Home Articles posted by v4team (Page 585)

ಭಾರೀ ಮಳೆಗೆ ಕುಸಿದ ಮೋರಿ : ಹೊಳೆಯ ಪಾಲಾದ ರಸ್ತೆ

ಬೈಂದೂರು ವಿಧಾನಸಭಾ ಕ್ಷೇತ್ರದ, ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಸೂರಕುಂದ ಸಮೀಪದ ಕಲ್ಮಕ್ಕಿಯಲ್ಲಿ ಕಳೆದ 2-3ದಿನಗಳಿಂದ ಸುರಿದ ಭಾರಿ ಮಳೆಗೆ ರಸ್ತೆಗೇ ಅಳವಡಿಸಿದ್ದ ಮೋರಿ ಕುಸಿದು ಸಂಪರ್ಕ ರಸ್ತೆ ಹೊಳೆಯ ಪಾಲಾಗಿದೆ. ಹಲವಾರು ಮನೆಗೆ ಸಂಪರ್ಕವೇ ಇಲ್ಲದಂತಾಗಿದೆ. ಶಾಸಕರಾದ ಸುಕುಮಾರ ಶೆಟ್ಟಿ ಯವರು ಸ್ಥಳಕ್ಕೆ ಆಗಮಿಸಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ, ಪಟ್ಟಣ

ರಕ್ತದಾನದಿಂದ ಪುಣ್ಯ ಪ್ರಾಪ್ತಿ : ರಕ್ತದಾನ ಶಿಬಿರ ಉದ್ಘಾಟಿಸಿ, ನಾಗರಾಜ್ ಶೇಟ್

ಮಂಗಳೂರು :  ದೈವಜ್ಞ ಬ್ರಾಹ್ಮಣರ  ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ದಶಮಾನೋತ್ಸವ ಪ್ರಯುಕ್ತ ರಕ್ತದಾನ ಶಿಬಿರವು ರವಿವಾರ ( 10-07-2022)  ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆಯಿತು. ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಸಮಾಜ ಸೇವಕ, ನೂತನ್ ಗ್ಯಾಸ್ ಡೀಲರ್ ಮಾಲಕ ನಾಗರಾಜ್ ಶೇಟ್ ಅವರು   ರಕ್ತದಾನ ಅತೀ ಶ್ರೇಷ್ಠ ದಾನವಾಗಿದ್ದು, ರಕ್ತದಾನ ಮಾಡುವುದರಿಂದ ಇನ್ನೊಬ್ಬರ ಪ್ರಾಣ ಉಳಿಸ ಬಹುದು. ಇದರಿಂದ ರಕ್ತದಾನ ಮಾಡುವವರಿಗೂ ಪುಣ್ಯ

ಬೆಳ್ಳಾರೆಯ ನೆಟ್ಟಾರು ಎಂಬಲ್ಲಿ ಗುಡ್ಡ ಕುಸಿತ

ಪುತ್ತೂರು -ಬೆಳ್ಳಾರೆ ರಾಜ್ಯ ಹೆದ್ದಾರಿಯ ನೆಟ್ಟಾರ್  ಎಂಬಲ್ಲಿ ಗುಡ್ಡ ಕುಸಿದು ರಾಜ್ಯ ಹೆದ್ದಾರಿಗೆ ಗುಡ್ಡದ ಮಣ್ಣು ಮತ್ತು ಮರ  ಅಪಾಯದ ಅಂಚಿನಲ್ಲಿ ಇರುವುದನ್ನು ಮನಗಂಡು ತಕ್ಷಣ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ಬೆಳ್ಳಾರೆ ಗ್ರಾಮ ಪಂಚಾಯತಿ  ಪಿಡಿಒ ಅನುಸೂಯ, ಲೋಕೋಪಯೋಗಿ ಇಲಾಖೆಯ ಜೂನಿಯರ್ ಇಂಜಿನಿಯರ್ ಪರಮೇಶ್ವರ್, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಜೂನಿಯರ್ ಇಂಜಿನಿಯರ್ ಪ್ರಸಾದ್, ಹಾಗೂ ಪೆರುವಾಜೆ  ಅರಣ್ಯಧಿಕಾರಿ ಪ್ರಸಾದ್  ಗ್ರಾಮಕರಣಿಕರ

