Home Articles posted by Laxman Suvarna (Page 3)

ರೋಗರುಜಿನಗಳಿಂದ ರಕ್ಷಣೆಗಾಗಿ ‘ತಪ್ತ ಮುದ್ರಾಧಾರಣೆ’ : ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಮುದ್ರಾಧಾರಣೆಗೆ ಮುಂದಾದ ಭಕ್ತರು

ಉಡುಪಿ: ಮಳೆಗಾಲ ಬಂತು ಅಂದರೆ ನಾನಾ ರೋಗರುಜಿನಗಳ ಆಗಮನವಾಯಿತೆಂದೇ ಅರ್ಥ. ಈ ಸಮಯದಲ್ಲಿ ಒಂದಲ್ಲ ಒಂದು ರೀತಿಯ ರೋಗಕ್ಕೆ ತುತ್ತಾಗುವುದು ಸಾಮಾನ್ಯ. ಆದರೆ ಮಳೆಗಾಲದಲ್ಲಿ ಬರಬಹುದಾದ ರೋಗರುಜಿನಗಳಿಂದ ರಕ್ಷಣೆಯ ಸಲುವಾಗಿ ತಪ್ತ ಮುದ್ರಾಧಾರಣೆ ಮಾಡುವ ಎಂಬ ನಂಬಿಕೆಯಿದೆ. ಮುದ್ರಾಧಾರಣೆಯನ್ನು ಚಾತುರ್ಮಾಸ್ಯದ ಮೊದಲ ದಿನ ಸರ್ವೈಕಾದಶಿಯಂದೇ ನಡೆಸಲಾಗುತ್ತದೆ. ಈ ಸಲುವಾಗಿ

ಉಡುಪಿಯಲ್ಲಿ ಸಂಭ್ರಮದ ಈದ್-ಅಲ್-ಅಧಾ ಆಚರಣೆ

ಉಡುಪಿ : ಕರಾವಳಿಯ ಮುಸ್ಲಿಮರು ಇಂದು ಅತ್ಯಂತ ಸಡಗರ, ಸಂಭ್ರಮದಿಂದ ಈದ್-ಅಲ್-ಅಧಾ ಆಚರಿಸುತ್ತಿದ್ದು, ಹಲವೆಡೆ ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದೆ. ಉಡುಪಿ ನಗರದ ಜುಮಾ ಮಸೀದಿಯಲ್ಲಿ ಸಾಮೂಹಿಕ ನಮಾಝ್, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿಯ ಮೂಲಕ ಹಬ್ಬಕ್ಕೆ ಸಂಭ್ರಮ ತಂದರು. ಇನ್ನೂ ಕೆಲವೆಡೆ ಮಳೆಯ ನಡುವೆ ಪ್ರಾರ್ಥನೆ ಸಲ್ಲಿಸಲಾಗಿದೆ. ಈ ನಡುವೆ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇದನ್ನು

ರಸ್ತೆಯಲೆಲ್ಲಾ ಡೀಸೆಲ್ ಚೆಲ್ಲಿ ವಾಹನ ಸವಾರರ ಪರದಾಟ

ಉಡುಪಿ: ರಸ್ತೆಯಲ್ಲಿ ಡೀಸೆಲ್ ಚೆಲ್ಲಿದ ಪರಿಣಾಮ ವಾಹನಗಳು ಸ್ಕಿಡ್ ಆದ ಘಟನೆ ಉಡುಪಿ ನಗರದ ಸಿಟಿ ಬಸ್ ತಂಗುದಾಣದ ಬಳಿ ಬುಧವಾರ ರಾತ್ರಿ ನಡೆದಿದೆ. ಕಲ್ಸಂಕದಿಂದ ಉಡುಪಿಯತ್ತ ತೆರಳುತ್ತಿದ್ದ ಟ್ರಕ್ ಒಂದರಿಂದ ರಸ್ತೆಯ ಮೇಲೆ ಡೀಸೆಲ್ ಚೆಲ್ಲಲ್ಪಟ್ಟಿದೆ. ಈ ವೇಳೆ ಉಡುಪಿಯತ್ತ ತೆರಳುತ್ತಿದ್ದ ದ್ವಿಚಕ್ರ ವಾಹನಗಳು ಸ್ಕಿಡ್ ಆದ ಘಟನೆ ನಡೆದಿದೆ. ಸುಮಾರು 15ರಿಂದ 20 ರಷ್ಟು ದ್ವಿಚಕ್ರ ವಾಹನಗಳು ಸ್ಕಿಡ್ ಆಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ

ಉಡುಪಿಯ ಇನ್ಸ್ ಪಾಯರ್ ನೀಟ್ ಅಕಾಡೆಮಿಯಲ್ಲಿ ಜೂಲೈ 1 ರಿಂದ ತರಗತಿಗಳು ಪ್ರಾರಂಭ

ಉಡುಪಿ : ನೀಟ್, ಸಿಇಟಿ ಮತ್ತು ಜೆಇಇ ಕೋರ್ಸ್ಗಳ ಅತ್ಯುತ್ತಮ ತರಬೇತಿಯನ್ನು ನೀಡುವ ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ಕಾಪೌಂಡ್‌ನಲ್ಲಿರುವ ನೂತನವಾಗಿ ಆರಂಭಗೊಂಡ ‘ಇನ್ಸ್ ಪಾಯರ್ ನೀಟ್ ಅಕಾಡೆಮಿ’ಯಲ್ಲಿ ತರಗತಿಗಳು ಜುಲೈ 01, 2023 ರಂದು ಪ್ರಾರಂಭವಾಗಲಿದೆ. ಇಲ್ಲಿ ನೀಟ್ ದೀರ್ಘಾವಧಿಯ ಕೋರ್ಸ್ಗಳು ನೀಟ್, ಸಿಇಟಿ, ಜೆಇಇ ನಿಯಮಿತ ವಾರಾಂತ್ಯದ ಬ್ಯಾಚ್ ಲಭ್ಯವಿದೆ. ಕರ್ನಾಟಕ ಮತ್ತು ಹೊಸದಿಲ್ಲಿಯ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ 16 ವರ್ಷಗಳ ಕಾಲ ಬೋಧನಾ

ವಸತಿ ಸಮುಚ್ಚಯದ ಫ್ಲಾಟ್ ಮಾರಾಟದಲ್ಲಿ ಕೋಟ್ಯಂತರ ರೂಪಾಯಿ ವಂಚನೆಯ ಆರೋಪ : ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಸ್ಪಷ್ಟನೆ

ಉಡುಪಿ : “ವೈಜ‌ರ್” ವಸತಿ ಸಮುಚ್ಚಯದ ಫ್ಲಾಟ್ ಮಾರಾಟದಲ್ಲಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ವಿವಾದಕ್ಕೆ ಸಂಬಂಧಿಸಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಸತಿ ಸಮುಚ್ಚಯ ನಿರ್ಮಾಣಕ್ಕಾಗಿ ಬ್ಯಾಂಕಿನಿಂದ 5.4 ಕೋಟಿ ಸಾಲ ಪಡೆದುಕೊಂಡಿದ್ದು, ಈವರೆಗೆ ನಾನು 6 ಕೋಟಿ ರೂ. ಬ್ಯಾಂಕಿಗೆ ಪಾವತಿಸಿದ್ದೇನೆ. ಇದೀಗ ಬ್ಯಾಂಕ್ ಮತ್ತೆ 5 ಕೋಟಿ ರೂ. ಸಾಲ ಇದೆ ಎಂಬುದಾಗಿ ಹೇಳುತ್ತಿದೆ. ಈ ಬಗ್ಗೆ 2.5 ಕೋಟಿ ರೂ.

ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ : “ವಿದ್ಯಾರ್ಥಿಗಳು ಸಹ ಸಲಹೆಗಾರರಾಗಿ” ಒಂದು ದಿನದ ಕಾರ್ಯಾಗಾರ

ಉಡುಪಿ : ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ, ವಿಕಲ ಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಪೊಲೀಸ್ ಇಲಾಖೆ ಉಡುಪಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ, ಜಿಲ್ಲಾ ಆಸ್ಪತ್ರೆ ಉಡುಪಿ, ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ, ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್

ಯಕ್ಷಸುಮ ತೋನ್ಸೆ ಜಯಂತ್ ಕುಮಾರ್ ಸ್ವರ್ಗಸ್ಥ

ಉಡುಪಿ : ಕರಾವಳಿಯ ಹೆಮ್ಮೆಯ ಕಲೆ ಯಕ್ಷಗಾನದ ಪ್ರತಿಭಾನ್ವಿತ ಕಲಾವಿದರಾಗಿ ಸಾಕಷ್ಟು ಸಾಧನೆಗಳೊಂದಿಗೆ ಪ್ರಸಿದ್ದರಾಗಿದ್ದ, ತೋನ್ಸೆ ಜಯಂತ್ ಕುಮಾರ್ (77) ಇಂದು ಬೆಳಗಿನ ಜಾವ ಸ್ವರ್ಗಸ್ಥರಾಗಿದ್ದಾರೆ. ಇವರು ಯಕ್ಷಗಾನದ ಸಾಂಪ್ರದಾಯಿಕ ಮೌಲ್ಯಗಳ ಉಳಿಯುವಿಕೆಗೆ ಸಮಗ್ರವಾಗಿ ಶ್ರಮಿಸಿದ್ದು ಯಕ್ಷಗುರುಗಣ್ಯರಾಗಿ ಗೌರವಾಭಿಮಾನಗಳಿಂದ ಗುರುತಿಸಿಕೊಂಡಿದ್ದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸಂಚಾರಿ ಯಕ್ಷಗಾನ ಭಂಡಾರ ತೋನ್ಸೆ ಕಾಂತಪ್ಪ ಮಾಸ್ಟರ್ ‌ರವರ ಸುಪುತ್ರರಾಗಿ

ಫ್ಲ್ಯಾಟ್‌ ಮಾರಾಟ ಮಾಡುವುದಾಗಿ ಕೋಟ್ಯಂತರ ರೂಪಾಯಿ ವಂಚನೆ : ತಲೆಮರೆಸಿಕೊಂಡ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ

ಉಡುಪಿ: ಫ್ಲ್ಯಾಟ್‌ ಮಾರಾಟ ಮಾಡುವುದಾಗಿ ಒಪ್ಪಂದ ಮಾಡಿಕೊಂಡು ಬಳಿಕ ಹಲವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣ ಉಡುಪಿಯಲ್ಲಿ ನಡೆದಿದೆ. ಈ ಸಂಬಂಧ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಫ್ಲ್ಯಾಟ್ ಗಾಗಿ ಹಣ ನೀಡಿದವರು ಕಣ್ಣೀರು ಹಾಕುತ್ತಿದ್ದಾರೆ. ಉಡುಪಿ ನಗರದ ಶ್ರೀ ಲಕ್ಷ್ಮೀ ಇನ್ಪ್ರಾಸ್ಟ್ರಕ್ಚರ್‌ನ ಮಾಲಕ, ಆರೋಪಿ ಅಮೃತ್‌ ಶೆಣೈ “ವೈಜರ್‌ ” ಹೆಸರಿನ

ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ : ಜೂನ್ 26 ರಂದು ‘ವಿದ್ಯಾರ್ಥಿಗಳು ಸಹ ಸಲಹೆಗಾರರಾಗಿ’ ಮಾಹಿತಿ ಕಾರ್ಯಾಗಾರ

ಉಡುಪಿ: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆರೋಗ್ಯ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಸೇರಿದಂತೆ ವಿವಿಧ ಸಂಘ-ಸಂಸ್ಥೆ, ಇಲಾಖೆಗಳ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಪ್ರಯುಕ್ತ ‘ವಿದ್ಯಾರ್ಥಿಗಳು ಸಹ ಸಲಹೆಗಾರರಾಗಿ’ ಮಾಹಿತಿ ಕಾರ್ಯಾಗಾರ ಜೂನ್ 26 ರ ಸೋಮವಾರದಂದು ಬೆಳಗ್ಗೆ 10 ಗಂಟೆಗೆ ಮಣಿಪಾಲ ಡಿಸಿ ಕಚೇರಿ ಸಭಾಂಗಣದಲ್ಲಿ ಜರಗಲಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯ ಡಾ.

“ಮೊಗಲ್ ದೊರೆ ದಂಡೆತ್ತಿ ಬಂದದ್ದು ಮುಖ್ಯವಲ್ಲ, ಶಿವಾಜಿ ದೇಶದ ಸಮಗ್ರತೆ ಕಾಪಾಡಿದ್ದು ಮುಖ್ಯ” : ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಜೂನ್ 22 ರಂದು ಉಡುಪಿಯ ಕಿದಿಯೂರು ಹೋಟೆಲ್ ನ ಶೇಷಶಯನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನಿಮಗೆ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲು ಯಾರು ಕೇಳಿದ್ರು? ಶಿಕ್ಷಣ ಸಂಸ್ಥೆ, ಪಾಲಕರು,