ಅಡ್ಯನಡ್ಕನಲ್ಲಿ ಬ್ಯಾಂಕ್‌ನಿಂದ ಕಳವು ಪ್ರಕರಣ : ಮೂವರು ಆರೋಪಿಗಳ ಬಂಧನ

ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ವಿಶೇಷ ತಂಡ ಮೂರು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿಬಿ ರಿಷ್ಯಂತ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಫೆಬ್ರವರಿ 7 ರಂದು ರಾತ್ರಿ ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಕರ್ನಾಟಕ ಬ್ಯಾಂಕಿನ ಕೀಟಕಿಯ ಸರಳಗಳನ್ನು ತುಂಡರಿಸಿ, ಗ್ಯಾಸ್ ಕಟರ್‌ನಿಂದ ಸ್ಟ್ರಾಂಗ್ ರೂಮಿನ ಬಾಗಿಲ್ಲನ್ನು ತುಂಡರಿಸಿ ಒಳ ಪ್ರವೇಶಿಸಿ 17,28,735 ರೂ ನಗದು ಹಾಗೂ 696.21 ಗ್ರಾಂ ಚಿನ್ನಭರಣ ಮತ್ತು 1,00,000/- ಮೌಲ್ಯದ ಬೆಳ್ಳಿ ಕಳ್ಳತನ ಮಾಡಿರುತ್ತಾರೆ.

ಈ ಪ್ರಕರಣದ ಪತ್ತೆ ಬಗ್ಗೆ ವಿಶೇಷ ತಂಡ ರಚಿಸಿ ತನಿಖೆ ಮಾಡಿದ್ದು ಆರೋಪಿಗಳಾದ ಮಹಮ್ಮದ್ ರಫೀಕ್, ಇಬ್ರಾಹಿಂ ಕಲಂದರ್, ದಯಾನಂದ ಎಂಬ ಮೂವರನನು ಬಂಧಿಸಲಾಗಿದೆ. ಆರೋಪಿಗಳಿಂದ 25,70,918/- ರೂ ಸ್ವಾದೀನಪಡಿಸಿಕೊಳ್ಳಲಾಗಿದೆ ಎಂದರು ಹೇಳಿದರು. ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರಿಗೆ ಬಹುಮಾನ ಘೋಷಣೆ ಮಾಡಲಾಗಿದೆ ಎಂದರು.

Related Posts

Leave a Reply

Your email address will not be published.