ಜೀರ್ಣೋದ್ಧಾರ ಹಂತದಲ್ಲಿರುವ ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರ
ಬಂಟ್ವಾಳದ ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರವು ಜೀರ್ಣೋದ್ಧಾರ ಹಂತದಲ್ಲಿದ್ದು, ಶ್ರೀ ಮಹಾಲಿಂಗೇಶ್ವರನ ದಿವ್ಯ ಸಾನಿಧ್ಯದಲ್ಲಿ ಪ್ರತಿಷ್ಠಾಪನೆಗೊಳ್ಳಲಿರಯವ ನೂತನ ಧ್ವಜ ಸ್ತಂಭದ ತೈಲಾಧಿವಾಸ ಕಾರ್ಯಕ್ರಮವು ಜರುಗಿತು.
ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ಧ್ವಜ ಸ್ತಂಭದ ಪ್ರತಿಷ್ಠಾಪನೆಯು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಶ್ರೀ ಕ್ಷೇತ್ರ ಶ್ರೀ ಧಾಮ ಮಾಣಿಲ, ಶ್ರೀ ಮಹಾಲಕ್ಷ್ಮೀ ಸೇವಾ ಪ್ರತಿಷ್ಠಾನದ ಪರಮಪೂಜ್ಯ ಯೋಗಿ ಕೌಸ್ತುಭ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು.
ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಸಭಾಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಮಂಜುನಾಥ ಭಂಡಾರಿ ಶೆಡ್ಡೆ, ಉದ್ಯಮಿಗಳಾದ ರಘುನಾಥ ಸೋಮಾಯಾಜಿ, ಪ್ರಶಾಂತ್ ಸನಿಲ್, ಬಂಟ್ವಾಳದ ಬಂಟರ ಸಂಘದ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ, ಬಂಟ್ವಾಳದ ಬಿಲ್ಲವರ ಸಂಘದ ಉಪಾಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ, ಅಧ್ಯಕ್ಷರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಹಾಗೂ ಸಮಿತಿಯ ಉಪಾಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಜೀರ್ಣೋದ್ದಾರ ಸಮಿತಿಯ ಸರ್ವ ಸದಸ್ಯರು, ಅಧ್ಯಕ್ಷರು ಮತ್ತು ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.