HomeFresh Newsಬಿ.ಸಿ. ರೋಡ್‌ನಲ್ಲಿ ಯುವತಿಯ ಹ*ತ್ಯೆ ಕೇಸ್: ಇಲಿಪಾಷಣ ಸೇವಿಸಿದ ಆರೋಪಿ : ಎಸ್ಪಿ ಡಾ. ಅರುಣ್...

ಬಿ.ಸಿ. ರೋಡ್‌ನಲ್ಲಿ ಯುವತಿಯ ಹ*ತ್ಯೆ ಕೇಸ್: ಇಲಿಪಾಷಣ ಸೇವಿಸಿದ ಆರೋಪಿ : ಎಸ್ಪಿ ಡಾ. ಅರುಣ್ ಕುಮಾರ್ ಮಾಹಿತಿ

ಮಂಗಳೂರು: ಬಿ.ಸಿ ರೋಡಿನಲ್ಲಿ ನಡೆದ ಯುವತಿಯೊಬ್ಬಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಶುಕ್ರವಾರ ಬೆಳಗ್ಗೆ ಮಂಗಳೂರಿನಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.

ಗುರುವಾರ ಸಂಜೆ 21 ವರ್ಷದ ಯುವತಿಯೊಬ್ಬಳನ್ನು ಯುವಕನೊಬ್ಬ ತಲವಾರು ಮೂಲಕ ದಾಳಿ ನಡೆಸಿ ಕೊಲೆ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು, ವಿಶೇಷ ಪೊಲೀಸ್ ತಂಡ ರಚಿಸುವ ಮೂಲಕ ಆರೋಪಿಯನ್ನು ಪತ್ತೆ ಹಚ್ಚಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ವಿಚಾರಣೆ ವೇಳೆ ಆತ ಇಲಿಪಾಷಾಣ ಸೇವಿಸಿರುವುದಾಗಿ ಹೇಳಿದ್ದು, ಆತನನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂದೆ ಅಗತ್ಯ ಕಾನೂನು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments