ಬಂಟ್ವಾಳ : ಸಿಡಿಲಿನ ಅಘಾತಕ್ಕೆ ಬಾಲಕನೋರ್ವ ಬಲಿ
ಬಂಟ್ವಾಳ : ಸಿಡಿಲಿನ ಅಘಾತಕ್ಕೆ ಬಾಲಕನೋರ್ವ ಬಲಿಯಾದ ಘಟನೆ ಬಂಟ್ವಾಳ ಕರಿಯಂಗಳ ಗ್ರಾಮದಲ್ಲಿ ನಡೆದಿದೆ.
ಸಾಣೂರುಪದವು ಗಣೇಶ್ ಆದಿದ್ರಾವಿಡ ಅವರ ಪುತ್ರ 16 ವರ್ಷದ ಕಾರ್ತಿಕ್ ಸಿಡಿಲು ಬಡಿದು ಮೃತಪಟ್ಟ ದುರ್ದೈವಿ.ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಿನ್ನೆ ರಾತ್ರಿ ಭಾರೀ ಮಳೆ ಸುರಿದಿದ್ದು ರಾತ್ರಿ ಮನೆಯಲ್ಲಿ ಇರುವ ಎಲ್ಲರೂ 9 ರ ಸುಮಾರಿಗೆ ಊಟ ಮುಗಿಸಿ ಮಲಗಿದ್ದು ಈ ವೇಳೆ ಸಿಡಿಲು ಸಹಿತ ಮಳೆ ಬಂದು, ಮಲಗಿದ್ದವರಿಗೆ ಕರೆಂಟ್ ಶಾಕ್ ಹೊಡೆದ ಅನುಭವವಾಗಿದೆ.
ಈ ವೇಳೆ ಮನೆಮಂದಿ ಹಾಲ್ ಗೆ ಓಡಿ ಬಂದಿದ್ದಾರೆ. ಅದರೆ ಬಾಲಕ ಕಾರ್ತಿಕ್ ಏಳದೆ ಇದ್ದಾಗ, ಆತನನ್ನು ತಕ್ಷಣವೇ ಕೈಕಂಬದ ಕ್ಲಿನಿಕ್ ಗೆ ಕರೆತರಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದಾಗ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.