ಬಂಟ್ವಾಳ: ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘಕ್ಕೆ 1.5ಕೋಟಿ ರೂ ನಿವ್ವಳ ಲಾಭ
ಬಂಟ್ವಾಳ: 75 ವರ್ಷಗಳ ಹಿಂದೆ ಬಿ.ಕೃಷ್ಣ ರೈ ಅಧ್ಯಕ್ಷತೆಯಲ್ಲಿ ಆರಂಭಗೊಂಡ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದ್ದು ಎಂಟು ಗ್ರಾಮಗಳಲ್ಲಿ ತೃಪ್ತಿಕರ ಸೇವೆ ನೀಡುತ್ತಿದೆ. 2022-23ನೇ ಸಾಲಿನ ವರ್ಷಾಂತ್ಯಕ್ಕೆ 46.04 ಕೋಟಿ ರೂ ಠೇವಣಿ ಇದ್ದು, ಸಾಲ ಹೊರಬಾಕಿ 81.74 ಕೋಟಿ ರೂ, ದುಡಿಯುವ ಬಂಡವಾಳ 173.35 ಕೋಟಿ ರೂ, ಹೂಡಿಕೆ 14.12 ಕೋಟಿ ರೂ, ಸಂಘದ ಒಟ್ಟು ವ್ಯವಹಾರ 376.85 ಕೋಟಿ ರೂ ಆಗಿದ್ದು, 1.5 ಕೋಟಿ ರೂ ನಿವ್ವಳ ಲಾಭ ಗಳಿಸಿದೆ. ಶೇ.99ರಷ್ಟು ಸಾಲ ವಸೂಲಾತಿ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ತಿಳಿಸಿದ್ದಾರೆ.
ಅವರು ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನಬಾರ್ಡ್ ಸಹಕಾರದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಶೇ 1 ರ ಬಡ್ಡಿ ದರದಲ್ಲಿ 58 ಲಕ್ಷ ವೆಚ್ಚದಲ್ಲಿ ನೇತಾಜಿ ಬಹುಪಯೋಗಿ ಸೇವಾ ಕೇಂದ್ರ, ಸಂಘದ ಸ್ಥಾಪಕ ಅಧ್ಯಕ್ಷರಾದ ಬಿ. ಕೃಷ್ಣ ರೈ ಸವಿನೆನಪಿಗಾಗಿ ಬೆಳ್ಳಿಪ್ಪಾಡಿ ಕೃಷ್ಣ ರೈ ಸಭಾಂಗಣ ನಿರ್ಮಿಸಲಾಗಿದೆ. ಸಂಘದ ಆರ್ಥಿಕತೆ ಬಲವರ್ಧನೆ ದೃಷ್ಟಿಯಿಂದ ಸಂಘದ ಅಮೃತ ಮಹೋತ್ಸವ ಹಾಗೂ ಸ್ವಾತಂತ್ರ ದಿನಾಚರಣೆಯ ಅಮೃತ ಮಹೋತ್ಸವ ಅಂಗವಾಗಿ ಸ್ವಾತಂತ್ರ ಹೋರಾಟಗಾರ ವೀರ ಸಾರ್ವಕರ್ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲಾಗಿದೆ ಎಂದರು.
ಸೆ. 23ರಂದು ಸಂಘದ ಮಹಾಸಭೆ ನಡೆಯಲಿದ್ದು ಎಸ್.ಎಸ್.ಎಲ್.ಸಿ, ಪಿಯುಸಿ ಸಾಧಕ ಮಕ್ಕಳ ಪುರಸ್ಕಾರ ನಡೆಯಲಿದೆ ಎಂದು ಪ್ರಭಾಕರ ಪ್ರಭು ತಿಳಿಸಿದರು. ಉಪಾಧ್ಯಕ್ಷ ಸತೀಶ್ ಪೂಜಾರಿ, ನಿರ್ದೇಶಕರಾದ ಸಂದೇಶ ಶೆಟ್ಟಿ ಪೆÇಡುಂಬ, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ಪದ್ಮರಾಜ ಬಲ್ಲಾಳ ಮಾವಂತೂರು, ದಿನೇಶ್ ಪೂಜಾರಿ ಹುಲಿಮೇರು, ವೀರಪ್ಪ ಪರವ, ಜಾರಪ್ಪ ನಾಯ್ಕ, ಉಮೇಶ್ ಗೌಡ, ದೇವರಾಜ್ ಸಾಲ್ಯಾನ್, ಹರೀಶ್ ಆಚಾರ್ಯ, ಅರುಣಾ ಎಸ್ ಶೆಟ್ಟಿ, ಮಂದಾರತಿ ಎಸ್ ಶೆಟ್ಟಿ, ವೃತಿಪರ ನಿರ್ದೇಶಕ ಮಾಧವ ಶೆಟ್ಟಿಗಾರ್, ಕೇಶವ ಕಿಣಿ, ಮುಖ್ಯಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಆಡಳಿತ ಮಂಡಳಿಯಲ್ಲಿದ್ದಾರೆ.