ಶಿಬಾಜೆ, ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ ಯುವತಿ ಬಲಿ
ಬೆಳ್ತಂಗಡಿ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ವಿದ್ಯುತ್ ಶಾಕ್ ಗೆ ಯುವತಿ ಸಾವನ್ನಪ್ಪಿದ್ದು ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕಳೆದ ಕೆಲವು ಸಮಯಗಳಿಂದ ತಂತಿ ಸರಿಪಡಿಸುವಂತೆ ಸಂಬಂಧ ಪಟ್ಟ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳಿಗೆ ಮನೆಯವರು ತಿಳಿಸಿದರೂ ಅವರು ನಿರ್ಲಕ್ಷಿಸಿದ್ದಾರೆ. ಅದ್ದರಿಂದ ಇವತ್ತು ಅಮಾಯಕ ಯುವತಿ ಬಲಿಯಾಗಿದ್ದಾಳೆ. ಈ ದುರಂತಕ್ಕೆ ಮೆಸ್ಕಾಂ ಇಲಾಖೆಯೇ ಕಾರಣ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಘಟನಾ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು ಸ್ಥಳಕ್ಕೆ .ಧರ್ಮಸ್ಥಳ ಠಾಣೆಯ ಪೊಲೀಸರು ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಶಿಬಾಜೆ, ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು:25 ಲಕ್ಷ ಪರಿಹಾರ ನೀಡುವಂತೆ ಶಾಸಕ ಹರೀಶ್ ಪೂಂಜ ಆಗ್ರಹ
ಬೆಳ್ತಂಗಡಿ: ಶಿಬಾಜೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ ಯುವತಿ ಮನೆಯವರಿಗೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸುವಂತೆ ಮೆಸ್ಕಾಂ ಇಲಾಖೆಗೆ ಸೂಚಿಸಿ ಗರಿಷ್ಠ ಮೊತ್ತ ರೂ.25 ಲಕ್ಷ ಪರಿಹಾರ ನೀಡುವಂತೆ ಸರಕಾರಕ್ಕೆ ಆಗ್ರಹಿಸಿದರು. ಇಲಾಖೆ ಕೂಡಲೇ 5 ಲಕ್ಷ ಪರಿಹಾರ ಘೋಷಿಸಿದ್ದು ಹೆಚ್ಚಿನ ಪರಿಹಾರಕ್ಕೆ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ಭರವಸೆ ನೀಡಿದರು. ಮಳೆಗಾಲದ ಸಂದರ್ಭದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಇಲಾಖೆಗೆ ಶಾಸಕರು ಸೂಚಿಸಿದರು.