ಬಂಟ್ವಾಳದ ಜಕ್ರಿಬೆಟ್ಟುವಿನಲ್ಲಿ ಸೇತುವೆ ಸಹಿತ ಅಣೆಕಟ್ಟು ನಿರ್ಮಾಣ

ಬಂಟ್ವಾಳ: ಸುಮಾರು 135 ಕೋಟಿ ರೂ ವೆಚ್ಚದಲ್ಲಿ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ಸೇತುವೆ ಸಹಿತ ಅಣೆಕಟ್ಟು ನಿರ್ಮಾಣದ ಪೂರ್ವಭಾವಿ ಕೆಲಸಗಳು ಆರಂಭಗೊAಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರದಲ್ಲಿ ಇದಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾÊಕ್ ಉಳಿಪ್ಪಾಡಿ ತಿಳಿಸಿದರು.

jakri bettu

ಕಾಮಗಾರಿ ನಡೆಯುವ ಸ್ಥಳ ಪರಿಶೀಲನೆ ನಡೆಸಿದ ಸಂದರ್ಭ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಶಿಲಾನ್ಯಾಸ ನೆರವೇರಿಸಿದ ಬಳಿಕ ಕೆಲಸಗಳು ಶೀಘ್ರವಾಗಿ ನಡೆಯಲಿದೆ. ಇದರಿಂದ ಬಹಳಷ್ಟು ಜನರಿಗೆ ಉಪಕಾರವಾಗಲಿದ್ದು, ನೀರಾವರಿಯಷ್ಟೇ ಅಲ್ಲ, ಸಂಪರ್ಕಕ್ಕೂ ಸುಲಭವಾಗಲಿದೆ. ಮಂಗಳೂರಿಗೂ ಕುಡಿಯುವ ನೀರಿನ ಸಮಸ್ಯೆ ಉಂಟಾದಾಗ ಪರ್ಯಾಯ ವ್ಯವಸ್ಥೆಯಾಗಿಯೂ ಇದು ಉಪಕಾರಿಯಾಗಲಿದೆ ಎಂದು ಅವರು ತಿಳಿಸಿದರು.ಈ ಸಂದರ್ಭ ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ, ಪ್ರಮುಖರಾದ ಸುದರ್ಶನ ಬಜ, ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ ವಾಮದಪದವು, ರಮನಾಥ ರಾಯಿ ಮತ್ತಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.