HomeFresh Newsಬಂಟ್ವಾಳ: ನೂತನವಾಗಿ ನಿರ್ಮಾಣಗೊಂಡ ರಿಕ್ಷಾ ಪಾರ್ಕ್ ಉದ್ಘಾಟನೆ

ಬಂಟ್ವಾಳ: ನೂತನವಾಗಿ ನಿರ್ಮಾಣಗೊಂಡ ರಿಕ್ಷಾ ಪಾರ್ಕ್ ಉದ್ಘಾಟನೆ

ಬಂಟ್ವಾಳದ ಬೈಪಾಸ್‍ನಲ್ಲಿ ನೂತನವಾಗಿ ನಿರ್ಮಾಣಗೊಂಡ ರಿಕ್ಷಾ ಪಾರ್ಕ್‍ನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.
ವಿಧಾನ ಪರಿಷತ್ ಸದಸ್ಯ ಯು. ಬಿ. ವೆಂಕಟೇಶ್ ಅವರ ಪ್ರದೇಶಾಭಿವೃದ್ಧಿ ನಿಧಿಯಡಿ ರಿಕ್ಷಾ ಪಾರ್ಕ್‍ನ್ನು ನಿರ್ಮಾಣ ಮಾಡಲಾಗಿತ್ತು. ಈ ಸಂದರ್ಭ ಮಾತನಾಡಿದ ರಮಾನಾಥ ರೈ ಅವರು, ನನ್ನ ಹುಟ್ಟು ಹಬ್ಬದ ದಿನದಂದೇ ರಿಕ್ಷಾ ತಂಗುದಾಣ ನಿರ್ಮಾಣವಾಗಿರುವುದು ಕಾಕತಾಳಿಯ. ಈ ತಂಗುದಾಣದಿಂದ ರಿಕ್ಷಾ ಚಾಲಕರಿಗೆ ಅನುಕೂಲವಾಗಲಿ ಎಂದು ಆಶಿಸಿದರು.

ಪಕ್ಷದ ಪ್ರಮುಖರಾದ ಪಿಯೂಸ್ ಎಲ್. ರೋಡ್ರಿಗಸ್,ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪದ್ಮಶೇಖರ್ ಜೈನ್, ಸಂಜೀವ ಪೂಜಾರಿ, ಚಂದ್ರಪ್ರಕಾಶ್ ಶೆಟ್ಟಿ, ಬಿ.ಎಚ್. ಖಾದರ್, ಪದ್ಮನಾಭ ರೈ, ಸದಾಶಿವ ಬಂಗೇರ, ಅಬ್ಬಾಸ್ ಅಲಿ, ಮಾಯಿಲಪ್ಪ ಸಾಲ್ಯಾನ್, ಸುರೇಶ್ ಜೋರ, ವೆಂಕಪ್ಪ ಪೂಜಾರಿ ಮಲ್ಲಿಕಾ ಶೆಟ್ಟಿ, ವಿಲ್ಮಾ ಮೋರಸ್, ಪೆÇ್ಲೀಸಿ ಡಿಸೋಜಾ, ದೇವಪ್ಪ ಕುಲಾಲ್ ಪಂಜಿಕಲ್ಲು, ಚಿತ್ತರಂಜನ್ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments