ಬೈಂದೂರು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ
ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಹಾಗೂ ತಲ್ಲೂರು ಸರಕಾರಿ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ – ಬಾಲಕಿಯರ ತ್ರೋಬಾಲ್ ಪಂದ್ಯಾಟ ತಲ್ಲೂರು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ತಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಗಿರೀಶ್ ನಾಯ್ಕ್ ಕಾರ್ಯಕ್ರಮವನ್ನು ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು- ಗೆಲುವು ಮುಖ್ಯವಲ್ಲ. ಉತ್ತಮವಾಗಿ ಆಟವಾಡಿ, ನಿಮ್ಮ ಶಾಲೆ, ಊರಿಗೆ, ಜಿಲ್ಲೆಗೆ ಕೀರ್ತಿ ತನ್ನಿ ಎಂದ ಶುಭಹಾರೈಸಿದರು.
ಎಸ್.ಡಿ.ಎಂ.ಸಿ ಅಧ್ಯಕ್ಷ ಮಹಮ್ಮದ್ ಅಸ್ಲಾಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,
ಸೋಲು- ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಎರಡನ್ನೂ ಸಮಾನವಾಗಿ ಸ್ವೀಕರಿಸಿ, ಕ್ರೀಡಾಸ್ಪೂರ್ತಿಯಿಂದ ಆಟವಾಡಿ ಎಂದರು.
ತ್ರೋಬಾಲ್ ಪಂದ್ಯಾಟಕ್ಕೆ ಉದ್ಯಮಿ ರಾಜೇಶ ಕಾರಂತ ಉಪ್ಪಿನಕುದ್ರು ಚಾಲನೆ ನೀಡಿದರು.ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಅಣ್ಣಪ್ಪ ಶೆಟ್ಟಿ, ಜಿಲ್ಲಾ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಚೆನ್ನಯ್ಯ ಯು. ಅವರನ್ನು ಸಮ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಚಂದ್ರಮತಿ ಹೆಗ್ಡೆ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಉದಯ ಕುಮಾರ್ ತಲ್ಲೂರು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ,ಪಿಡಿಒ ನಾಗರತ್ನ, ಸದಸ್ಯರು, ಬಿಇಒ ನಾಗೇಶ್ ನಾಯ್ಕ್, ದೈಹಿಕ ಶಿಕ್ಷಣ ಪರಿವೀಕ್ಷಕ ಚಂದ್ರಶೇಖರ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ಪೂಜಾರಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸದಾನಂದ ಶೆಟ್ಟಿ, ಜಿಲ್ಲಾ ದೈ. ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯ ಕುಮಾರ ಶೆಟ್ಟಿ, ಉಪಾಧ್ಯಕ್ಷ ರವಿಶಂಕರ ಹೆಗ್ಡೆ, ವಿವಿಧ ಶಿಕ್ಷಕ ಸಂಘಗಳ ಪ್ರಮುಖರಾದ ಸತ್ಯನಾರಾಯಣ ಜಿ., ಅರುಣ ಕುಮಾರ ಶೆಟ್ಟಿ, ಪ್ರವೀಣ ಕುಮಾರ್ ಶೆಟ್ಟಿ, ಸತೀಶ ಬಾಡ, ಜೀವನ ಕುಮಾರ್ ಶೆಟ್ಟಿ, ತಲ್ಲೂರು ಮುಖ್ಯ ಶಿಕ್ಷಕಿ ಬೀರಮ್ಮ ಎಚ್. ನಾಯಕ್, ಪ್ರಮುಖರಾದ ನಾರಾಯಣ ಶೆಟ್ಟಿ, ಆನಂದ ಬಿಲ್ಲವ ಶಿವಾನಂದ ಶೆಟ್ಟಿ, ಯುವಜನ ಸೇವಾ ಕ್ರೀಡಾ ಕುಸುಮಾಕರ ಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಗೋಪಾಲ ಶೆಟ್ಟಿ, ಶಿಕ್ಷಕ ಪ್ರಕಾಶ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕ ಗೋವಿಂದ ಎಚ್. ನಾಯಕ್ ಮತ್ತಿತರರು ಉಪಸ್ಥಿತರಿದ್ದರು.