HomeFresh Newsಕಲ್ಲಡ್ಕ ಡಾ. ಪ್ರಭಾಕರ್ ಭಟ್ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ

ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ

ಬಂಟ್ವಾಳ: ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರದು ಆಕ್ಷೇಪ ಅರ್ಹ ಬರಹಗಳನ್ನು ಬರೆದು ಸಮಾಜದಲ್ಲಿ ಅಶಾಂತಿ ಹಬ್ಬಲು ಕೆಲವು ಕಿಡಿಗೇಡಿಗಳು ಪ್ರಯತ್ನಿಸುತ್ತಿದ್ದು, ಇವರ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳೂರು ಸೈಬರ್ ಕ್ರೈಮ್ ಪೊಲೀಸ್ ಠಾಣೆಂಗೆ ದೂರು ನೀಡಲಾಗಿದೆ.

ಆರ್.ಎಸ್.ಎಸ್.ಪ್ರಮುಖರಾಗಿರುವ ಕಲ್ಲಡ್ಕ ಶ್ರೀರಾಮವಿದ್ಯಾಕೇಂದ್ರದ ಸಂಸ್ಥಾಪಕ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿರುವ ಕಲ್ಲಡ್ಕ ಡಾ| ಪ್ರಭಾಕರ್ ಭಟ್
ಫೇಸ್‍ಬುಕ್ ಖಾತೆಯಾಗಲಿ, ಇನ್ನಿತರ ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಖಾತೆಯನ್ನು ಹೊಂದಿರುವುದಿಲ್ಲ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಈ ಖಾತೆಯ ಮೂಲಕ ಸಮಾಜದಲ್ಲಿ ಅಶಾಂತಿ ಹಬ್ಬಿಸುವ ಪ್ರಯತ್ನ ಮತ್ತು ಹೆಸರನ್ನು ಕೆಡಿಸುವ ಕೆಲಸ ಮಾಡಲಾಗುತ್ತಿದ್ದು ಈ ಬಗ್ಗೆ ಪೊಲೀಸರು ಸೂಕ್ತವಾದ ತನಿಖೆ ನಡೆಸುವಂತೆ ಮತ್ತು ಅವರ ಮೇಲೆ ಕಾನೂನು ಕ್ರಮವನ್ನು ಕೈಗೊಂಡು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಪೊಲೀಸರು ನಿಗಾವಹಿಸುವಂತೆಯೂ ಅವರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments