ಸರಕಾರಿ ಬಸ್‍ನಲ್ಲಿ ವ್ಯಕ್ತಿಯೊಬ್ಬನಿಂದ ಅಸಭ್ಯ ವರ್ತನೆ – ವೀಡಿಯೋ ವೈರಲ್
ಬಂಟ್ವಾಳ: ಧರ್ಮಸ್ಥಳ- ಮಂಗಳೂರು ಸರಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮುಂಭಾಗದ ಸೀಟಿನಲ್ಲಿದ್ದ ಮಹಿಳೆಯ ಜಡೆಯನ್ನು ಹಿಂಭಾಗದ ಸೀಟಿನಲ್ಲಿದ್ದ ವ್ಯಕ್ತಿಯೋರ್ವ ಸವರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಘಟನೆಯ ಬಗ್ಗೆ ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಘಟಕ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಆರೋಪಿಯನ್ನು ಶೀಘ್ರವಾಗಿ ಬಂಧಿಸುವಂತೆ ಒತ್ತಾಯಿಸಿದೆ.