HomeFresh Newsರಾಮ ಮಂದಿರ ಉದ್ಘಾಟನೆಗೆ ಬರಬೇಡಿ: ಅಡ್ವಾಣಿ, ಜೋಶಿಯವರಿಗೆ ಮಂದಿರ ಟ್ರಸ್ಟ್ ಮನವಿ

ರಾಮ ಮಂದಿರ ಉದ್ಘಾಟನೆಗೆ ಬರಬೇಡಿ: ಅಡ್ವಾಣಿ, ಜೋಶಿಯವರಿಗೆ ಮಂದಿರ ಟ್ರಸ್ಟ್ ಮನವಿ

ರಾಮ ಮಂದಿರ ಉದ್ಘಾಟನೆಗೆ ದಯವಿಟ್ಟು ಬರಬೇಡಿ ಎಂದು ರಾಮ ಮಂದಿರ ಹೋರಾಟದ ಪ್ರಮುಖರು ಮತ್ತು ಬಿಜೆಪಿ ನಾಯಕರಾಗಿದ್ದ ಲಾಲ್ ಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿಯವರಿಗೆ ರಾಮ ಮಂದಿರ ಟ್ರಸ್ಟ್.

ಇದು ಸ್ವಲ್ಪ ವಿವಾದಕ್ಕೆ ಕಾರಣವಾಗುತ್ತಲೇ ರಾಮ ಮಂದಿರ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಅವರು ಇಬ್ಬರು ಹಿರಿಯರೂ ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಲಕ್ಷಗಟ್ಟಲೆ ಜನರು ಸೇರುವ ತಾಣದಲ್ಲಿ ಅವರನ್ನು ನೋಡಿಕೊಳ್ಳಲು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಆಗಮಿಸದಂತೆ ಮನವಿ ಮಾಡಲಾಗಿದೆ. ಆ ಹಿರಿಯರೂ ಒಪ್ಪಿಕೊಂಡಿದ್ದಾರೆ ಎಂದು ಸಮಜಾಯಿಸಿ ನೀಡಿದ್ದಾರೆ.
ಅಡ್ವಾಣಿಯವರಿಗೆ 96 ವರುಷ ಆಗಿದೆ; ಜೋಶಿಯವರು 90ರ ಹರೆಯದಲ್ಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments