ಚಿನ್ನದ ವ್ಯಾಪಾರಿಯನ್ನು ದರೋಡೆಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಆರೋಪಿಗಳ ಗುರುತು ಪತ್ತೆಹಚ್ಚಿದ್ದು ಬಂಧನಕ್ಕಾಗಿ ಕೇರಳ ಮತ್ತು ಕೊಡಗಿನಲ್ಲಿ ಬಲೆ ಬೀಸಿದ್ದಾರೆ. ಇದೇ ವೇಳೆ, ಕೃತ್ಯದಲ್ಲಿ ಭಾಗಿಯಾದ ನಟೋರಿಯಸ್ ಆರೋಪಿಗಳ ಫೋಟೋ ಬಿಡುಗಡೆ ಮಾಡಿದ್ದು ಇವರ ಪತ್ತೆಗಾಗಿ ಸಾರ್ವಜನಿಕರ ಸಹಾಯ ಯಾಚಿಸಿದ್ದಾರೆ.

ದರೋಡೆಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಆರೋಪಿಗಳ ಗುರುತು ಪತ್ತೆಹಚ್ಚಿದ್ದು ಬಂಧನಕ್ಕಾಗಿ ಕೇರಳ ಮತ್ತು ಕೊಡಗಿನಲ್ಲಿ ಬಲೆ ಬೀಸಿದ್ದಾರೆ. ಇದೇ ವೇಳೆ, ಕೃತ್ಯದಲ್ಲಿ ಭಾಗಿಯಾದ ನಟೋರಿಯಸ್ ಆರೋಪಿಗಳ ಫೋಟೋ ಬಿಡುಗಡೆ ಮಾಡಿದ್ದು ಇವರ ಪತ್ತೆಗಾಗಿ ಸಾರ್ವಜನಿಕರ ಸಹಾಯ ಯಾಚಿಸಿದ್ದಾರೆ.
ಪಾಂಡಿಚೇರಿ ಮೂಲದ ಶಿಬಿನ್ ಗಂಗಾಧರನ್ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಎನ್ನಲಾಗಿದ್ದು ಆತನದ್ದು ಸೇರಿ ಒಟ್ಟು 14 ಮಂದಿ ಆರೋಪಿಗಳ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ಕೇರಳದ ವಿವಿಧ ಜಿಲ್ಲೆಗಳಿಗೆ ಸೇರಿದ ಶ್ರೀರಾಗ್, ಅತುಲ್, ಮಿಥುನ್‌ಲಾಲ್, ಅಜೀರ್ ತರಾಯಿಲ್, ವೈಶಾಕ್, ಅಸೀರ್ ಪಯ್ಯನ್ನೂರ್, ಪ್ರಣವ್, ವಿಜಿಲ್ ಅಂಜರಕಂಡಿ, ಕೊಡಗಿನ ಉಬೈದ್, ಫಿರೋಜ್, ಮೊಯ್ದು ಅಬ್ಬಾಸ್, ಜಿಯಾದ್, ಜಮೀರ್ ಅಲಿಕಾ ಎಂಬವರು ಆರೋಪಿಗಳು ಎಂದು ಗುರುತಿಸಲಾಗಿದೆ.
ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿರುವ ಕಾರಣ ಆರೋಪಿಗಳ ಬಂಧನಕ್ಕೆ ಸಹರಿಸುವಂತೆ ಮಂಗಳೂರು ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ, ಆರೋಪಿಗಳ ಬಗ್ಗೆ ಮಾಹಿತಿ ನೀಡುವವರಿಗೆ ಬಹುಮಾನ ನೀಡಲಾಗುವುದು. ಅವರ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದ್ದಾರೆ.

