ಬಂಟ್ವಾಳ : ಮಹಿಳಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೋ ಪೂಜಾ ಕಾರ್ಯಕ್ರಮ

ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ ಬಂಟ್ವಾಳ ಮಹಿಳಾ ಬ್ಲಾಕ್ ಕಾಂಗ್ರೆಸ್ ಇದರ ವತಿಯಿಂದ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಗೋ ಪೂಜೆ ಬಡಗ ಕಾಜೆಕಾರ್ ಗ್ರಾಮದ ಸುಧಾಕರ್ ಶಣೈ ಖಂಡಿಗ ಇವರ ಮನೆಯಲ್ಲಿ ನಡೆಯಿತು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಸುಧಾಕರ್ ಶಣೈ,ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲವೀನಾ ವಿಲ್ಮಾ ಮೋರಸ್,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,ಪಾಣೆ ಮoಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಕೆಪಿಸಿಸಿ ಸದಸ್ಯರಾದ ಪಿಯೂಸ್ ರೊಡ್ರಿಗಸ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಮಾಯಿಲಪ್ಪ ಸಾಲ್ಯಾನ್,ಶ್ರೀಮತಿ ಸುಕನ್ಯಾ ಶಣೈ,ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಬ್ದುಲ,ಪದ್ಮನಾಭ ಸಾವಂತ್ ವಾಮದಪದವು ಮೊದಲಾದವರು ಉಪಸ್ಥಿತರಿದ್ದರು.
