ಬಂಟ್ವಾಳ: ವ್ಯಕ್ತಿಯೋರ್ವನ ಮೃತದೇಹ ಪತ್ತೆ
ಬಂಟ್ವಾಳ: ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಮಂಗಳವಾರ ಪತ್ತೆಯಾಗಿದೆ. ತಲಪಾಡಿಯಲ್ಲಿರುವ ಬಂಟವಾಳದ ಬಂಟರ ಭವನದ ಕಂಪೌಂಡ್ ನ ಒಳಗಡೆಯಲ್ಲಿ ರಕ್ತಸಿಕ್ತವಾಗಿ ಬಿದ್ದುಕೊಂಡಿರುವ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ.
ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಎಂಬಾತನ ಶವ ಇದಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಂಟರ ಭವನದ ಹೊರಗಡೆಯಲ್ಲಿ ಈತನಿಗೆ ಸೇರಿದ ಬೈಕ್ ಕಂಡು ಬಂದಿದೆ.
ಸಾವಿಗೆ ಸ್ಪಷ್ಟವಾದ ಕಾರಣ ಗೊತ್ತಾಗಿಲ್ಲವಾದರೂ ಪೋಲೀಸ್ ಮೂಲಗಳ ಪ್ರಕಾರ ಈತ ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತು ಕೊಂಡಿರಬೇಕು.ಅ ಸಂದರ್ಭದಲ್ಲಿ ನಿಯಂತ್ರಣ ಕಳೆದು ಕೆಳಗೆ ಬಿದ್ದಿರಬೇಕು ಎಂದ ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸೈ ಹರೀಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



















