ಬಂಟ್ವಾಳ : ಸ್ಕೂಟರ್ ಗೆ ಬಸ್ಸು ಡಿಕ್ಕಿ, ಸವಾರ ಸಾವು

ಬಂಟ್ವಾಳ : ಕೆ.ಎಸ್.ಆರ್.ಟಿ.ಸಿ.ಬಸ್ ಸ್ಕೂಟರ್ ಗೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಭಂಡಾರಿಬೆಟ್ಟು ನಿವಾಸಿ ಡೊಂಬಯ್ಯ ಮೂಲ್ಯ ಮೃತಪಟ್ಟ ವ್ಯಕ್ತಿ.ಅವರು ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಜಕ್ರಿಬೆಟ್ಟು ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಸರಕಾರಿ ಬಸ್ ಹಿಂಬದಿಯಿಂದ ಸ್ಕೂಟರ್ ಗೆ ಡಿಕ್ಕಿಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಡೊಂಬಯ್ಯ ಅವರು ಅವರ ಸಂಬಂಧಿಕರ ಮನೆಯಲ್ಲಿ ಸಂಕ್ರಮಣದ ದಿನದಂದು ದೈವದ ಕೆಲಸಕ್ಕೆ ಹೂ ತರಲೆಂದು ಬಿ.ಸಿ.ರೋಡು ಕಡೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಡೊಂಬಯ್ಯ ಅವರು ಬಿ.ಸಿ.ರೋಡಿನಲ್ಲಿರುವ ಕುಲಾಲ ಸಮುದಾಯ ಭವನದಲ್ಲಿ ಅನೇಕ ವರ್ಷಗಳಿಂದ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಚಾಲಕನ ಅಜಾಗಕರೂಕತೆಯ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಅಪಘಾತ ಸಂಭವಿಸಿದ ಕೂಡಲೇ ಬಸ್ ಚಾಲಕ ಬಸ್ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ಅಪಘಾತ ‌ನಡೆದ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Related Posts

Leave a Reply

Your email address will not be published.