ಬಂಟ್ವಾಳ: ಸೇವಾಂಜಲಿಯ ಕೆ.ಕೃಷ್ಣ ಕುಮಾರ್ ಪೂಂಜ ಅವರಿಗೆ ವಿಷ್ಣು ಪ್ರಸಾದ ಪ್ರಶಸ್ತಿ ಪ್ರದಾನ

ಬಂಟ್ವಾಳ: ತಾಲೂಕು ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾವರ್ಧಂತಿ ಹಾಗೂ ವರ್ಷಾವಧಿ ಜಾತ್ರೆ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಕ್ಷೇತ್ರದ ವತಿಯಿಂದ ಕೊಡ ಮಾಡುವ ವಿಷ್ಣು ಪ್ರಸಾದ ಪ್ರಶಸ್ತಿಯನ್ನು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣ ಕುಮಾರ್ ಪೂಂಜ ಅವರಿಗೆ ಪ್ರದಾನ ಮಾಡಲಾಯಿತು.
ಮಾಜಿ ಸಚಿವ ಬಿ.ರಮಾನಾಥ ರೈ ಅವರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಸೇವೆಯಿಂದ ಸಾರ್ಥಕತೆ ಎಂಬ ಧ್ಯೇಯ ವಾಕ್ಯದಂತೆ ಆರೋಗ್ಯ, ಶಿಕ್ಷಣ, ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಸೇವಾಂಜಲಿ ಪ್ರತಿಷ್ಠಾನದ ಮೂಲಕ ಅನುಪಮ ಸೇವೆ ಸಲ್ಲಿಸುತ್ತಿರುವ ಕೃಷ್ಣ ಕುಮಾರ್ ಪೂಂಜ ಅವರ ಸೇವಾ ಕಾರ್ಯ ಅಭಿನಂದನೀಯ ಎಂದು ಹೇಳಿದರು.
ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಪ್ರಧಾನ ಅರ್ಚಕರಾದ ಟಿ.ವಿ.ಶ್ರೀಧರ ರಾವ್ ಪೇಜಾವರ ಅವರು ಅಧ್ಯಕ್ಷತೆ ವಹಿಸಿದ್ದರು.
ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಶುಭ ಹಾರೈಸಿದರು. ಸನಾತನ ಸಂಸ್ಥೆಯ ಉಪೇಂದ್ರ ಆಚಾರ್ಯ ಧಾರ್ಮಿಕ ಉಪನ್ಯಾಸ ನೀಡಿದರು. ಜಿ.ಪಂ.ಮಾಜಿ ಸದಸ್ಯ ಬಿ.ಪದ್ಮಶೇಖರ ಜೈನ್, ಮಡಂತ್ಯಾರು ಜನಜಾಗೃತಿ ವೇದಿಕೆಯ ಪದ್ಮನಾಭ ಸಾಲ್ಯಾನ್ ಕೋಂಕಡ್ಡ, ಕ್ಷೇತ್ರದ ತಂತ್ರಿಗಳಾದ ಉದಯ ಪಾಂಗಣ್ಣಾಯ, ಸಿರಿಗುಂಡದ ಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಮೋಹನ ಶೆಟ್ಟಿ ನರ್ವಲ್ದಡ್ಡ ವೇದಿಕೆಯಲ್ಲಿದ್ದರು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ.ರಾಮಕೃಷ್ಣ ಎಸ್.ಅವರು ಸ್ವಾಗತಿಸಿದರು. ದಯಾನಂದ ಎರ್ಮೆನಾಡು ವಂದಿಸಿದರು. ಸತೀಶ ಕರ್ಕೇರ ಸಹಕರಿಸಿದರು. ಪತ್ರಕರ್ತ ಗೋಪಾಲ ಅಂಚನ್ ಕಾರ್ಯಕ್ರಮ ನಿರೂಪಿಸಿದರು.

Related Posts

Leave a Reply

Your email address will not be published.