ಮೂಡಬೆಳ್ಳೆ ವ್ಯಾಪ್ತಿಯಲ್ಲಿ ಸಂಪೂರ್ಣ ಬೆಳೆ ನಾಶ

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷಿಗದ್ದೆಯಲ್ಲಿ ನೀರು ನಿಂತು ಕಷ್ಟಪಟ್ಟು ಮಾಡಿದ ಸಹಸ್ರಾರು ಎಕ್ರೆ ಕೃಷಿ ನಾಶಗೊಂಡಿದೆ.ಈ ಬಗ್ಗೆ ಮಾತನಾಡಿದ ಉಡುಪಿ ತಾ.ಪಂ. ಮಾಜಿ ಅಧ್ಯಕ್ಷ ದೇವದಾಸ್ ಹೆಬ್ಬಾರ್, ಮಳೆಯ ಆರ್ಭಟಕ್ಕೆ ಕೃಷಿ ಭೂಮಿಯಲ್ಲಿ ನೀರು ನಿಂತು ಬಹಳಷ್ಟು ಖರ್ಚು ಮಾಡಿ ಮಾಡಿದ ನಾಟಿ, ನೀರಿನಡಿಯಲ್ಲಿ ಕೊಳೆಯುತ್ತಿದ್ದು, ಕೃಷಿಕರು ಕಂಗ್ಗಲಾಗಿದ್ದಾರೆ. ಅಳಿವಿನ ಹಂತದಲ್ಲಿರುವ ಕೃಷಿ ಚಟುವಟಿಕೆಗಳನ್ನು ನಡೆಸಿ ಕೈ ಸುಟ್ಟುಕೊಂಡಿರುವ ಕೃಷಿಕರ ನೆರವಿಗೆ

ಸುರತ್ಕಲ್ ಆಪದ್ಭಾಂಧವ ಸಮಾಜ ಸೇವಾ ಸಂಸ್ಥೆಯಿಂದ ಕೂಳೂರು ಮೇಲ್ಸೇತುವೆ ದುರಸ್ತಿಗೆ ಆಗ್ರಹ

ಸುರತ್ಕಲ್: ಕೂಳೂರು ಮೇಲ್ಸೇತುವೆ ದುರಸ್ತಿಗೆ ಒತ್ತಾಯಿಸಿ ಸುರತ್ಕಲ್ ಆಪದ್ಭಾಂಧವ ಸಮಾಜ ಸೇವಾ ಸಂಸ್ಥೆ ಯಿಂದ ಮಂಗಳೂರು ಉತ್ತರ ಸಂಚಾರಿ ಠಾಣಾ ನಿರೀಕ್ಷಕ ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಕಳೆದ ಎರಡು ವಾರಗಳಿಂದ ಗಂಟೆಗೂ ಹೆಚ್ಚು ಕಾಲ ಹೆದ್ದಾರಿ 66ರ ಕೂಳೂರು ಮೇಲ್ಸೇತುವೆಯಲ್ಲಿ ಟ್ರಾಫಿಕ್ ಜಾಂ ಸಂಭವಿಸುತ್ತಿದೆ.ಆಂಬುಲೆನ್ಸ್  ಸಿಲುಕಿಕೊಳ್ಳುತ್ತಿದ್ದು ರೋಗಿಗಳು ಒದ್ದಾಡುವಂತಾಗಿದೆ.ಕೆಲಸಕ್ಕೆ ಹೋಗುವವರಿಗೆ ತೊಂದರೆ ಯಾಗುತ್ತಿದೆ.ಕಳಪೆ

