HomeFresh Newsಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ನಾಮಪತ್ರ ಸಲ್ಲಿಕೆ

ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ನಾಮಪತ್ರ ಸಲ್ಲಿಕೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಇಂದು ನಾಮಪತ್ರ ಸಲ್ಲಿಸಿದರು.ಬಿ.ಸಿ.ರೋಡಿನ ವಿಧಾನಸೌಧದ ಚುನಾವಣಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ತೆರಳಿದ ಅವರು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 9:30ಕ್ಕೆ ಬಂಟ್ವಾಳ ವೆಂಕಟರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಅಲ್ಲಿಂದ ಭಾರೀ ಸಂಖ್ಯೆಯ ಕಾರ್ಯಕರ್ತರ ಕರತಾಡನದೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದು ಬಂಟ್ವಾಳ ಕೆಳಗಿನ ಪೇಟೆ ಜುಮಾ ಮಸೀದಿ ಬಳಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಚುನಾವಣಾ ಕಚೇರಿಯ ಸಮೀಪದಲ್ಲಿರುವ ಶ್ರೀ ರಕ್ತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನೇರವಾಗಿ ನಾಮಪತ್ರ ಸಲ್ಲಿಕೆಗೆ ತೆರಳಿದರು.

ಈ ವೇಳೆ ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಪಕ್ಷ ಪ್ರಮುಖರಾದ ಬೇಬಿ ಕುಂದರ್, ಸುದೀಪ್ ಶೆಟ್ಟಿ, ಪಿಯೂಸ್ ಎಲ್. ರೊಡ್ರಿಗಸ್, ಬಿ.ಎಚ್.ಖಾದರ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಎಂ.ಎಸ್.ಮುಹಮ್ಮದ್, ಮಾಯಿಲಪ್ಪ ಸಾಲ್ಯಾನ್, ಅಬ್ಬಾಸ್ ಅಲಿ, ಜಯಂತಿ ಪೂಜಾರಿ, ಮುಹಮ್ಮದ್ ಶರೀಫ್, ಜನಾರ್ದನ ಚೆಂಡ್ತಿಮಾರ್, ಸುಭಾಶ್ಚಂದ್ರ ಶೆಟ್ಟಿ, ಉಮೇಶ್ ಸಪಲ್ಯ, ಸಂಜೀವ ಪೂಜಾರಿ ಮತ್ತಿತರರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments