ಬಂದಡ್ಕ: ಅ.27ರಂದು ಅರೆಭಾಷೆ ಗಡಿನಾಡ ಉತ್ಸವ- 2024
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಬಂದಡ್ಕ ಗ್ರಾಮ ಗೌಡ ಸಮಿತಿ ಕೇರಳ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವ -2024 ಅ.27ರಂದು ಬಂದಡ್ಕದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಯೂರ ಮಂಟಪ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಮೊದಲು ಮೆರವಣಿಗೆ ನಡೆಯಲಿದ್ದು, ಕಾರ್ಯಕ್ರಮವನ್ನು ಬಂದಡ್ಕದ ಹಿರಿಯ ವರ್ತಕರಾದ ಕೃಷ್ಣಪ್ಪ ಗೌಡ ಕೊಯಿಂಗಾಜೆ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮವನ್ನು ರವಿಪ್ರಸಾದ್ ಇಳಂದಿಲ ನಡೆಸಿಕೊಡಲಿದ್ದಾರೆ. ಬೆಳಿಗ್ಗೆ 9.30ಕ್ಕೆ ಮಕ್ಕಳಿಂದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಅರೆಭಾಷೆ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ, ಸುಳ್ಯದ ಗೌಡರ ಯುವ ಸೇವಾ ಸಂಘದ ಅಧ್ಯಕ್ಷರಾದ ಪಿ.ಎಸ್. ಗಂಗಾಧರ್, ಮುಖ್ಯ ಅತಿಥಿಗಳಾಗಿ ಕುತ್ತಿಕೋಲ್ ಗ್ರಾ.ಪಂ ಅಧ್ಯಕ್ಷರಾದ ಮುರಳಿ ಪಯ್ಯಂಗಾನ, ಕಾರಡ್ಕ ಬ್ಲಾಕ್ ಪಂಚಾಯತ್ ಸದಸ್ಯರಾದ ಕೃಷ್ಣನ್ ಬಿ., ಕುತ್ತಿಕೋಲ್ ಗ್ರಾ.ಪಂ ಸದಸ್ಯರಾದ ಕುಂಞಿರಾಮನ್ ತವನಂ, ಮಡಿಕೇರಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ್, ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಭಾಶ್ಚಂದ್ರ ರೈ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಗಡಿಭಾಗಲಿ ಅರೆಭಾಷೆನ ಉಳ್ಸಿ ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
ಅರೆಭಾಷೆ ಸಾಂಸ್ಕೃತಿಕ ಕಾರ್ಯಕ್ರಮ, ಬಹುಭಾಷಾ ಕವಿಗೋಷ್ಟಿ ನಡೆಯಲಿದೆ. ಮಧ್ಯಾಹ್ನ 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ರಿಜಿಸ್ಟ್ರಾರ್ ಚಿನ್ನಸ್ವಾಮಿ, ಅಧ್ಯಕ್ಷರಾದ ಸದಾನಂದ ಮಾವಜಿ, ಸದಸ್ಯ ಸಂಚಾಲಕರಾದ ಚಂದ್ರಶೇಖರ ಪೇರಾಲು, ಲತಾ ಪ್ರಸಾದ್ ಕುದ್ಪಾಜೆ ಹಾಗೂ ಸದಸ್ಯರು ಸ್ವಾಗತ ಕೋರಿದ್ದಾರೆ.