ಮಾರ್ಚ್ ಒಳಗಡೆ ಕಂಬಳಕೂಟ ಮುಕ್ತಾಯಕ್ಕೆ ನಿರ್ಧಾರ

ಮೂಡುಬಿದಿರೆ: 24 ಗಂಟೆಯೊಳಗಡೆ ಕಂಬಳ ಮುಗಿಸುವುದು, ರೆಫ್ರಿಗಳಿಗೆ ಭದ್ರತೆ, ವ್ಯವಸ್ಥಾಪಕರಿಂದ ಸೂಕ್ತ ವ್ಯವಸ್ಥೆ, ಕೋಣಗಳನ್ನು ಕಟ್ಟುವ ವ್ಯವಸ್ಥೆ, ವ್ಯವಸ್ಥಿತ ಕಂಬಳವನ್ನು ಆಯೋಜಿಸುವ ಬಗ್ಗೆ ಹಾಗೂ ನವೆಂಬರ್ ತಿಂಗಳಿನಲ್ಲಿ ಪ್ರಾರಂಭಗೊಳ್ಳುವ ಕಂಬಳಕೂಟಗಳನ್ನು ಕೋಣಗಳ ಆರೋಗ್ಯದ ಹಿತದೃಷ್ಟಿಯಿಂದ ವಿವಿಧ ವಿಚಾರಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ ವರ್ಷದ ಮಾರ್ಚ್ನೊಳಗಡೆ ಮುಕ್ತಾಯಗೊಳಿಸುವ ಕುರಿತು ಸಮಾಜಮಂದಿರದಲ್ಲಿ ನಡೆದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು

ಮರ ಬಿದ್ದು ಸಂಚಾರಕ್ಕೆ ಅಡ್ಡಿ : ಬಂಟ್ವಾಳ-ಮೂಡುಬಿದಿರೆ ಸಂಚಾರಕ್ಕೆ ತೊಡಕು

ಮೂಡುಬಿದಿರೆ: ಇಲ್ಲಿನ ಪುರಸಭೆ ವ್ಯಾಪ್ತಿಯ ಬಿರಾವು ಎಂಬಲ್ಲಿ ಭಾನುವಾರ ಸುರಿದ ಗಾಳಿ ಮಳೆಗೆ ಬೃಹತ್ ಆಲದ ಮರ ಬಿದ್ದು, ಕೆಲ ಸಮಯ ಬಂಟ್ವಾಳ-ಮೂಡುಬಿದಿರೆ ಸಂಚಾರಕ್ಕೆ ತೊಂದರೆಯಾಯಿತು.ಮರ ಬಿದ್ದ ರಭಸಕ್ಕೆ ವಿದ್ಯುತ್ ತಂತಿಗಳು, ಇಂಟರ್ನೆಟ್ ಸಂಪರ್ಕ ತಂತಿಗಳು ಕಡಿದು ಬಿದ್ದಿದ್ದು, ಭಾನುವಾರ ಮಧ್ಯಾಹ್ನದಿಂದ ಬಿರಾವು, ತಾಕೋಡೆ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಯಿತು. ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ಅವರ ಮುತುವರ್ಜಿಯಲ್ಲಿ ಮರವನ್ನು ಒಂದು

ಉಪ್ಪುಂದಲ್ಲಿ ಪ್ರಾಥಮಿಕ ಶಾಲೆ ಕಟ್ಟಡ ಕುಸಿತ

ಕುಂದಾಪುರ: ಬೈಂದೂರು ತಾಲೂಕಿನ ಉಪ್ಪುಂದ ಗ್ರಾ.ಪಂ ವ್ಯಾಪ್ತಿಯ ಅಮ್ಮನವರ ತೊಪ್ಲು ಎಂಬಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಟ್ಟಡ ಕುಸಿದ ಘಟನೆ ವರದಿಯಾಗಿದೆ. ಭಾರೀ ಮಳೆಯ ಹಿನ್ನೆಲೆ ಅಂದಾಜು 15 ವರ್ಷ ಹಿಂದಿನ ಮೂರು ಕೊಠಡಿಗಳುಳ್ಳ ಈ ಕಟ್ಟಡದ ಮೇಲ್ಮಾಡು ಸಹಿತ ಗೋಡೆಗಳು ಕುಸಿದಿದೆ. ಶಾಲೆಗೆ ರಜೆಯಿದ್ದ ಕಾರಣ ಹಾಗೂ ಸಂಜೆಮೇಲೆ ಶಾಲಾ ಕಟ್ಟಡ ಕುಸಿದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಶಿಥಿಲಗೊಂಡಿದ್ದ ಕಟ್ಟಡ.. ಅಮ್ಮನವರ ತೊಪ್ಲು ಭಾಗದ 60 ಕ್ಕೂ ಅಧಿಕ

ಬಂಟ್ವಾಳದ ಮುಕ್ಕುಡದಲ್ಲಿ ಮತ್ತೆ ಭೂಕುಸಿತ

ಬಂಟ್ವಾಳ: ಇತ್ತಿಚೆಗೆ ಭೂ ಕುಸಿತ ಉಂಟಾಗಿ 3 ಮಂದಿ ಕೇರಳ ಮೂಲದ ರಬ್ಬರ್ ಟ್ಯಾಪಿಂಗ್ ಕಾರ್ಮಿಕರು ಮೃತಪಟ್ಟ ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ಮತ್ತೆ ಭೂ ಕುಸಿತ ಉಂಟಾಗಿದೆ. ಇದರಿಂದಾಗಿ ಹೆನ್ರಿ ಕಾರ್ಲೋ ಅವರ ಮನೆಗೆ ಇದ್ದ ರಸ್ತೆ ಸಂಪರ್ಕವೂ ಕಡಿತಗೊಂಡಿದೆ. ಇತ್ತೀಚೆಗೆ ಭೂ ಕುಸಿತ ಆದ ಸಂದರ್ಭ ಗುಡ್ಡ ಬಿರುಕು ಬಿಟ್ಟಿತ್ತು. ಭಾರಿ ಮಳೆಗೆ ಮಣ್ಣು ಮೆದುಗೊಂಡು ಬಿರಿಕು ಬಿದ್ದ ಜಾಗದಿಂದಲೇ ಗುಡ್ಡ ಕುಸಿದಿದೆ

ವಿಪರೀತ ಮಳೆಯಿಂದಾಗಿ ಮನೆಕುಸಿತ : ಬೀದಿಪಾಲಾಗುವ ಪರಿಸ್ಥಿತಿಯಲ್ಲಿ ಬಡ ಕುಟುಂಬ

ಪುತ್ತೂರು : ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮಂಜಲ್ಪಡ್ಪು ಜನತಾ ಕಾಲೋನಿಯ ನಿವಾಸಿ ವಸಂತ ಹೆಗ್ಡೆ ಅವರ ಮನೆ ವಿಪರೀತ ಮಳೆಯಿಂದಾಗಿ ಕುಸಿದು ಬಿದ್ದಿದ್ದು, ಈ ಬಡ ಕುಟುಂಬ ಬೀದಿ ಪಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ವಸಂತ ಅವರ ತಾಯಿ ಅನಾರೋಗ್ಯ ಮತ್ತು ಮಾನಸಿಕ ಪೀಡಿತರಾಗಿದ್ದು, ವಸಂತ ಅವರು ಕೂಲಿ ಕೆಲಸ ಮಾಡಿಕೊಂಡು ಸಂಸಾರದ ನಿರ್ವಹಣೆ ಮಾಡುತ್ತಿದ್ದರು, ಹಂಚು, ಸಿಮೆಂಟು ಶೀಟು ಅಳವಡಿಕೆಯೊಂದಿಗೆ ಸ್ವಲ್ಪಭಾಗ ತಾರಸಿ ಮಾಡಿರುವ ವಸಂತ ಹೆಗ್ಡೆ ಅವರ ಮನೆಯ