Home Articles posted by v4news (Page 185)

ಕೇಂದ್ರ ಸಚಿವ ಡಿವಿಎಸ್ ಭೇಟಿಯಾದ ಸಚಿವ ಕೋಟ: ಲಸಿಕೆ ಕುರಿತು ಚರ್ಚೆ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರಿಂದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡರನ್ನು ಭೇಟಿ ಮಾಡಿ ಜಿಲ್ಲೆಯಲ್ಲಿ ಕೋವಿಡ್ – 19 ಲಸಿಕೆ ಕೊರತೆ ಕುರಿತು ಚರ್ಚೆ ನಡೆಸಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೋವಿಡ್ – 19 ಲಸಿಕೆ ಕೊರತೆ ಹಿನ್ನಲೆಯಲ್ಲಿ ಕೇಂದ್ರ

ಶಾಸಕ ಡಾ.ಭರತ್ ಶೆಟ್ಟಿ ವಿಶೇಷ ಪ್ರಯತ್ನ; ಲೋಕೇಶ್ ಕುಂದರ್ ಕುಟುಂಬಕ್ಕೆ 6 ಲಕ್ಷ ಪರಿಹಾರ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಇಡ್ಯಾದ ಗುಡ್ಡೆಕೊಪ್ಲ ನಿವಾಸಿ ಲೋಕೇಶ್ ಕುಂದರ್ ಅವರು ಕಳೆದ ಡಿಸೆಂಬರ್ ನಲ್ಲಿ ಮನೆಯ ಬಳಿಯ ಸಮುದ್ರ ತೀರದಲ್ಲಿ ಸಾಂಪ್ರದಾಯಿಕವಾಗಿ ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ಟ್ಯೂಬ್ ಹತೋಟಿ ತಪ್ಪಿ ದೂರ ಸರಿದು ನೀರಿಗೆ ಹಾಕಿದ ಬಲೆ ಕಾಲಿಗೆ ಸಿಲುಕಿ ಈಜಾಡಲಾಗದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಆ ಕುಟುಂಬಕ್ಕೆ ಸರಕಾರದಿಂದ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು

ನಮ್ಮ ಕಾರ್ಯಕರ್ತರಿಗೆ ಯಡಿಯೂರಪ್ಪ ಆದರ್ಶ: ನಳಿನ್ ಕುಮಾರ್ ಕಟೀಲ್

ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೀಡಿರುವ ರಾಜೀನಾಮೆ ಹೇಳಿಕೆಯ ಕುರಿತು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, “ಯಡಿಯೂರಪ್ಪ ಹೇಳಿಕೆ ಇದು ಭಾರತೀಯ ಜನತಾ ಪಾರ್ಟಿಯ ವಿಶೇಷತೆ, ನಮ್ಮ ಕಾರ್ಯಕರ್ತರಿಗೆ ಯಡಿಯೂರಪ್ಪ ಆದರ್ಶರಾಗಿದ್ದಾರೆ. ರಾಷ್ಟ್ರ ನಾಯಕರು ಮತ್ತು ಪಕ್ಷದ ಸೂಚನೆಯಂತೆ ನಡೆಯುತ್ತೇನೆ ಎಂದು ಹೇಳಿರೋದು ಆದರ್ಶಯುತವಾಗಿದೆ” ಎಂದರು.

ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಕ್ಸಿಜನ್ ಘಟಕ ಉದ್ಘಾಟನೆ

ಬಂಟ್ವಾಳ : ದಕ್ಷಿಣಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಉದ್ಘಾಟನೆ ಗೊಂಡಿತು. ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಘಟಕವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕರೋನಾ ನಿಗ್ರಹಕ್ಕೆ ಪೂರಕವಾಗಿ ಆಕ್ಸಿಜನ್ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಸ್ಥಾಪನೆಯಾದ ಪ್ರಥಮ ಆಕ್ಸಿಜನ್ ಘಟಕ ಇದಾಗಿದೆ ಎಂದರು. ಬಂಟ್ವಾಳದಲ್ಲಿ ಕರೋನಾ ವಿರುದ್ಧ ಹೋರಾಟ

ಕಾರು ಹತ್ತಿಸಿ ಕೊಲೆ: ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷ ಸೆರೆ

ಕುಂದಾಪುರ: ಯಡಮೊಗೆ ಸಾಮಾಜಿಕ‌ ಕಾರ್ಯಕರ್ತನ ಮೇಲೆ ಕಾರು ಹತ್ತಿಸಿ ಕೊಲೆಗೈದ ಖೇದಕರ ಘಟನೆಗೆ ಸಂಬಂಧಿಸಿದಂತೆ ಆರೋಪಿ ಪಂಚಾಯತ್ ಅಧ್ಯಕ್ಷನನ್ನು ಶಂಕರನಾರಾಯಣ ಪೊಲೀಸರು ಕ್ಷಿಪ್ರಗತಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶನಿವಾರ ರಾತ್ರಿ ಸಾಮಾಜಿಕ‌ ಕಾರ್ಯಕರ್ತ ಉದಯ್ ಗಾಣಿಗ (45) ಎಂಬವರ ಮೇಲೆ ಅವರ ಮನೆ ಎದುರಿನ‌ ರಸ್ತೆಯಲ್ಲೇ ಕಾರು ಹರಿಸಿ ಅವರನ್ನು ಕೊಲೆಗೈಯ್ಯಲಾಗಿತ್ತು. ಉದಯ್ ಪತ್ನಿ ಕೊಟ್ಟ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ‌ ಶಂಕರನಾರಾಯಣ ಪೊಲೀಸರು

ಶ್ರೀನಿವಾಸ್ ವಿವಿಯ ಕಾಲೇಜ್ ಆಫ್ ಏವಿಯೇಶನ್ ಸ್ಟಡೀಸ್: ವಿದ್ಯಾರ್ಥಿಗಳಿಗಾಗಿ ವೀಡಿಯೋ ಮೇಕಿಂಗ್ ಸ್ಪರ್ಧೆ

ಶ್ರೀನಿವಾಸ್ ಯುನಿವರ್ಸಿಟಿಯ ಕಾಲೇಜ್ ಆಫ್ ಏವಿಯೇಷನ್ ಸ್ಟಡೀಸ್‌ನ ಬಿಬಿಎ ಏವಿಯೇಶನ್ ಮ್ಯಾನೇಜ್‌ಮೆಂಟ್, ಏವಿಯೇಶನ್ ಲಾಜಿಸ್ಟಿಕ್ ಮ್ಯಾನೇಜ್‌ಮೆಂಟ್ ಮತ್ತು ಏವಿಯೇಶನ್ ಟ್ರಾವೆಲ್ ಮತ್ತು ಟೂರಿಸಂ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ವೀಡಿಯೋ ಮೇಕಿಂಗ್ ಸ್ಪರ್ಧೆಯನ್ನು ಆಯೋಜಿಸಲಾಯಿತು. ಕಾಲೇಜಿನ ಎನ್‌ಎಸ್‌ಎಸ್ ಹಾಗೂ ಸಮಾಜಸೇವಾ ವಿಭಾಗದ ವತಿಯಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿಶ್ವ

ಶ್ರೀನಿವಾಸ ವಿವಿಯ ಕಾಲೇಜ್ ಆಫ್ ಕಾಮರ್ಸ್ & ಮ್ಯಾನೇಜ್‌ಮೆಂಟ್: ವಿಶ್ವ ಪರಿಸರ ದಿನ ಆಚರಣೆ

ಶ್ರೀನಿವಾಸ ವಿಶ್ವವಿದ್ಯಾಲಯ ಕಾಲೇಜ್ ಆಫ್ ಕಾಮರ್ಸ್ ಮತ್ತು ಮ್ಯಾನೇಜ್‌ಮೆಂಟ್ ವತಿಯಿಂದ ಲಾಕ್‌ಡೌನ್ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ವರ್ಚುವಲ್ ವೇದಿಕೆಯ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಬಿ.ಕಾಂ. ಮತ್ತು ಬಿಬಿಎ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆ ಕಾಪಾಡುವುದು, ಸಸಿಗಳನ್ನು ನೆಡುವುದನ್ನು ವೀಡಿಯೋ ಮಾಡಲು ವಿದ್ಯಾರ್ಥಿಗಳಿಗೆ

ಪುತ್ತೂರು ತಾಲೂಕು ಪತ್ರಕರ್ತರ ಸಂಘಕ್ಕೆ ಕಾಂಗ್ರೆಸ್ ವತಿಯಿಂದ ಮಾಸ್ಕ್ ವಿತರಣೆ

ಪುತ್ತೂರು: ನಗರ ಕಾಂಗ್ರೆಸ್ ವತಿಯಿಂದ ಪುತ್ತೂರು ತಾಲೂಕು ಪತ್ರಕರ್ತರ ಸಂಘಕ್ಕೆ ಎನ್95 ಮಾದರಿಯ ಮಾಸ್ಕನ್ನು ಪತ್ರಿಕಾಭವನದಲ್ಲಿ ವಿತರಿಸಲಾಯಿತು. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾಸ್ಕ್‍ವಿತರಿಸಿ ಮಾತನಾಡಿ, ಕೊರೋನಾ ಸಂಕಷ್ಟ ಕಾಲದಲ್ಲಿ ಕೊರೋನಾ ವಾರಿಯರ್ಸ್ ಆಗಿ ಸಮಾಜದ ಜನರ ನಡುವೆ ತೊಡಗಿಸಿಕೊಂಡಿರುವ ಪತ್ರಕರ್ತರಿಗೆ ಸರಕಾರ ಕೊಡುಗೆಗಳನ್ನು ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರಕಾರ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಒತ್ತಾಯಿಸಿದರು. ಈ