Home Articles posted by v4team (Page 151)

ಉಳ್ಳಾಲ: ಯು.ಟಿ ಖಾದರ್ ಅವರ ಅಪ್ತ ಸಹಾಯಕರಾಗಿ ಪ್ರಕಾಶ್ ಪಿಂಟೋ ಆಯ್ಕೆ, ಸನ್ಮಾನ

ಕರ್ನಾಟಕ ಸರಕಾರದ ವಿಧಾನ ಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಆಪ್ತ ಸಹಾಯಕರಾಗಿ ಆಯ್ಕೆಯಾದ ಪ್ರಕಾಶ್ ಪಿಂಟೋ ಅವರಿಗೆ ತೊಕ್ಕೊಟ್ಟು ಶಿವಾಜಿ ಪ್ರೆಂಡ್ ಸರ್ಕಲ್ ಮತ್ತು ಸ್ವಾಮಿ ಕೊರಗಜ್ಜ ಸಮಿತಿಯ ವತಿಯಿಂದ ಗೌರವ ಸನ್ಮಾನ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಕಾಶ್ ಪಿಂಟೋ ಶಿವಾಜಿ ಫ್ರೆಂಡ್ಸ್ ಸರ್ಕಲ್ ಕ್ಲಬ್ ನಲ್ಲಿ ಹಿಂದೂ ಮುಸ್ಲಿಮ್, ಕ್ರೈಸ್ತರು

ಅ.10ರಂದು ಉಡುಪಿಯಲ್ಲಿ ಹಿಂದೂ ಸಮಾಜೋತ್ಸವ – ಅನಧಿಕೃತ ಬ್ಯಾನರ್ ಗಳ ತೆರವು

ಶಿವಮೊಗ್ಗದ ಈದ್ ಮಿಲಾದ್ ಗಲಾಟೆ ಬಳಿಕ ಎಚ್ಚೆತ್ತಿರುವ ಉಡುಪಿ ನಗರಸಭೆ, ನಗರ ವ್ಯಾಪ್ತಿಯ ಅನಧಿಕೃತ ಬ್ಯಾನರ್ ಮತ್ತು ಕಟೌಟ್‍ಗಳನ್ನು ತೆರವುಗೊಳಿಸಿದೆ. ಉಡುಪಿಯಲ್ಲಿ ಅಕ್ಟೋಬರ್ ಹತ್ತರಂದು ಹಿಂದೂ ಸಮಾಜೋತ್ಸವ ಆಯೋಜನೆಗೊಂಡಿದ್ದು, ಹಿಂದೂ ಸಮಾಜೋತ್ಸವದ ಎಲ್ಲಾ ಬ್ಯಾನರ್ ಗಳನ್ನೂ ತೆರವುಗೊಳಿಸಲಾಗಿದೆ. ಉಡುಪಿ ನಗರ ಸುತ್ತಮುತ್ತ ಅಳವಡಿಸಿದ್ದ ಬ್ಯಾನರ್‍ಗಳ ತೆರವು ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಉಡುಪಿ ಎಸ್ಪಿ ಡಾ. ಅರುಣ್ ಅವರನ್ನು

ಉಡುಪಿ: ಅನಧಿಕೃತ ಬ್ಯಾನರ್ ಗಳ ತೆರವು ಕಾರ್ಯ

ಶಿವಮೊಗ್ಗ ಗಲಭೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅನಧಿಕೃತವಾಗಿ ಹಾಗೂ ಅವಧಿ ಮೀರಿದ ಬ್ಯಾನರ್ ಮತ್ತು ಕಟೌಟ್‍ಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ನಗರಸಭೆಯ ಅಧಿಕಾರಿಗಳು ಪೆÇಲೀಸ್ ರಕ್ಷಣೆಯಲ್ಲಿ ನಡೆಸಿದರು. ನಗರಸಭೆಯಿಂದ ಅನುಮತಿ ಪಡೆಯದೆ ಉಡುಪಿ ನಗರ, ಸಂತೆಕಟ್ಟೆ ಹಾಗೂ ಮಣಿಪಾಲ ಸೇರಿದಂತೆ ನಗರ ಸಭೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಲಾಗಿದ್ದ ಹಾಗೂ ಅವಧಿ ಮೀರಿದ ಒಟ್ಟು 85 ಅನಧಿಕೃತ ಬ್ಯಾನರ್ ಹಾಗೂ

ಪುತ್ತೂರು: ಅ.7ರಂದು ಶೌರ್ಯ ಜಾಗರಣ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ

ಪುತ್ತೂರು: ವಿಶ್ವ ಹಿಂದೂ ಪರಿಷತ್ ಸ್ಥಾಪನೆಯಾಗಿ 60ನೇ ವರ್ಷಕ್ಕೆ ಕಾಲಿಡುತ್ತಿರುವ ನಿಟ್ಟಿನಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆ ವತಿಯಿಂದ ಶೌರ್ಯ ಜಾಗರಣಾ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ ಅ.7 ರಂದು ಸಂಜೆ ಪುತ್ತೂರಿನ ಕಿಲ್ಲೇ ಮೈದಾನದಲ್ಲಿ ನಡೆಯಲಿದೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಶ್ವ ಹಿಂದೂ ಪರಿಷತ್ ದೇಶಾದ್ಯಂತ ಅನೇಕ

ಮಂಗಳೂರು: ಅ.5ರಂದು ಬಿಎಂಆರ್ ಗ್ರೂಪ್‍ನ ವಿನ್ ಯುವರ್ ಡ್ರೀಮ್ ಹೋಮ್‍ನ ಸೀಸನ್-3ರ ಡ್ರಾ ಕಾರ್ಯಕ್ರಮ

ಬಿಎಂಆರ್ ಗ್ರೂಪ್ ವತಿಯಿಂದ ವಿನ್ ಯುವರ್ ಡ್ರೀಮ್ ಹೋಮ್‍ನ ಸೀಸನ್-3ರ ಡ್ರಾ ಕಾರ್ಯಕ್ರಮವು ಅಕ್ಟೋಬರ್ 5ರಂದು ಚೊಕ್ಕಬೆಟ್ಟುವಿನ ಎಮ್‍ಜೆಎಮ್ ಹಾಲ್‍ನಲ್ಲಿ ನಡೆಯಲಿದೆ. ಸಂಜೆ 7 ಗಂಟೆಗೆ ನಡೆಯಲಿರುವ ಈ ಸ್ಕೀಮ್‍ನ 15ನೇ ಡ್ರಾ ದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ನೂತನ ಮನೆಯನ್ನು ಪಡೆಯುವ ವಿಜೇತರ ಹೆಸರನ್ನು ಆಯ್ಕೆ ಮಾಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಬಿಎಂಆರ್ ಗ್ರೂಪ್‍ನ ಅಧ್ಯಕ್ಷರಾದ ಇಬ್ರಾಹಿಂ, ಬಿಎಂಆರ್

ಮಾರ್ಬಲ್‌ ತುಂಬಿಕೊಂಡಿದ್ದ ಲಾರಿ ಪಲ್ಟಿ : ನಾಲ್ಕು ಜನ ಗಂಭೀರ

ವಿಟ್ಲ: ಮಾರ್ಬಲ್‌ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿ ನಡೆದಿದೆ. ಲಾರಿ ಪಲ್ಟಿಯಾಗಿ ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದ್ದು, ಗಂಭೀರ ಗಾಯಗೊಂಡ ಗಾಯಾಳುಗಳನ್ನು ನಾಲ್ಕು ಆಂಬ್ಯುಲೆನ್ಸ್‌ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಾಳುಗಳನ್ನು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿನೆ

ಮೂಡುಬಿದಿರೆ:ಮಾನ್ವತ್ವದೆಡೆಯಿ೦ದ ದೈವತ್ವದೆಡೆಗೆ ಸಾಗಿಸುವುದೇ ಧರ್ಮ : ಭಟ್ಟಾರಕ ಶ್ರೀ

ನಮ್ಮ ತನದಲ್ಲಿ ಜಗತ್ತನ್ನು ನೋಡುವ, ಮತ್ತೊಬ್ಬರ ಕಷ್ಟಗಳನ್ನು ಅರಿಯುವುದರ ಮೂಲಕ ನಾವೆಲ್ಲರೂ ಒ೦ದೇ ಎ೦ಬುದನ್ನು ಧರ್ಮಗಳು ಹೇಳುತ್ತವೆ. ಅ೦ಧಕಾರದಲ್ಲಿರುವವರನ್ನು ಬೆಳಕಿನೆಡೆಗೆ ಕೊ೦ಡೊಯ್ಯುವುದೇ ಧರ್ಮ. ಈ ನಿಟ್ಟಿನಲ್ಲಿ ಎಲ್ಲರನ್ನೂ ಧರ್ಮೀಯರನ್ನಾಗಿ ಮಾಡುವುದು ಧರ್ಮಗಳ ಕರ್ತವ್ಯವಾಗಬೇಕು ಎ೦ದು ಮೂಡುಬಿದಿರೆ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಹೇಳಿದರು. ಅವರು ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆ೦ಟ್ ವಿದ್ಯಾ

ಆದಿವಾಸಿ ಕೊರಗ ಸಮುದಾಯದ ಬದುಕಿನೊಂದಿಗೆ ಚೆಲ್ಲಾಟ ಆಡುವುದನ್ನು ಸಹಿಸಲು ಸಾಧ್ಯವಿಲ್ಲ – ಸುನಿಲ್ ಕುಮಾರ್ ಬಜಾಲ್

ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ಮತ್ತು ಅಧಿಕಾರಿಗಳು ಜಿಲ್ಲೆಯ ಮೂಲ ನಿವಾಸಿಗಳಾಗಿರುವ ಆದಿವಾಸಿ ಕೊರಗ ಸಮುದಾಯದ ಬಗ್ಗೆ ಮಾನವೀಯ ನೆಲೆಯಿಂದ ಕಾರ್ಯಾಚರಿಸುವುದು ಸಂವಿಧಾನದ ಆಶಯವಾಗಿದೆ ಇದಕ್ಕೆ ವ್ಯತಿರಿಕ್ತವಾಗಿ ಕೊರಗ ಸಮುದಾಯದ ಬದುಕಿನೊಂದಿಗೆ ಚೆಲ್ಲಾಟ ಆಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಿಐಟಿಯು ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು ಅವರು ಇಂದು ಮಂಗಳೂರು ಮಹಾನಗರ ಪಾಲಿಕೆಯ ಎದುರು ವಾಮಂಜೂರು

ಮೂಡುಬಿದಿರೆ : ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಧನಾ ಸಲಕರಣೆ ವಿತರಣೆ

ಮೂಡುಬಿದಿರೆ: ಕ್ಷೇತ್ರ ಸಮನ್ವಯ ಸಂಪನ್ಮೂಲ ಕೇಂದ್ರ ಮೂಡುಬಿದಿರೆ ಇಲ್ಲಿ ಮಂಗಳವಾರ ವಲಯದ 15 ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು. ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ಸಾಧನ ಸಲಕರಣೆ ವಿತರಿಸಿ ಮಾತನಾಡಿ ಪೋಷಕರು ತಮ್ಮ ಮಕ್ಕಳಿಗೆ ಮತ್ತಷ್ಟು ಉತ್ತೇಜನ ನೀಡಿ ಈ ಮಕ್ಕಳು ಮುಖ್ಯವಾಹಿನಿ ಬರುವಂತೆ ಮಾಡಬೇಕು. ಸರ್ಕಾರದ ವ್ಯವಸ್ಥೆ ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಸಹಯೋಗದಿಂದ ಸಲಕರಣೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದರು.

ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಆದರ್ಶ್ ಶೆಟ್ಟಿ ನೆಲ್ಯಾಡಿ

ನೆಲ್ಯಾಡಿ: ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಅಮೆಚೂರ್ ಕ್ರೀಡಾಕೂಟದಲ್ಲಿ ಆದರ್ಶ್ ಶೆಟ್ಟಿ ಇವರು ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ತೆಲಂಗಾಣದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ದೈಹಿಕ ಶಿಕ್ಷಕರಾದ ಏಲಿಯಸ್ ಪಿಂಟೋ, ರಾಜೇಶ್ ಮೂಲ್ಯ ಹಾಗೂ ಪುಷ್ಪರಾಜ್ ಇವರಿಗೆ ತರಬೇತಿಯನ್ನು ನೀಡಿದ್ದಾರೆ. ಪ್ರಸ್ತುತ ಇವರು ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ.