ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ರೆವರೆಂಡ್ ಹೆರ್ಮನ್ ಮೊಗ್ಲಿಂಗ್ ಸ್ಮರಣೆ ಕಾರ್ಯಕ್ರಮವು ಮಂಗಳೂರು ಥಿಯೋಲಾಜಿಕಲ್ ಕಾಲೇಜಿನಲ್ಲಿ ನಡೆಯಿತು. ಕನ್ನಡದ ಪ್ರಥಮ ಪತ್ರಿಕೆ ಮಂಗಳೂರ ಸಮಾಚಾರ ಪತ್ರಿಕೆಯ ಸಂಸ್ಥಾಪಕ ಸಂಪಾದಕ ರೆ.ಹೆರ್ಮನ್ ಮೋಗ್ಲಿಂಗ್ ಅವರ ಪ್ರತಿಮೆಗೆ ಮಾಜಿ ಶಾಸಕ ಜೆ.ಆರ್.ಲೊಬೋ ಅವರು ಮಾಲಾರ್ಪಣೆ                         
        ಪುತ್ತೂರಿನ ಹಾರಾಡಿ ಶಾಲೆಯಲ್ಲಿ ಆವರಣಗೋಡೆ ಕುಸಿತ : ಪುತ್ತೂರು ನಗರಸಭೆ ಅಧ್ಯಕ್ಷರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ
              ಭಾರಿ ಮಳೆಗೆ ಪುತ್ತೂರು ನಗರ ಸಭಾ ವ್ಯಾಪ್ತಿಯ ಹಾರಾಡಿ ಸ.ಉ.ಹಿ.ಪ್ರಾ.ಶಾಲೆಯ ಆವರಣಗೋಡೆಯೊಂದು ಕುಸಿದು ಬಿದ್ದಿದೆ. ಘಟನಾ ಸ್ಥಳಕ್ಕೆ ಪುತ್ತೂರು ನಗರಸಭೆ ಅಧ್ಯಕ್ಷರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿದ್ದಾರೆ.ಹಾರಾಡಿಯ ಶಾಲೆಯ ಹಿಂಬದಿಯ ಪ್ರಯಾಣಿಕರ ತಂಗುದಾಣದ ಬಳಿಯಲ್ಲಿರುವ ಆವರಣಗೋಡೆ ಕುಸಿದಿದೆ. ಘಟನಾ ಸ್ಥಳಕ್ಕೆ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ಸ್ಥಳೀಯ ಸದಸ್ಯೆ ಪ್ರೇಮಲತಾ ನಂದಿಲ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಲೋಕೇಶ್ ಅವರು ಭೇಟಿ,ನೀಡಿ                         
        
              ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಭೇಟಿ ನೀಡಿದರು.ಅವರಿಗೆ ಆಶ್ಲೇಷ ವಸತಿ ಗೃಹದ ಎದರು ಭಾಗದಲ್ಲಿ ಗೌರವವಂದನೆ ಸಲ್ಲಿಸಲಾಯಿತು. ಸಚಿವ ಎಸ್. ಅಂಗಾರ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೆÇಲೀಸ್ ಆಯುಕ್ತ ಹೃಷಿಕೇಶ್ ಸೋನಾವಾಣೆ, ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ದ.ಕ ಜಿಲ್ಲಾ ಕಾರ್ಯನಿರ್ವಹಣಾಧಿಕಾರಿ                         
        
              ಕಾಲು ಜಾರಿ ಬಾವಿಗೆ ಬಿದ್ದು ಯುವತಿ ಸಾವನ್ನಪ್ಪಿದ ಘಟನೆ ಕಾಪು ಸಮೀಪದ ಮಡುಂಬು ಎಂಬಲ್ಲಿ ನಡೆದಿದೆ. ಶರ್ಮಿಳಾ ಶೆಟ್ಟಿ(22) ಮೃತ ಪಟ್ಟ ಯುವತಿ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಈಕೆ ಇಂದು ಮುಂಜಾನೆ ತನ್ನ ಊರಿಗೆ ಬಂದಿದ್ದಳು. ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಬಂದ ಕಾಪು ಪೊಲೀಸರು ಸಾರ್ವಜನಿಕರ ನೆರವಿನಲ್ಲಿ ಶವವನ್ನು ಬಾವಿಯಿಂದ ಮೇಲೆತ್ತಿ ಮರಣೋತ್ತರ ಪರೀಕ್ಷೆ ನಡೆಸಿ ವಾರಿಸುದಾರರಿಗೆ ಬಿಟ್ಟು ಕೊಟ್ಟಿದ್ದು ಪ್ರಕರಣ                         
        
              ಕಳೆದ 16 ವರ್ಷಗಳಿಂದ ಮೂತ್ರಪಿಂಡದ ಕಾಯಿಲೆಯಿಂದ ಪಡುಬಿದ್ರಿಯ ಜೀವನ ಕುಮಾರ್ ಎಂಬವರು ಬಳಲುತ್ತಿದ್ದು, ವಾರಕ್ಕೆ ಎರಡು ಬಾರಿಯಂತೆ ಡಯಾಲೀಸಿಸ್ ಮಾಡುತ್ತಾ ಬರುತ್ತಿದ್ದರು. ಇದೀಗ ಅವರು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನೆಪ್ರೋಲಾಜಿ ವಿಭಾಗದಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚಿಕಿತ್ಸೆಗೆ ಅಧಿಕ ವೆಚ್ಚ ತಗುಲಲಿದ್ದು, ಸಹಾಯ ಮಾಡುವ ದಾನಿಗಳ ನಿರೀಕ್ಷೆಯಲ್ಲಿದ್ದಾರೆ. ಜೀವನ್ ಕುಮಾರ್ ಅವರಿಗೆ ಸಹಾಯ ಮಾಡಲಿಚ್ಚಿಸುವವರು Jeevan Kumar                         
        
              ಪುತ್ತೂರು: ನೂಪುರ್ ಶರ್ಮಾ ಬೆಂಬಲಿಗ ರಾಜಸ್ಥಾನದ ಟೈಲರ್ ಕನ್ನಯ್ಯಾ ಲಾಲ್ ಅವರ ಹತ್ಯೆ ಯನ್ನು ಖಂಡಿಸಿ ಹಿಂದು ಜಾಗರಣ ವೇದಿಕೆಯಿಂದ ದರ್ಬೆಯಲ್ಲಿ ರಸ್ತೆಗೆ ಅಡ್ಡವಾಗಿ ಕುಳಿತು ಪ್ರತಿಭಟನೆ ನಡೆಸಿದರು. ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್ , ಅಜಿತ್ ರೈ ಹೊಸಮನೆ, ಚಿನ್ಮಯ್ ಈಶ್ವರಮಂಗಲ, ನರಸಿಂಹ ಮಾಣಿ, ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.                        
        
              ಆಲೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬರುವ ಪಟ್ಟಣದ ಕೊನೆ ಪೇಟೆಯಿಂದ ಕೆಇಬಿ ಸರ್ಕಲ್ ತನಕ ರಸ್ತೆಯ ಎರಡೂ ಬದಿಗಳಲ್ಲಿ ದ್ವಿಚಕ್ರ ವಾಹನ ಹಾಗೂ 4 ಚಕ್ರದ ಲಘು ವಾಹನಗಳಿಗೆ ನಿಗದಿತ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ, ಸಾರ್ವಜನಿಕರು ಹಾಗೂ ಪ್ರತಿನಿತ್ಯ ವಿವಿಧ ಇಲಾಖೆಗಳಿಗೆ ಕರ್ತವ್ಯಕ್ಕೆ ಹಾಜರಾಗುವ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ವಾಹನ ಪಾರ್ಕಿಂಗ್ ಸಮಸ್ಯೆ ದೊಡ್ಡ ತಲೆನೋವಾಗಿದೆ. ಪಟ್ಟಣದ ರಸ್ತೆಯು ಕಿರಿದಾಗಿದ್ದು ರಸ್ತೆಯ ಎರಡೂ ಬದಿಗಳಲ್ಲಿ ಅಗತ್ಯಕ್ಕೆ                         
        ಕಾರ್ಕಳ ಪುರಸಭೆಯ ಸಾಮಾನ್ಯ ಸಭೆ ಬೀದಿ ಬದಿಗಳಲ್ಲಿ ಮೀನು ವ್ಯಾಪಾರ ನಿಷೇಧಿಸಬೇಕು : ಪುರಸಭೆ ಅಧ್ಯಕ್ಷೆ ಸುಮಕೇಶವ್ ಹೇಳಿಕೆ
              ಕಾರ್ಕಳ: ಬೀದಿ ಬದಿಗಳಲ್ಲಿ ಮೀನು ವ್ಯಾಪಾರವನ್ನು ನಿಷೇಧಿಸಬೇಕು, ಇಲ್ಲವೆ ಆಯ್ದ ಜಾಗದಲ್ಲಿ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಲು ಅವಕಾಶ ಇದೆ ಎಂದು ಪುರಸಭೆ ಅಧ್ಯಕ್ಷೆ ಸುಮಕೇಶವ್ ಹೇಳಿದ್ದರೆ.ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿದರು. ಅಶ್ಪಕ್ ಅಹ್ಮದ್ ಮಾತನಾಡಿ, ಮೀನು ಮಾರಾಟ ವ್ಯವಸ್ಥೆ ಕಲ್ಪಿಸಲು ಅವಕಾಶವಿದೆ ಎಂದರು. ಪ್ರತಿಮಾ ರಾಣೆ ಮಾತನಾಡಿ, ಈ ಬಗ್ಗೆ ಅನೇಕ ಬಾರಿ ಚರ್ಚೆ ನಡೆದಿದೆ. ಹೊಟ್ಟೆಪಾಡಿಗಾಗಿ ಬೀದಿ ಬದಿಯಲ್ಲಿ ವ್ಯಾಪಾರ ನಿರ್ವಹಿಸುತ್ತಿದ್ದಾರೆ.                         
        
              ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ “ಸಿವಿಲ್ ಇಂಜಿನಿಯರಿಂಗ್ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ಇತ್ತೀಚಿನ ಪ್ರವೃತ್ತಿಗಳು ಮತ್ತು ಪ್ರಗತಿಗಳು” ಹಾಗೂ “ಮೆಕ್ಯಾನಿಕಲ್ ಇಂಜಿನಿಯರಿಂಗ್, ರೊಬೊಟಿಕ್ಸ್ ಮತ್ತು ಆಟೊಮೇಷನ್ ತಂತ್ರಜ್ಞಾನದಲ್ಲಿ ಇತ್ತೀಚಿನ ಪ್ರಗತಿಗಳು” ವಿಷಯಗಳ ಕುರಿತು ಆಯೋಜಿಸಿದ್ದ ಎರಡು ದಿನಗಳ ರಾಷ್ಟೀಯ ಮಟ್ಟದ ತಾಂತ್ರಿಕ ಸಮ್ಮೇಳನ                         
        
              ಮೂಡುಬಿದಿರೆ: ಬಸ್ ಚಾಲಕ ಮತ್ತು ನಿರ್ವಾಹಕ ನಿರ್ಲಕ್ಷ್ಯದಿಂದಾಗಿ ವಿದ್ಯಾರ್ಥಿನಿಯೋರ್ವಳು ಬಸ್ ನಿಂದ ಕೆಳಗೆ ಜಾರಿ ಬಿದ್ದ ಘಟನೆ ನಿನ್ನೆ ಸಂಜೆ ಮೂಡುಬಿದಿರೆಯ ವಿದ್ಯಾಗಿರಿ ಬಳಿ ನಡೆದಿದೆ. ವಿದ್ಯಾರ್ಥಿನಿ ಸಂಜೆ ಕಾಲೇಜು ಬಿಟ್ಟು ಮನೆಗೆ ತೆರಳುವ ಸಂದರ್ಭ ವಿದ್ಯಾಗಿರಿಯಲ್ಲಿ ಜೀವನ್ ಟ್ರಾವೆಲ್ಸ್ ಎಂಬ ಹೆಸರಿನ ಖಾಸಗಿ ಬಸ್ಸ್ ಗೆ ಹತ್ತಿದ್ದಾಳೆ. ಈಕೆಯಲ್ಲದೆ ಇನ್ನೂ ಕೆಲವು ವಿದ್ಯಾರ್ಥಿಗಳೂ ಹತ್ತಿದ್ದಾರೆ. ಈ ಸಂದರ್ಭ ಬಸ್ ನಿವಾರ್ಹಕ ಕೂಡಾ ಅಲ್ಲೆ ಇದ್ದ ಎಂದು                         
        




















