ಬಿ.ಸಿ.ರೋಡಿನ ತಲಪಾಡಿಯಲ್ಲಿ ರಸ್ತೆಗೆ ಉರುಳಿ ಬಿದ್ದ ಗೂಡ್ಸ್ ಟೆಂಪೋ
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಟೆಂಪೋವೊಂದು ರಸ್ತೆಗೆ ಉರುಳಿ ಬಿದ್ದ ಘಟನೆ ಬಿ.ಸಿ.ರೋಡಿನ ತಲಪಾಡಿ ಬಳಿ ನಡೆದಿದೆ. ಬೆಳಗ್ಗೆ ಸುರಿದ ಭಾರಿ ಮಳೆಯಿಂದಾಗಿ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಚಾಲಕನಿಗೆ ತರಚಿದ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದಾಗಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಹೊತ್ತು ಟ್ರಾಫಿಕ್ ಜಾಂ ಸಮಸ್ಯೆ ಉಂಟಾಗಿತ್ತು.