ಪುತ್ತೂರು: ಪಂಜಳ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ

ಪುತ್ತೂರು: ಮಕ್ಕಳ ಕಲಿಕೆಯ ಮೊದಲ ಹೆಜ್ಜೆಯೇ ಅಂಗನವಾಡಿ ಕೇಂದ್ರಗಳು, ಈ ಕೇಂದ್ರಗಳಲ್ಲಿ ಮಕ್ಕಳಿಗೆ ಕಲಿಕೆಯ ಜೊತೆಗೆ ಮನೆಯ ಎಲ್ಲಾ ವಾತಾವರಣಗಳು ಅಂಗನವಾಡಿ ಕೇಂದ್ರಗಳಲ್ಲಿ ಕಾಣಲು ಸಾಧ್ಯವಾಗುತ್ತದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.


ಅವರು ಮುಂಡೂರು ಗ್ರಾಮದ ಪಂಜಳ ಅಂಗನವಾಡಿ ಕೇಂದ್ರದಲ್ಲಿ ನಡೆದ ಬಾಲ ಮೇಳದಲ್ಲಿ ಮಾತನಾಡಿದರು.
ಪುಟ್ಟ ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ಇಲ್ಲಿ ನೀಡಲಾಗುತ್ತಿದ್ದು ಮಕ್ಕಳನ್ನು ಅಂಗನವಾಡಿಗೆ ದಾಖಲಿಸುವಂತೆ ಶಾಸಕರು ಮನವಿ ಮಾಡಿದರು. ರಾಜ್ಯ ಸರಕಾರ ಅಂಗನವಾಡಿ ಮಕ್ಕಳಿಂದ ಹಿಡಿದು ಮನೆಯಲ್ಲಿರುವ ಗೃಹಿಣಿಯರಿಗೂ ಸಹಿತ ಸರಕಾರದಿಂದ ವಿವಿಧ ಸೌಲಭ್ಯಗಳು ದೊರೆಯುತ್ತಿದ್ದು ,ಯಾರೂ ಹಸಿವಿನಿಂದ ಇರಬಾರದು ಎಂಬ ಏಕೈಕ ಉದ್ದೇಶದಿಂದ ಸರಕಾರ ವಿವಿಧ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ ಎಂದು ಹೇಳಿದರು.


ವೇದಿಕೆಯಲ್ಲಿ ವಲಯ ಮೇಲ್ವಿಚಾರಕಿ ನಾಗರತ್ನ,ಬಾಲ ವಿಕಾಸ ಸಮಿತಿ ಅಧ್ಯಕ್ಷೆ ರಮ್ಲತ್, ನ್ಯಾಯವಾದಿ ಸಾಹಿರಾ, ಬಾಲ‌ವಿಜಾಸ ಸಮಿತಿ ಸದಸ್ಯ ಮಂಜುನಾಥ ಶೇಖ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related Posts

Leave a Reply

Your email address will not be published.