತ್ತು ಡಿಜಿಟಲ್‌ನಲ್ಲಿ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ವೈದ್ಯಾಧಿಕಾರಿ ಡಾ| ಸುಷ್ಮಾ ಜಾಸ್ಮಿನ್ ಅವರು ಚಾಲನೆ ನೀಡಿದ್ರು. ಇನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ , ಜಿಲ್ಲಾ ಆರೋಗ್ಯ ಇಲಾಖೆ , ಮಂಗಳೂರು ಮಹಾನಗರ ಪಾಲಿಕೆ ಸಹಕಾರದೊಂದಿಗೆ


















