ಬಂಟ್ವಾಳ: ಧಾರ್ಮಿಕ, ಸಾಮಾಜಿಕ, ಧುರೀಣ ಕೊಡುಗೈದಾನಿ ಕೆ.ಸೇಸಪ್ಪ ಕೋಟ್ಯಾನ್ ನಿಧನ

ಬಂಟ್ವಾಳ: ಧಾರ್ಮಿಕ, ಸಾಮಾಜಿಕ ಧುರೀಣ, ಕೊಡುಗೈ ದಾನಿಯಾಗಿರುವ ಬಂಟ್ವಾಳ ತಾಲೂಕಿನ ಕೆ.ಸೇಸಪ್ಪ ಕೋಟ್ಯಾನ್(75)ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ ಮೃತಪಟ್ಟಿದ್ದು, ಇವರ ಮೃತದೇಹವನ್ನು ಇಂದು (ಜ. 27) ಬೆಳಗ್ಗೆ 9ರಿಂದ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮೃತರ ಸ್ವಗೃಹ ಪಚ್ಚಿನಡ್ಕದ ಶುಭ ನಿಲಯದಲ್ಲಿ ಇಡಲಾಗುತ್ತಿದ್ದು, ಮಧ್ಯಾಹ್ನ 12.30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ನಿಧನ

ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ ವೇಳೆ ಇವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅಲ್ಲಿಯೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಜ.26 ರಂದು ಅವರು ಚಿಕಿತ್ಸೆ ಗೆ ಸ್ಪಂದಿಸಿದೆ ಸಂಜೆ ವೇಳೆ ಮೃತಪಟ್ಟ ಬಗ್ಗೆ ಮನೆಯವರು ತಿಳಿಸಿದ್ದಾರೆ. 

ಬಂಟ್ವಾಳದಲ್ಲಿ ಯಶಸ್ವಿ ಉದ್ಯಮಿ ಎಂಬ ಹೆಗ್ಗಳಿಕೆ ಗೆ ಪಾತ್ರವಾಗಿದ್ದ ಇವರು ಶುಭ ಬೀಡಿ, ಶುಭ ಟ್ರಾವೆಲ್ಸ್ , ಶುಭಲಕ್ಮೀ ಮದುವೆ ಹಾಲ್, ಸಹಿತ ಅನೇಕ ಉದ್ಯಮ ನಡೆಸುತ್ತಿದ್ದು, ಅನೇಕ ಕುಟುಂಬಗಳಿಗೆ ಉದ್ಯೋಗ ನೀಡಿದ ಅನ್ನದಾತರಾಗಿದ್ದರು.
ಇವರ ಮದುವೆಯಾಗಿ ಐವತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇತ್ತೀಚಿಗೆ ಮನೆಯಲ್ಲಿ ಶುಭಯಾನ ಎಂಬ ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಿದ್ದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಯನ್ನು ಈ ಬಾರಿ ಪಡೆದಿದ್ದರು.ಇವರು ಧಾರ್ಮಿಕ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಅನನ್ಯ ವಾಗಿದ್ದು, ಅನೇಕ ದೈವ ದೇವಸ್ಥಾನ ಗಳು ಜೀರ್ಣೋದ್ಧಾರ ಇವರ ಮೂಲಕ ನಡೆದಿವೆ. ಬಂಟ್ವಾಳ ‌ಪೋಲೀಸ್ ಲೈನ್ ನ ದೇವಸ್ಥಾನದ ಅಧ್ಯಕ್ಷ ರಾಗಿದ್ದ ಇವರು ಕಳೆದ 25 ವರ್ಷಗಳಿಂದ ಬಂಟ್ವಾಳ ಬಿಲ್ಲವ ಸಂಘದ ಯಶಸ್ವಿ ಅಧ್ಯಕ್ಷರಾಗಿ ಮಿಂಚಿದವರು.
ಭುವನೇಶ್ ಪಚ್ಚಿನಡ್ಕ, ಪತ್ನಿ ಹಾಗೂ ನಾಲ್ಕು ಹೆಣ್ಣು ಮಕ್ಕಳನ್ನು ಹಾಗೂ ಅಪಾರ ಬಂಧು ಬಳಗ ವನ್ನು ಅಗಲಿದ್ದಾರೆ.

Related Posts

Leave a Reply

Your email address will not be published.