ಬೈಂದೂರು: ಬಾಲಭವನ ಉದ್ಘಾಟನಾ ಕಾರ್ಯಕ್ರಮ

ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಮೊವಾಡಿ ಶಾಲೆಯಲ್ಲಿ ಕೆನರಾ ಬ್ಯಾಂಕ್ ನೇತೃತ್ವದಲ್ಲಿ ಸುಮಾರು 3.5 ಲಕ್ಷ.ರೂ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸುಸಜ್ಜಿತವಾದ ನೂತನ ಬಾಲ ಭವನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕೆನರಾ ಬ್ಯಾಂಕ್ ಮಣಿಪಾಲ ಸರ್ಕಲ್ ಡಿಜಿಎಂ ಶ್ರೀಜೀತ್ ಬಾಲವನ್ನು ಉದ್ಘಾಟಿಸಿ ಮಾತನಾಡಿ, ಶಾಲಾ ಮಕ್ಕಳ ಕಲಿಕಾ ಚಟುವಟಿಕೆಗೆ ಬಾಲ ಭವನ ಬಹಳಷ್ಟು ಸಹಕಾರಿ ಆಗಲಿದೆ ಎಂದು ಶುಭಹಾರೈಸಿದರು.

ನಿವೃತ್ತ ಡಿಜಿಎಂ ಶಶಿಧರ ಐತಾಳ್ ಮಾತನಾಡಿ, ವಿದ್ಯಾಭ್ಯಾಸದ ಜತೆಗೆ ದೈಹಿಕ ಮತ್ತು ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಮಕ್ಕಳಿಗೆ ಬಾಲ ಭವನ ಪೂರಕವಾಗಲಿದೆ ಎಂದರು. ಸರಕಾರಿ ಹಿರಿಯ ಪ್ರಾಥಮಿಕ ಮೊವಾಡಿ ಶಾಲೆಯಲ್ಲಿ ಬಾಲ ಭವನ ನಿರ್ಮಾಣ ಮಾಡಲು ಪ್ರಮುಖ ಪಾತ್ರ ವಹಿಸಿದ್ದ ಕೆನರಾ ಬ್ಯಾಂಕಿನ ನಿವೃತ್ತ ಡಿಜಿಎಂ ಶಾಲೆಯ ಹಳೆ ವಿದ್ಯಾರ್ಥಿ ಶಶಿಧರ ಐತಾಳ್ ಮತ್ತು ದಂಪತಿಗಳನ್ನು ಮೊವಾಡಿ ಶಾಲೆ ಎಸ್‍ಡಿಎಂಸಿ ಸದಸ್ಯರು ಮತ್ತು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಬಾಲ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ, ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ದೇವಾಡಿಗ ಮಾತನಾಡಿ,ಮಕ್ಕಳಿಗೆ ಬಹಳಷ್ಟು ಇದರಿಂದ ಉಪಯೋಗ ಆಗಲಿದೆ ಎಂದು ಹೇಳಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿರಾಜ್ ಶೆಟ್ಟಿ ಮಾತನಾಡಿ,ಸರಕಾರಿ ಶಾಲೆಗಳಿಗೆ ನೀಡುವ ಕೊಡುಗೆ ಶಾಶ್ವತವಾಗಿ ಮತ್ತು ಸ್ಮರಣೀಯವಾಗಿ ಇರುತ್ತದೆ ಎಂದರು.

ಈ ಸಂದರ್ಭದಲ್ಲಿ ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ಸಂಧ್ಯಾ ಕಾರಂತ ಮತ್ತು ಉಪಾಧ್ಯಕ್ಷ ರಾಘವೇಂದ್ರ ಶೆಟ್ಟಿಗಾರ್,ವಸಂತಿ ಐತಾಳ್,ಕೆನರಾ ಬ್ಯಾಂಕ್ ಹೆಮ್ಮಾಡಿ ಮ್ಯಾನೇಜರ್ ರೂಪೇಶ್,ನಿವೃತ್ತ ಮುಖ್ಯೋಪಾಧ್ಯಾಯಿನಿ ಜ್ಯೋತಿ ಐತಾಳ್,ಶರತ್,ಮೊವಾಡಿ ಫ್ರೆಂಡ್ಸ್ ಮತ್ತು ಎಸ್‍ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.ಪ್ರಭಾರ ಮುಖ್ಯ ಶಿಕ್ಷಕಿ ಶರಾವತಿ ಸ್ವಾಗತಿಸಿದರು.ಸಹ ಶಿಕ್ಷಕಿ ಭಾಗಿತಥಿ ನಿರೂಪಿಸಿದರು.ದೈಹಿಕ ಶಿಕ್ಷಕ ಸಂತೋಷ್ ವಂದಿಸಿದರು.

Related Posts

Leave a Reply

Your email address will not be published.