Home Articles posted by v4team (Page 156)

ಮಂಗಳೂರು: ಚಂದನ ವಾಹಿನಿಯಲ್ಲಿ ಅಂಬರ್ ಮರ್ಲೆರ್ ತುಳು ಸಾಮಾಜಿಕ ಹಾಸ್ಯ ಧಾರಾವಾಹಿ ಪ್ರಸಾರ

ಅರ್ನ ಕ್ರಿಯೇಷನ್ಸ್ ಸಂಸ್ಥೆಯ ‘ಅಂಬರ ಮರ್ಲೆರ್’ ಎಂಬ ತುಳು ಸಾಮಾಜಿಕ ಹಾಸ್ಯ ಧಾರಾವಾಹಿಯು ಚಂದನ ವಾಹಿನಿಯಲ್ಲಿ ಸೆ.24ರಿಂದ ಪ್ರತಿ ಭಾನುವಾರ ಪ್ರಸಾರವಾಗಲಿದೆ ಎಂದು ನಿರ್ಮಾಪಕ ಹಾಗೂ ಪ್ರಧಾನ ನಿರ್ದೇಶಕ ಸುಂದರ್ ರೈ ಮಂದಾರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಪ್ರತಿ ಭಾನುವಾರ ಮಧ್ಯಾಹ್ನ 1.30ರಿಂದ 2 ಗಂಟೆಯವರೆಗೆ ಧಾರಾವಾಹಿ

ಹಾಸನ: ಸೆ.25 ರಂದು “ಜನತಾ ದರ್ಶನ” ಕಾರ್ಯಕ್ರಮ

“ಜನತಾ ದರ್ಶನ” ಕಾರ್ಯಕ್ರಮವು ರಾಜ್ಯ ಸರ್ಕಾರದ ಬಹುಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ, ನಿಗಧಿತ ಕಾಲಾವಧಿಯೊಳಗೆ ಸೂಕ್ತ ಪರಿಹಾರವನ್ನು ಒದಗಿಸುವ ಉದ್ದೇಶವನ್ನು ಹೊಂದಿರುತ್ತದೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ತಿಳಿಸಿದ್ದಾರೆ. ಹಾಸನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜನತಾ ದರ್ಶನ” ಕಾರ್ಯಕ್ರಮ ಕುರಿತು ಮಾಹಿತಿ ನೀಡಿದರು. ರಾಜ್ಯದ ಸಮಸ್ಯೆಗಳನ್ನು ಕುರಿತು ಮಾನ್ಯ

ಕಡಬ : ಕಾಂಗ್ರೆಸ್ ನಾಯಕರನ್ನು ಪಕ್ಷದಿಂದ ಉಚ್ಛಾಟಿಸಲು ಸುಳ್ಯ ಬ್ಲಾಕ್‍ನಿಂದ ಶಿಫಾರಸ್ಸು ಮಾಡಿಲ್ಲ, ಮಮತಾ ಗಟ್ಟಿ

ಸುಳ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಯ ಮೇಲೆ ಕೆಲವರನ್ನು ಉಚ್ಛಟಿಸಲಾಗಿದೆ ಎನ್ನುವ ಸುದ್ದಿ ಯಾವುದೋ ಕಾರಣಕ್ಕೆ ಹರಡಿತ್ತು. ಆದರೆ ಸುಳ್ಯ ಬ್ಲಾಕ್ ಕಾಂಗ್ರೆಸ್‍ನಿಂದ ಉಚ್ಛಾಟನೆಗೆ ಯಾವುದೇ ಶಿಫಾರಸ್ಸು ಹೋಗಿಲ್ಲ ಎಂದು ಕೆ.ಪಿ.ಸಿ.ಸಿ ಉಸ್ತುವಾರಿ ಮಮತಾ ಗಟ್ಟಿ ಸ್ಪಷ್ಟಪಡಿಸಿದರು. ಅವರು ಕಡಬ ಅನುಗ್ರಹ ಸಭಾಭವನದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪಕ್ಷ

ಬಂಟ್ವಾಳ: ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘಕ್ಕೆ 1.5ಕೋಟಿ ರೂ ನಿವ್ವಳ ಲಾಭ

ಬಂಟ್ವಾಳ: 75 ವರ್ಷಗಳ ಹಿಂದೆ ಬಿ.ಕೃಷ್ಣ ರೈ ಅಧ್ಯಕ್ಷತೆಯಲ್ಲಿ ಆರಂಭಗೊಂಡ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದ್ದು ಎಂಟು ಗ್ರಾಮಗಳಲ್ಲಿ ತೃಪ್ತಿಕರ ಸೇವೆ ನೀಡುತ್ತಿದೆ. 2022-23ನೇ ಸಾಲಿನ ವರ್ಷಾಂತ್ಯಕ್ಕೆ 46.04 ಕೋಟಿ ರೂ ಠೇವಣಿ ಇದ್ದು, ಸಾಲ ಹೊರಬಾಕಿ 81.74 ಕೋಟಿ ರೂ, ದುಡಿಯುವ ಬಂಡವಾಳ 173.35 ಕೋಟಿ ರೂ, ಹೂಡಿಕೆ 14.12 ಕೋಟಿ ರೂ, ಸಂಘದ ಒಟ್ಟು ವ್ಯವಹಾರ 376.85 ಕೋಟಿ ರೂ ಆಗಿದ್ದು, 1.5 ಕೋಟಿ ರೂ ನಿವ್ವಳ ಲಾಭ

ಬಂಟ್ವಾಳ: ಆಸ್ಪತ್ರೆಯಲ್ಲಿ ಮೊಬೈಲ್ ಕಳ್ಳತನ-ಆರೋಪಿಯ ಸುಳಿವು ಸಿಕ್ಕಲ್ಲಿ ಪೋಲಿಸರಿಗೆ ಮಾಹಿತಿ ನೀಡಲು ಮನವಿ

ಬಂಟ್ವಾಳ: ಅನಾರೋಗ್ಯದ ನಿಮಿತ್ತ ಚಿಕಿತ್ಸೆಗೆಂದು ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪೋಲಿಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾಗಿದ್ದು ಕಳ್ಳನ ಚಲನವಲನ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ. ಇದೀಗ ಆಸ್ಪತ್ರೆಯಲ್ಲಿ ಈತನ ಪೋಟೋ ಅಂಟಿಸಲಾಗಿದ್ದು, ಈತನ ಚಹರೆಯನ್ನು ಗಮನಿಸಿದವರು ಪೋಲಿಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಮೆಲ್ಕಾರ್ ಟ್ರಾಫಿಕ್ ಪೋಲಿಸ್ ಠಾಣೆಯ ಎಚ್.ಸಿ.ದೇವರಾಜ್ ಅವರು ಅನಾರೋಗ್ಯದ ಕಾರಣ ಬಂಟ್ವಾಳ

ಉಪ್ಪಳ: ಮುಳಿಂಜ ಶಿವತೀರ್ಥಪದವಿನಲ್ಲಿ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಪನ್ನ

ಉಪ್ಪಳ ಮುಳಿಂಜ ಶಿವತೀರ್ಥಪದವಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಸಿದ್ದಿವಿನಾಯಕ ಸಾರ್ವಜನಿಕ ಸಂಸ್ಥೆಯ ಆಶ್ರಯದಲ್ಲಿ 44 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಿತು. ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಹಾಗೂ ಸಾರ್ವಜನಿಕರಿಗಾಗಿ ವಿವಿಧ ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು. ವಿವಿಧ ವೈದಿಕ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ಶ್ರೀ ಗಣೇಶನ ಭವ್ಯವಾದ ಶೋಭಾ ಯಾತ್ರೆಯು

ಉಡುಪಿ: ಸೆ.22ರಂದು ಜಗದ್ಗುರುಗಳವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆಯಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಪಡುಕುತ್ಯಾರಿನಲ್ಲಿ ಚಾತುರ್ಮಾಸ್ಯ ವ್ರತಾನುಷ್ಠರಾಗಿರುವ ಜಗದ್ಗುರುಗಳವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಲು ಸೆ. 22ರಂದು 2 ಗಂಟೆಗೆ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಆಗಮಿಸಲಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಮಹಾಸಂಸ್ಥಾನಕ್ಕೆ ಪ್ರಥಮಬಾರಿ ಆಗಮಿಸಲಿರುವ ಸಚಿವರನ್ನು, ಮಹಾ ಸಂಸ್ಥಾನದ ಸಹ

ಕಾಪು: ಬೈಕ್ ಸಹಿತ ಕಳವು ಆರೋಪಿ ಸೆರೆ

ಕಾಪು ರೆಸಿಡೆನ್ಸಿ ಕಟ್ಟಡದ ಬಳಿ ನಿಲ್ಲಿಸಲಾಗಿದ್ದ ಬೈಕ್ ನಾಪತ್ತೆಯಾದ ಬಗ್ಗೆ ಉತ್ತರ ಪ್ರದೇಶ ಮೂಲದ ವ್ಯಕ್ತಿ ನೀಡಿದ ದೂರಿನನ್ವಯ ತನಿಖೆ ನಡೆಸಿದ ಕಾಪು ಪೊಲೀಸರು ಬೈಕ್ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೂಳೂರು ನಿವಾಸಿ ಹಳೆ ಆರೋಪಿ ಸೂರಜ್ ಕೋಟ್ಯಾನ್ (೩೧), ಉತ್ತರ ಪ್ರದೇಶ ಮೂಲದ ವ್ಯಕ್ತಿ ಶಾರುಖ್ ಹಸನ್ ಎಂಬವರು ಅನೂಪ್ ಕುಮಾರ್ ಎಂಬವರಿಗೆ ಸೇರಿದ ಪಲ್ಸರ್ ಬೈಕನ್ನು ಕಾಪು ರೆಸಿಡೆನ್ಸಿ ಬಳಿ ರಾತ್ರಿ ನಿಲ್ಲಿಸಿ ಹೋಗಿದ್ದು, ಮರುದಿನ ಬೆಳಗ್ಗೆ

ಮಂಗಳೂರು: ರಿಫೈನರಿ & ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಉಚಿತ ಕೃತಕ ಕೈ ಮತ್ತು ಕಾಲು ಜೋಡಣಾ ಶಿಬಿರ

ಮಂಗಳೂರು ರಿಫೈನರಿ & ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಿಂದ ಜೈಪುರ್ ಪುಟ್ಸ್ ಸಹಯೋಗದೊಂದಿಗೆ ಉಚಿತ ಕೃತಕ ಕೈ ಮತ್ತು ಕಾಲು ಜೋಡಣಾ ಶಿಬಿರವನ್ನು ಹಮ್ಮಿಕೊಂಡಿದ್ದಾರೆ. ಎಂಆರ್‍ಪಿಎಲ್ ಸಂಸ್ಥೆಯ ಉದ್ದಿಮೆಗಳ ಸಾಮಾಜಿಕ ಜವಾಬ್ದಾರಿ ವಿಭಾಗದಿಂದ ಉಚಿತ ಕೃತಕ ಕೈ ಮತ್ತು ಕಾಲು ಜೋಡಣಾ ಶಿಬಿರವನ್ನು ಜೈಪುರ್ ಫುಟ್ಸ್‍ನ ನುರಿತ ತಂತ್ರಜ್ಞರ ನೇತೃತ್ವದಲ್ಲಿ ಅಕ್ಟೋಬರ್ ತಿಂಗಳಲ್ಲಿ ಶಿಬಿರವನ್ನು ಆಯೋಜಿಸಿದ್ದಾರೆ. ಈ ಶಿಬಿರದಲ್ಲಿ ಪಾಲ್ಗೊಳ್ಳಲು

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ನಿಗೆ ವಂಚನೆ ನಡೆಸಿದ ಮಂಜುನಾಥ ಖಾರ್ವಿಗೆ ಜೈಲು ಶಿಕ್ಷೆ

ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಲಿ.ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್‌ ಆದ ಹಿನ್ನೆಲೆಯಲ್ಲಿ ಒಟ್ಟು 88 ಲ.ರೂ. ಪಾವತಿಸುವಂತೆ ನ್ಯಾಯಾಲಯದ ತೀರ್ಪಿನಂತೆ ಹಣ ಮರುಪಾವತಿ ಮಾಡಲು ವಿಫಲನಾದ ಮಂಜುನಾಥ್ ಖಾರ್ವಿ ವಿರುದ್ಧ ವಾರಂಟ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕುಂದಾಪುರ ಪೊಲೀಸರು ಉಪ್ಪುಂದದ ಮನೆಯಲ್ಲಿ ಬಂಧಿಸಿ 5ನೇ ಜೆ ಎಂ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಸೆಪ್ಟೆಂಬರ್ 20 ರಂದು ಹಾಜರು ಪಡಿಸಿದ