Home Articles posted by v4team (Page 2)

ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ

ಸುಬ್ರಹ್ಮಣ್ಯ : ಕನ್ನಡ ಚಲನಚಿತ್ರ ರಂಗದ ಖ್ಯಾತ ನಟಿ ಶ್ರುತಿ ಅವರು ಕುಟುಂಬ ಸಮೇತರಾಗಿ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿದರು. ಶೃತಿ ಅವರೊಂದಿಗೆ ಅವರ ಅಪ್ಪ, ಅಮ್ಮ, ಚಿಕ್ಕಮ್ಮ ಹಾಗೂ ಕುಟುಂಬಸ್ಥರು ಜೊತೆಗಿದ್ದರು. ಶ್ರೀ ದೇವಳದಲ್ಲಿ ಪಂಚಾಮೃತ ಮಹಾಅಭಿಷೇಕ ಸೇವೆ ಸಲ್ಲಿಸಿದರು. ಸತ್ಯನಾರಾಯಣ ಅಸ್ರನ್ನ ಅವರು ತೀರ್ಥ ಹಾಗೂ ಶ್ರೀ ದೇವರ

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಹಿನ್ನಲೆ

ನಗರದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ – ಡ್ರೋನ್ ಹಾಗೂ ಸಿಸಿ ಕ್ಯಾಮರಾ ಮೂಲಕ ನಿಗಾ ಸುಳ್ಯ: ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಹಿನ್ನಲೆಯಲ್ಲಿ ಸುಳ್ಯ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಶಾಂತಿಯುತ ಜಾತ್ರೋತ್ಸವ ನಡೆಸುವ ಉದ್ದೇಶದಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.ಸೂಕ್ಷ್ಮ ಕಣ್ಗಾವಲು ವ್ಯವಸ್ಥೆಯ ಭಾಗವಾಗಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಈ ಬಾರಿ

ವಿಶ್ವದಾಖಲೆ ಸಾಧಕಿ ಕುಮಾರಿ ಶ್ರದ್ದಾ ಶೆಟ್ಟಿ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಭೇಟಿ

ಕೊಕ್ಕಡ:ಲಾಯಿಲ ಗ್ರಾಮದ ಎಣಿಂಜೆ ನಿವಾಸಿ ಶಾರದ ಹಾಗೂ ಶೇಖರ ಶೆಟ್ಟಿ ದಂಪತಿಗಳ ಪುತ್ರಿ, ವಿಶ್ವದಾಖಲೆ ಸಾಧಕಿ ಕುಮಾರಿ ಶ್ರದ್ದಾ ಶೆಟ್ಟಿಯವರು ಜ.06ರಂದು ಶ್ರೀ ಕ್ಷೇತ್ರ ಸೌತಡ್ಕಕ್ಕೆ ಭೇಟಿ ನೀಡಿ, ತನಗೆ ಲಭಿಸಿದ ಪ್ರಶಸ್ತಿಯೊಂದಿಗೆ ದೇವರಿಗೆ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಪ್ರಸ್ತುತ ಉಜಿರೆಯ ಎಸ್.ಡಿ.ಎಂ.ಕಾಲೇಜಿನಲ್ಲಿ ಬಿ.ಇಡಿ ವಿದ್ಯಾಭ್ಯಾಸ ಮಾಡುತ್ತಿರುವ ಶ್ರದ್ದಾ ಶೆಟ್ಟಿಯವರು, ಹವ್ಯಾಸವಾಗಿ ಹೂವಿನ ರಂಗೋಲಿಗಳನ್ನು ಬಿಡಿಸುವ ಕಲೆಯಲ್ಲಿ

ಮೂಡುಬಿದಿರೆ: ಇಬ್ಬರು ಕೃಷಿಕ ಸಾಧಕರಿಗೆ ಮೈಸೂರು ವಿಭಾಗ ಮಟ್ಟದ ಕೃಷಿ ಪುರಸ್ಕಾರ

ದರೆಗುಡ್ಡೆಯ ನಾಗಪ್ಪ ಪೂಜಾರಿಯವರಿಗೆ ‘ಅತ್ಯುತ್ತಮ ಕೃಷಿ ಸಾಧಕ ಪುರಸ್ಕಾರ ಹಾಗೂ ಪುತ್ತಿಗೆ ಗ್ರಾಮದ ಪಾದೆಮನೆ ನಿವಾಸಿ ಗಂಗಯ್ಯ ಗೌಡ ಅವರು ‘ಅತ್ಯುತ್ತಮ ಕೃಷಿ ಕಾರ್ಮಿಕ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಬೆಂಗಳೂರು, ಜಿಲ್ಲಾ ಕೃಷಿಕ ಸಮಾಜ ದಕ್ಷಿಣ ಕನ್ನಡ ಹಾಗೂ ಕೃಷಿ ಇಲಾಖೆಯ ಸಹಯೋಗದೊಂದಿಗೆ, ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಗದ್ದೆಯಲ್ಲಿ ಜನವರಿ 10, 11 ಮತ್ತು 12ರಂದು ನಡೆಯಲಿರುವ

ಸುಳ್ಯ ಶಾಸಕರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ

ಫೇಸ್‌ಬುಕ್ ಪೋಸ್ಟ್‌ಗೆ ಬಿಜೆಪಿ ತೀವ್ರ ಆಕ್ರೋಶ – ಮಂಡಲ ಬಿಜೆಪಿ ಖಂಡನೆ, ಉಗ್ರ ಪ್ರತಿಭಟನೆ ಎಚ್ಚರಿಕೆ ಸುಳ್ಯ : ಸುಳ್ಯದ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀರಾ ಅವಮಾನಕರ ಹಾಗೂ ಅಸಹ್ಯಕರ ಪೋಸ್ಟ್‌ ಹಾಕಿರುವ ಪ್ರಕರಣವನ್ನು ಸುಳ್ಯ ಮಂಡಲ ಬಿಜೆಪಿ ಅತ್ಯಂತ ಕಠಿಣ ಪದಗಳಲ್ಲಿ ಖಂಡಿಸಿದೆ. ಬಿಲ್ಲವ ಸಂದೇಶ್ ಎನ್ನುವ ಫೇಸ್‌ಬುಕ್ ಖಾತೆಯಲ್ಲಿ ಶಾಸಕರಿಗೆ ಶ್ರದ್ಧಾಂಜಲಿ ಸಲ್ಲಿಸಿರುವ ರೀತಿಯಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿರುವುದು

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಸಭೆಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಉಡುಪಿ:ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಇಂದು ದಿನಾಂಕ 06-01-2026 ರಂದು ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನೀಲ್ ಕುಮಾರ್, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ವಿಂಧ್ಯಾ

ಎಂಡಿಎಂಎ ಮಾರಾಟ: ಆರೋಪಿಯ ಬಂಧನ

ಅಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೌಡರ್ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಉಡುಪಿ ಪೊಲೀಸರು ಕರಂಬಳ್ಳಿ ರಾಮಬೆಟ್ಟು ಸಮೀಪ ಬಂಧಿಸಿದ್ದಾರೆ. ಉಡುಪಿ ದೊಡ್ಡಣಗುಡ್ಡೆ ನಿವಾಸಿ ಅಬ್ದುಲ್ ರೌಫ್(26) ಬಂಧಿತ ಆರೋಪಿ. ಈತನಿಂದ 15,000ರೂ. ಮೌಲ್ಯದ 7.59 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಮತ್ತು ಮಾರಾಟ ಮಾಡಿ ಗಳಿಸಿದ್ದ 3100ರೂ. ನಗದು ಮತ್ತು ಆಟೋರಿಕ್ಷಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ 3,23,100ರೂ. ಎಂದು

ಸಾಮರಸ್ಯಕ್ಕೆ ಅಡ್ಡಿಪಡಿಸುವ ಸಾಮಾಜಿಕ ಜಾಲತಾಣ ಪೋಸ್ಟ್:ಓರ್ವ ಆರೋಪಿಯ ಬಂಧನ

ಈ ಬಾರಿಯ ಶಿರೂರು ಮಠದ ಪರ್ಯಾಯ ಮಹೋತ್ಸವದ ಪ್ರಯುಕ್ತ ಹೊರೆಕಾಣಿಕೆ ಅರ್ಪಿಸುವ ಸಂಬಂಧ ರಚಿಸಲಾದ ಉಡುಪಿ ಜಿಲ್ಲಾ ಮುಸ್ಲಿಮ್ ಸೌಹಾರ್ದ ಪರ್ಯಾಯ ಸಮಿತಿ ಬಗ್ಗೆ ಧರ್ಮ, ಜನಾಂಗಗಳ ಮಧ್ಯೆ ದ್ವೇಷವನ್ನು ಉತ್ತೇಜಿಸುವ ಮತ್ತು ಸಾರ್ವಜನಿಕ ಸಾಮರಸ್ಯಕ್ಕೆ ತೊಂದರೆ ಮಾಡುವ ರೀತಿ ಆಕ್ಷೇಪಾರ್ಹ ಬರಹಗಳನ್ನು ಬೆರೆದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ನಿಟ್ಟೆ

ಕೊರಗ ಸಮುದಾಯದ ಯುವ ಜನರಿಗೆ ಸರಕಾರಿ ಉದ್ಯೋಗ ನೇರ ನೇಮಕಾತಿಗೆ ಒತ್ತಾಯಿಸಿ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಳೆದ 23 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ(ರಿ ) ಇವರ ವತಿಯಿಂದ ನಡೆಯುತ್ತಿರುವ ಕೊರಗ ಸಮುದಾಯದ ಯುವ ಜನರಿಗೆ ಸರಕಾರಿ ಉದ್ಯೋಗ ನೇರ ನೇಮಕಾತಿಗೆ ಒತ್ತಾಯಿಸಿ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಮಾನ್ಯ ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಮಂಜುನಾಥ ಭಂಡಾರಿ ಅವರು ಆಗಮಿಸಿ ಅಲ್ಲಿನ ಸಮಸ್ಯೆ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ

ಸಾರ್ವಜನಿಕ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಹಸ್ತಾಂತರ

ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ಹಿಂದೂ ರುದ್ರಭೂಮಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ವತಿಯಿಂದ ಮಂಜೂರಾದ ಸಿಲಿಕಾನ್ ಚೇಂಬರ್ ಅನ್ನು ದಿನಾಂಕ 05.01.2026 ರಂದು ಊರಿನ ಗಣ್ಯರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಯಶಸ್ವಿಯಾಗಿ ಹಸ್ತಾಂತರಿಸಲಾಯಿತು.ಕಾರ್ಯಕ್ರಮದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ ಎಲ್. ರೈ ಅವರು ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