HomeFresh Newsಬಂಟ್ವಾಳ: ಆಸ್ಪತ್ರೆಯಲ್ಲಿ ಮೊಬೈಲ್ ಕಳ್ಳತನ-ಆರೋಪಿಯ ಸುಳಿವು ಸಿಕ್ಕಲ್ಲಿ ಪೋಲಿಸರಿಗೆ ಮಾಹಿತಿ ನೀಡಲು ಮನವಿ

ಬಂಟ್ವಾಳ: ಆಸ್ಪತ್ರೆಯಲ್ಲಿ ಮೊಬೈಲ್ ಕಳ್ಳತನ-ಆರೋಪಿಯ ಸುಳಿವು ಸಿಕ್ಕಲ್ಲಿ ಪೋಲಿಸರಿಗೆ ಮಾಹಿತಿ ನೀಡಲು ಮನವಿ

ಬಂಟ್ವಾಳ: ಅನಾರೋಗ್ಯದ ನಿಮಿತ್ತ ಚಿಕಿತ್ಸೆಗೆಂದು ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪೋಲಿಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾಗಿದ್ದು ಕಳ್ಳನ ಚಲನವಲನ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ. ಇದೀಗ ಆಸ್ಪತ್ರೆಯಲ್ಲಿ ಈತನ ಪೋಟೋ ಅಂಟಿಸಲಾಗಿದ್ದು, ಈತನ ಚಹರೆಯನ್ನು ಗಮನಿಸಿದವರು ಪೋಲಿಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.

ಮೆಲ್ಕಾರ್ ಟ್ರಾಫಿಕ್ ಪೋಲಿಸ್ ಠಾಣೆಯ ಎಚ್.ಸಿ.ದೇವರಾಜ್ ಅವರು ಅನಾರೋಗ್ಯದ ಕಾರಣ ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಬೆಡ್‌ನಲ್ಲಿ ಮಲಗಿದ್ದ ವೇಳೆ ಇವರ ಬೆಡ್ ಪಕ್ಕದಲ್ಲಿ ಟೇಬಲ್ ಮೇಲೆ ಇರಿಸಲಾಗಿದ್ದ ಒಂದು ಮೊಬೈಲ್ ಹಾಗೂ ಮತ್ತೊಂದು ಕೀ ಪೇಡ್ ಮೊಬೈಲ್‌ಗಳನ್ನು ಕಳ್ಳತನ ಮಾಡಲಾಗಿದೆ.

ಈತ ಕಳೆದ ವಾರ ಐಸಿಯು ಘಟಕದೊಳಗೆ ನುಗ್ಗಿ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಜ್ಜಿಯ ಬಳಿ ಅರ್ಜಂಟಾಗಿ ಪೋನ್ ಕೇಳಿ ಪಡೆದುಕೊಂಡು ನಂತರ ಹಿಂತಿರುಗಿಸದೆ ಹೋಗಿದ್ದ ಎಂದು ಹೇಳಲಾಗಿದೆ. ಇದೀಗ ಇವನು ಅಸ್ಪತ್ರೆಗೆ ಬಂದಿರುವುದು ಮತ್ತು ಪೋಲಿಸ್ ಸಿಬ್ಬಂದಿಯ ಮೊಬೈಲ್ ಕಳ್ಳತನ ಮಾಡಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments