ಖ್ಯಾತ ಸಂಸ್ಥೆ ಮಾಡರ್ನ್ ಕಿಚನ್ ಇದರ ಪಾಲುದಾರರಾಗಿರುವ ಹಾಗೂ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಅಣ್ಣಪ್ಪ ಪೈ(74) ಅವರು ಬೆಂಗಳೂರಿನಲ್ಲಿ ಬುಧವಾರ ನಿಧನರಾದರು ಅವರು ಪತ್ನಿ ಇಬ್ಬರು ಪುತ್ರರಾದ ಒರೇಕಲ್ ಕಂಪನಿಯ ಅರವಿಂದ ಪೈ, ಡೆಲಿವರಿ ಲಾಜಿಸ್ಟಿಕ್ ನಿರ್ದೇಶಕ ಅಜಿತ್ ಪೈ ಹಾಗೂ ಅಪಾರ ಸಂಖ್ಯೆಯ ಬಂಧುಮಿತ್ರರನ್ನು ಅಗಲಿದ್ದಾರೆ ಗುರುವಾರ ಮಧ್ಯಾಹ್ನ                         
        
              ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆಯಾಗಿದೆ. ಮಂಗಳೂರು ನಗರದ ಹಲವೆಡೆ ರಸ್ತೆಗಳಲ್ಲಿ ಕೃತಕ ನೆರೆ ಉಂಟಾಗಿದೆ. ಕೊಟ್ಟಾರದಲ್ಲಿ ರಾಷ್ಟ್ರೀಯ ಹೆದ್ದಾರಿಗೂ ನೀರು ಬಂದಿದೆ. ಕೊಟ್ಟಾರ ಪ್ರದೇಶದ ಮಾಲೆಮಾರ್, ಕೋಡಿಕಲ್ ಏರಿಯಾದಲ್ಲಿ ರಸ್ತೆಯಲ್ಲಿ ಭಾರೀ ಪ್ರಮಾಣದ ನೀರು ಹರಿದಿದ್ದು ಹಲವಾರು ಮನೆಗಳಿಗೆ ಮಳೆ ನೀರು ನುಗ್ಗಿದೆ. ನೀರುಮಾರ್ಗದ ಬಳಿಯ ಬದಿನಡಿ ಎಂಬಲ್ಲಿ ದೇವಸ್ಥಾನದ ಅಂಗಣ ಪೂರ್ತಿ ನೀರಿನಲ್ಲಿ ಮುಳುಗಿದೆ. ರಾತ್ರಿಯಿಡೀ ಭಾರೀ ಮಳೆಯಾಗಿದ್ದರಿಂದ                         
        
              ಕೊಲೆಗೆ ಸ್ಕೆಚ್ ಹಾಕಿದ್ದಾರೆಂದು ಸುದ್ದಿಯಾಗಿದ್ದ ಬೆಂಗಳೂರಿನ ಉದ್ಯಮಿ, ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸೋದರ ಗುಣರಂಜನ್ ಶೆಟ್ಟಿ ಅವರನ್ನು ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಕರೆಸಿ ವಿಚಾರಣೆ ನಡೆಸಲಾಗಿದೆ. ಕೊಲೆಗೆ ಸ್ಕೆಚ್ ವಿಚಾರದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಗೃಹ ಇಲಾಖೆಯಿಂದ ಹೊಣೆ ನೀಡಲಾಗಿದೆ. ಹೀಗಾಗಿ ಮಂಗಳೂರು ಕಮಿಷನರ್ ಕಚೇರಿಗೆ ಗುಣರಂಜನ್ ಶೆಟ್ಟಿ ಅವರನ್ನು ಕರೆಸಿ ಸಿಸಿಬಿ ಇನ್ಸ್ ಪೆಕ್ಟರ್                         
        
              ಪುತ್ತೂರು: ದೇಶದಲ್ಲಿ ಇಂದಿರಾಗಾಂಧಿ ಹೇರಿದ ತುರ್ತುಪರಿಸ್ಥಿತಿ ಜನತೆಗೆ ಕರಾಳವಾಗಿರಲಿಲ್ಲ ಎಂದು ಕಾಂಗ್ರೇಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಹೇಳಿದರು.ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿರೋಧ ಪಕ್ಷವಾದ ಬಿಜೆಪಿ ದೇಶದ ಉಕ್ಕಿನ ಮಹಿಳೆ ಎಂದೇ ಕರೆಯಲ್ಪಡುವ ಇಂದಿರಾ ಗಾಂಧಿ ಹೇರಿದ ತುರ್ತುಪರಿಸ್ಥಿತಿಯನ್ನು ಕರಾಳದಿನ ಎಂದು ಬಿಂಬಿಸುತ್ತಿದೆ. ಆದರೆ ಅದು ಕರಾಳದಿನವಾಗಿರಲಿಲ್ಲ. ಇಂದಿರಾ ಗಾಂಧಿ ಸರಕಾರ ಉರುಳಿದ                         
        
              ಮೂಡುಬಿದಿರೆ : ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಬೇಡಿಕೆಯಿರಿಸಿ ಜು 1ರಿಂದ ರಾಜ್ಯಾದಂತ ಪೌರಕಾರ್ಮಿಕರು ಅನಿರ್ಧಿಷ್ಠಾವಧಿ ಮುಷ್ಕರ ನಡೆಸುವುದರಿಂದ ಕಸ ಸಂಗ್ರಹಣೆ ಮತ್ತು ವಿಲೇವಾರಿಗೆ ನಮ್ಮಲ್ಲೂ ಸಮಸ್ಯೆಯಾಗಲಿದೆ ಆದ್ದರಿಂದ ಪ್ರತೀ ವಾರ್ಡ್ ಮಟ್ಟದಲ್ಲಿ ಪೌರಕಾರ್ಮಿಕ ವೃತ್ತಿ ಮಾಡುವವರನ್ನು ಗುರುತಿಸಿ ತಾತ್ಕಾಲಿಕವಾಗಿ ನೇಮಿಸಿದರೆ ಉತ್ತಮ ಎಂದು ಪರಿಸರ ಇಂಜಿನಿಯರ್ ಶಿಲ್ಪಾ ಸಲಹೆ ನೀಡಿದರು. ಅವರು ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ                         
        
              ಮೂಡುಬಿದಿರೆ : ಭಾರತೀಯ ಜನತಾಪಾರ್ಟಿ ಯುವಮೋರ್ಚಾ ಮೂಲ್ಕಿ ಮೂಡುಬಿದಿರೆ ಮಂಡಲದ ವತಿಯಿಂದ ದರೆಗುಡ್ಡೆಯ ಸಿರಿಸಂಪದ ಫಾರ್ಮ್ನಲ್ಲಿ ಜು.3ರಂದು ಕೆಸರ್‍ಡೊಂಜಿ ಕಮಲದಿನ ಎಂಬ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ಶಾಸಕ ಉಮಾನಾಥ ಕೋಟ್ಯಾನ್ ಮತ್ತು ಮಂಡಲಾಧ್ಯಕ್ಷ ಸುನಿಲ್ ಆಳ್ವ ತಿಳಿಸಿದರು. ಬಿಜೆಪಿ ಕಛೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಪಕ್ಷ ಸಂಘಟನೆ, ಬಲವರ್ಧನೆ ಹಾಗೂ ಕಾರ್ಯಕರ್ತರಲ್ಲಿ ಬಾಂಧವ್ಯ ವೃದ್ಧಿಸುವ                         
        
              ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ಮತ್ತು ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಕುದ್ರೋಳಿ ವತಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿದ ಕುದ್ರೋಳಿಯ 6 ವಿದ್ಯಾರ್ಥಿಗಳಿಗೆ ಕುದ್ರೋಳಿಯ ಫಾತಿಮಾ ಇಸ್ಲಾಮಿಕ್ ಸೆಂಟರ್‍ನಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮ ಆಯಿಷಾ ಸಫಾ ಅವರ ಪವಿತ್ರ ಕುರ್ ಆನ್ ಪಠಣದೊಂದಿಗೆ ಆರಂಭಗೊಂಡಿತು. ನಂತರ ಎಸ್ ಐ ಓ ಮಂಗಳೂರು ನಗರ ಅಧ್ಯಕ್ಷರಾದ                         
        
              ಭಟ್ಕಳ:- ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಪುರಸಭೆ ಆಡಳಿತ ತೆಗೆದುಕೊಂಡ ನಿರ್ಧಾರದಿಂದ ಇದೀಗ ಭಾಷಾ ವಿವಾದ ಕಾರವಾರದಿಂದ ಭಟ್ಕಳದ ಗಡಿಯವರೆಗೂ ತಲುಪಿದೆ.ಪುರಸಭಾ ಕಾರ್ಯಾಲಯದ ಕಟ್ಟಡದಲ್ಲಿ ಉರ್ದು ನಾಮಫಲಕ ಅಳವಡಿಸುವುದನ್ನು ವಿರೋಧಿಸಿ ಸೋಮವಾರ ಕನ್ನಡ ಹಾಗೂ ಹಿಂದೂ ಸಂಘಟನೆಗಳು ಪುರಸಭೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.ಪುರಸಭೆ ಕಟ್ಟಡಕ್ಕೆ ಹೊಸದಾಗಿ ಬಣ್ಣ ಬಳಿದ ನಂತರ ಸೋಮವಾರ ಪುರಸಭೆ ಎದುರು ನಾಮಫಲ ಅಳವಡಿಸಲು ಗುತ್ತಿಗೆದಾರ ಸಿದ್ದತೆ                         
        
              ಬಂಟ್ವಾಳ: ಸಜೀಪನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿರುವ ಬಂಟ್ವಾಳ ಪುರಸಭೆಯ ತ್ಯಾಜ್ಯ ಸಂಸ್ಕರಣ ಘಟಕದ ಗೇಟಿಗೆ ಮಂಗಳೂರು ಶಾಸಕ ಯು.ಟಿ.ಖಾದರ್ ಅವರು ಬೀಗ ಜಡಿದಿದ್ದಾರೆ. ತ್ಯಾಜ್ಯ ಸಂಸ್ಕರಣ ಘಟಕದಲ್ಲಿ ಒಣಕಸ ಮಾತ್ರ ಹಾಕಬೇಕು ಎನ್ನುವ ಸೂಚನೆಯನ್ನು ತಿರಸ್ಕರಿಸಿ ಹಸಿ ತ್ಯಾಜ್ಯಗಳನ್ನು ಹಾಕಿದ್ದ ಪರಿಣಾಮ ತ್ಯಾಜ್ಯಗಳು ಮಳೆ ನೀರಿಗೆ ಕೊಳೆತು ದುರ್ನಾತ ಬೀರಿ ಪರಿಸರವನ್ನು ಕಲುಷಿತಗೊಳಿಸಿತ್ತು. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ತಪ್ಪಿದ್ದಲ್ಲಿ ಜಿಲ್ಲಾಧಿಕಾರಿ                         
        
              ರಾಜಸ್ಥಾನದ ಉದಯಪುರದಲ್ಲಿ ಹಿಂದು ಯುವಕನ ಶಿರಚ್ಛೇದ ಘಟನೆ ಮಾನವೀಯತೆಗೆ ಸವಾಲಾದ ಪ್ರಕರಣ. ಕೃತ್ಯದ ಹಿಂದೆ ವ್ಯವಸ್ಥಿತ ಸಂಚಿದೆ, ಭಯೋತ್ಪಾದಕ ಕೃತ್ಯ. ದೇಶದಲ್ಲಿ ಐಸಿಸ್, ತಾಲಿಬಾನ್ ಮಾನಸಿಕತೆ ತಲೆ ಎತ್ತುತ್ತಿರುವುದಕ್ಕೆ ಇದು ನಿದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿ ಕಾರಿದ್ದಾರೆ. ಇದೇ ಮಾದರಿಯ ಹತ್ಯೆ ಶಿವಮೊಗ್ಗದಲ್ಲೂ ನಡೆದಿತ್ತು. ಹಿಂದು ಕಾರ್ಯಕರ್ತ ಹರ್ಷನ ಕತ್ತು ಕೊಯ್ದು ಅದರ ವಿಡಿಯೋವನ್ನು ಆತನ ಸೋದರಿಗೆ ಕಳಿಸಲಾಗಿತ್ತು.                         
        
















