ರಮಾನಾಥ ರೈ ಅವರ ಗೆಲುವು ನಿಶ್ಚಿತ : ಚುನಾವಣಾ ಉಸ್ತುವಾರಿ ಸುಭಾಶ್ಚಂದ್ರ ಶೆಟ್ಟಿ

ವಿಟ್ಲ: ಕಳೆದ ಐದು ವರುಷದ ಅವಧಿಯ ಆಡಳಿತ ಅನುಭವ ಹೊಂದಿರುವ ಬಂಟ್ವಾಳ ಕ್ಷೇತ್ರದ ಮತದಾರರು ಮತ್ತೊಮ್ಮೆ ರಮಾನಾಥ ರೈಯವರನ್ನು ಕ್ಷೇತ್ರದ ಶಾಸಕರನ್ನಾಗಿ ಆಯ್ಕೆ ಮಾಡುವ ನಿರ್ಧಾರದಲ್ಲಿದ್ದಾರೆ ಎಂದು ಬಂಟ್ವಾಳ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಚುನಾವಣಾ ಉಸ್ತುವಾರಿಯಾಗಿರಯವ ಪಂಚಾಯತ್ ರಾಜ್ ಘಟಕದ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲುರವರು ಹೇಳಿದರು.

ಅವರು ಕೊಳ್ನಾಡು ವಲಯ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ತಕರ್ತರು ಮೂರನೇ ಹಂತದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಪ್ರದೇಶ ಕಾಂಗ್ರೆಸ್ ವತಿಯಿಂದ ಘೋಷಿಸಲಾದ ಗ್ಯಾರೆಂಟಿ ಭರವಸೆಗಳನ್ನು ಮನೆಮನೆಗಳಿಗೆ ತಲುಪಿಸಿ, ಮತದಾರರಿಗೆ ಮನವರಿಕೆ ಮಾಡಿ ಕೊಟ್ಟಿರುತ್ತಾರೆ ಜನ ಕಾಂಗ್ರೆಸ್ ನತ್ತ ಒಲವು ವ್ಯಕ್ತ ಪಡಿಸಿದ್ದು, ಈ ಭಾರಿ ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈರವರು ಗೆಲುವು ನಿಶ್ಚಿತವಾಗಿದೆ. ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಲಯಾಧ್ಯಕ್ಷ ಪವಿತ್ರಪೂಂಜ, ಕೊಳ್ನಾಡು ಗ್ರಾಮ ಪಂಚಾಯತ್ ಸದಸ್ಯ ಕೆ.ಅಶ್ರಫ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.