ಬಂಡೀಪುರ : ಜಿಂಕೆ ಮಾಂಸ ಸಹಿತ ಓರ್ವ ಆರೋಪಿಯ ಬಂಧನ

ಗುಂಡ್ಲುಪೇಟೆ ತಾಲೂೀಕಿನ ಬಂಡೀಪುರ ಹುಲಿ ಪ್ರದೇಶದ ಮದ್ದೂರು ವಲಯದ ನೇರಳೆ ಮರದ ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಹೊತ್ತುಕೊಂಡು ಬರುತ್ತಿದ್ದ ವೇಳೆ ಅರಣ್ಯಾಧಿಕಾರಿಗಳಿ ದಾಳಿ ಮಾಡಿ ಓರ್ವನನ್ನು ಬಂಧಿಸಿರುವ ಘಟನೆ ನಡೆದಿದೆ.

ಮದ್ದೂರು ಕಾಲೋನಿಯ ಷಣ್ಮುಖ(35) ಬಂಧಿತ ಆರೋಪಿ. ಉಳಿದ ನಾಲ್ಕು ಮಂದಿ ಪರಾರಿಯಾಗಿದ್ದಾರೆ. ಮದ್ದೂರು ವಲಯದ ನೇರಳೆ ಮರದ ಅರಣ್ಯ ಪ್ರದೇಶದ ಉಪ ವಲಯ ಅರಣ್ಯಾಧಿಕಾರಿ ರವಿಕುಮಾರ್ ಸಗೂರು , ಅರಣ್ಯ ರಕ್ಷಕ ನವೀನ ಹಾಗೂ ಸಿಬ್ಬಂದಿ ಅರಣ್ಯ ಗಸ್ತು ಕಾರ್ಯ ನಡೆಸುತ್ತಿದ್ದ ವೇಳೆ ಐದು ಮಂದಿ ಜಿಂಕೆ ಮಾಂಸ ಹೊತ್ತುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ದಾಳಿ ನಡೆಸಿ ಓರ್ವನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಂಡೀಪುರ ಹುಲಿಯೋಜನೆ ನಿರ್ದೇಶಕ ರಮೇಶ್ ಕುಮಾರ್ ಮಾರ್ಗದರ್ಶನದಲ್ಲಿ ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ, ಮದ್ದೂರು ವಲಯದ ವಲಯ ಅರಣ್ಯಾಧಿಕಾರಿ ಬಿ.ಎಂ.ಮಲ್ಲೇಶ್ ನೇತೃತ್ವದಲ್ಲಿ ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

Related Posts

Leave a Reply

Your email address will not be published.