ಬಂಟ್ವಾಳ: V4 ನ್ಯೂಸ್‌ನ ವರದಿಗಾರ ಸಂದೀಪ್ ಸಾಲ್ಯಾನ್‌ಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ
ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆ ಪ್ರಯುಕ್ತ ಮಾ.24ರಂದು ಬಂಗ್ಲೆ ಮೈದಾನದಲ್ಲಿ ಜರುಗಲಿರುವ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಪ್ರದಾನ ನಡೆಯಲಿದೆ. V4 ನ್ಯೂಸ್ ಬಂಟ್ವಾಳ ವರದಿಗಾರ ಸಂದೀಪ್ ಸಾಲ್ಯಾನ್ ಮಾಧ್ಯಮ ಕ್ಷೇತ್ರದ ಸಾಧನೆಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಉದ್ಯಮಿ ಅಬ್ದುಲ್ ಕುಂಞ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಪ್ರಶಸ್ತಿ ಪ್ರದಾನಿಸಲಿದ್ದಾರೆ. ಶಾಸಕರಾದ ರಾಜೇಶ್ ನ್ಯಾಕ್, ಹರೀಶ್ ಪೂಂಜ, ಕ್ಲಬ್ ಸ್ಥಾಪಕಾಧ್ಯಕ್ಷ ಎಂ. ತುಂಗಪ್ಪ ಬಂಗೇರ, ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಮತ್ತಿತರರು ಭಾಗವಹಿಸಲಿದ್ದಾರೆ.