ಬೈಲೂರು : ಬಿಲ್ಲವ ಸಮಾಜ ಸೇವಾ ಸಂಘದ 5ನೇ ವರ್ಷದ ವರ್ಧಂತಿ ಮಹೋತ್ಸವ
ಕಾರ್ಕಳ ತಾಲೂಕಿನ ಬೈಲೂರು ಬಿಲ್ಲವ ಸಮಾಜ ಸೇವಾ ಸಂಘದ 5ನೇ ವರ್ಷದ ವರ್ಧಂತಿ ಮಹೋತ್ಸವ ಕಾರ್ಯಕ್ರಮ ಅಧ್ಯಕ್ಷರಾದ ಸುರೇಂದ್ರ ಪೂಜಾರಿಯವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ತುಳು ರಂಗಭೂಮಿ ಕಲಾವಿದ ಭೋಜರಾಜ್ ವಾಮಂಜೂರ್,ಮಹಾಮಂಡಲದ ಕೋಶಾಧಿಕಾರಿ ಗಣೇಶ್ ಪೂಜಾರಿ,ಸತೀಶ್ ಪೂಜಾರಿ ಹಾಗೂ ಬೈಲೂರಿನ ಸಮಾಜ ಬಂದವರು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಮಾರ್ಚ್ 10ರಂದು ಮುಲ್ಕಿಯಲ್ಲಿ ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
ರಜತ ಮಹೋತ್ಸವದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಂದವರು ಪಾಲ್ಗೊಳ್ಳಬೇಕಾಗಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರು ವಿನಂತಿಸಿದರು.