ಬಂಟ್ವಾಳ: ಹಳ್ಳದಲ್ಲಿ ಯುವಕನ ಮೃತದೇಹ ಪತ್ತೆ- ಕೊಲೆ ಶಂಕೆ?

ಬಂಟ್ವಾಳದ ಬೆಂಜನಪದವಿನಲ್ಲಿ ಕಲ್ಲು ತೆಗೆದು ನಿರ್ಮಾಣಗೊಂಡ ನೀರು ನಿಂತ ಹಳ್ಳವೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ.
ಬೆಂಜನಪದವು ನಿವಾಸಿ ಸಾಗರ್(28) ಮೃತಪಟ್ಟ ಯುವಕ.
ಶನಿವಾರದಿಂದ ಸಾಗರ್ ನಾಪತ್ತೆಯಾಗಿದ್ದರು. ಮನೆಮಂದಿ ಹುಡುಕಾಟ ನಡೆಸಿದ್ದರು. ಆದರೆ ಆತ ಎಲ್ಲೂ ಪತ್ತೆಯಾಗಿರಲಿಲ್ಲ. ಸೋಮವಾರ ಬೆಳಗ್ಗೆ ಸಾಗರ್ ಮೃತದೇಹ ಹಳ್ಳವೊಂದರಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬಸ್ಥರು ಹಾಗೂ ಸ್ನೇಹಿತರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ತನಿಖೆಯಿಂದ ಸಾವಿನ ನೈಜ ಕಾರಣ ತಿಳಿದು ಬರಲಿದೆ.
