ಬೀಚ್‍ಗಳಲ್ಲಿ ಬೀಚ್‍ಗಾರ್ಡ್ ನೇಮಕ : ಡಾ|| ಚೂಂತಾರು

ದಿನಾಂಕ: 26 05-2024 ರಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ರವರು ಸುರತ್ಕಲ್ ಮತ್ತು ಸಸಿಹಿತ್ಲು ಬೀಚ್‍ಗಳಿಗೆ ಭೇಟಿ ನೀಡಿ ಅಲ್ಲಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರಿಗೆ ಪ್ರವಾಹ ರಕ್ಷಣಾ ಕಾರ್ಯದ ಕುರಿತು ಸೂಕ್ತ ಸಲಹೆ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ವಿಪತ್ತು ನಿರ್ವಹಣಾ ತಂಡ 70 ಗೃಹರಕ್ಷರರನ್ನು ಹೊಂದಿದೆ. ಪ್ರತೀ ವರ್ಷದಂತೆಯೇ ಮಾನ್ಯ ಜಿಲ್ಲಾಧಿಕಾರಿಯವರ ಆದೇಶದಂತೆ ಜಿಲ್ಲಾಡಳಿತದ ನಿರ್ದೇಶನದಂತೆ ಕೆಲಸ ನಿರ್ವಹಿಸಲಿದ್ದೇವೆ. ಮಂಗಳೂರಿನ 8 ಸುಂದರವಾದಂತಹ ಬೀಚ್‍ಗಳಾದ ಸೋಮೇಶ್ವರ, ಮೊಗವೀರಪಟ್ಣ, ಉಳ್ಳಾಲ ಹಾಗೂ ಪಣಂಬೂರು, ಫಾತಿಮಾಬೀಚ್, ತಣ್ಣೀರುಬಾವಿ, ಸುರತ್ಕಲ್, ಸಸಿಹಿತ್ಲು ಬೀಚ್‍ಗಳಲ್ಲಿ ಗೃಹರಕ್ಷಕರು ಪ್ರತೀ ಬೀಚ್‍ಗೆ ಇಬ್ಬರಂತೆ 2 ಪಾಳಿಯಲ್ಲಿ ಬೆಳಗ್ಗೆ 7 ರಿಂದ ಸಂಜೆ 7 ಗಂಟೆ ವರೆಗೆ ಕರ್ತವ್ಯ ನಿರ್ವಹಿಸಲಿದ್ದಾರೆ. ಮಳೆಗಾಲದ ಸಂದರ್ಭ ಬೀಚ್ ಉಗ್ರವಾಗಿರುತ್ತದೆ. ಅಲೆಗಳು ಎತ್ತರಕ್ಕೆ ಏರುತ್ತಾ ಇರುತ್ತದೆ ಈ ಸಂದರ್ಭದಲ್ಲಿ ಮಂಗಳೂರಿಗೆ ಬರುವ ಪ್ರವಾಸಿಗರಿಗೆ ಆಳ ಅಗಲದ ಅರಿವಿರುವುದಿಲ್ಲ.

ಸ್ವಾಭಾವಿಕವಾಗಿ ತೊಂದರೆಗೆ ಸಿಲುಕುತ್ತಿರುತ್ತಾರೆ. ಈ ಹಿನ್ನೆಲೆಯಲ್ಲಿ ಕಳೆದ 5 ವರ್ಷಗಳಿಂದ ನಿರಂತರವಾಗಿ ಬೀಚ್‍ಗಾರ್ಡ್‍ಗಳಾಗಿ ಜೂನ್, ಜುಲೈ, ಆಗಸ್ಟ್ ಸೆಪ್ಟೆಂಬರ್ ತಿಂಗಳಲ್ಲಿ 8 ಬೀಚ್‍ಗಳಲ್ಲಿ ಬೀಚ್ ಗಾರ್ಡ್‍ಗಳಾಗಿ ಪ್ರವಾಸಿಗರ ರಕ್ಷಣೆಯನ್ನು ಮಾಡುತ್ತಿರುತ್ತೇವೆ. ಅದೇ ರೀತಿ ಜೂನ್ 1 ರಿಂದ ಎಲ್ಲಾ 8 ಬೀಚ್‍ಗಳಲ್ಲಿಯೂ ಕರ್ತವ್ಯ ನಿರ್ವಹಿಸಲಿದ್ದಾರೆ. ಜಿಲ್ಲಾಧಿಕಾರಿಯವರ ಆದೇಶದಂತೆ ಜಿಲ್ಲಾಡಳಿತದ ನಿರ್ದೇಶನದದಲ್ಲಿ ಪೊಲೀಸ್ ಇಲಾಖೆ ಮತ್ತು ಅಗ್ನಿಶಾಮಕ ಇಲಾಖೆ ಜೊತೆಗೂಡಿ ಜಿಲ್ಲಾ ವಿಪತ್ತು ನಿರ್ವಹಣಾ ತಂಡದ ಗೃಹರಕ್ಷಕರು ಕರ್ತವ್ಯ ನಿರ್ವಹಿಸಲಿದ್ದಾರೆ. ಜಿಲ್ಲಾ ಕಛೇರಿಯಲ್ಲಿ 10 ಗೃಹರಕ್ಷಕರು ರಿಸರ್ವ್ ಆಗಿರುತ್ತಾರೆ. ಮಳೆಗಾಲದ ಸಂದರ್ಭದಲ್ಲಿ ಬಂದಂತಹ ತುರ್ತು ಕರೆಗಳಿಗೆ ಸ್ಪಂದಿಸುತ್ತಾರೆ ಇದಲ್ಲದೆ ಜಿಲ್ಲೆಯಾದ್ಯಂತ ಒಟ್ಟು 70 ಗೃಹರಕ್ಷಕರಿದ್ದು, ವಿಪತ್ತು ನಿರ್ವಹಣೆ ತಂಡದಲ್ಲಿ ಕೆಲಸ ಮಾಡಲಿದ್ದಾರೆ. ಸುಬ್ರಹ್ಮಣ್ಯದ ಸ್ನಾನಘಟ್ಟ, ಉಪ್ಪಿನಂಗಡಿಯ ಸಂಗಮ ಕ್ಷೇತ್ರ, ಬಂಟ್ವಾಳ, ಮೂಲ್ಕಿ, ಮತ್ತು ಸುಳ್ಯ, ಬೆಳ್ತಂಗಡಿ ಈ ಎಲ್ಲಾ ಜಾಗದಲ್ಲಿ ಗೃಹರಕ್ಷಕರು ಸನ್ನದ್ಧರಾಗಿರುತ್ತಾರೆ. ತುರ್ತು ಕರೆಗಳಿಗೆ ಸ್ಪಂದಿಸುತ್ತಾರೆ.

ಮುಳುಗು ತಜ್ಞರು ಹಾಗೂ ಉತ್ತಮ ಈಜುಗಾರರನ್ನು ಗುರುತಿಸಿಕೊಂಡಿತ್ತೇವೆ, ತುರ್ತು ಅಗತ್ಯದ ಸಂದರ್ಭಗಳಲ್ಲಿ ಜನರ ರಕ್ಷಣೆ ಹಾಗೂ ಆಸ್ತಿಪಾಸ್ತಿ ರಕ್ಷಣೆಗೆ ಗೃಹರಕ್ಷಕರು ಬದ್ಧರಾಗಿರುತ್ತೇವೆ. ಒಟ್ಟಿನಲ್ಲಿ ಎಲ್ಲಾ ಇಲಾಖೆಗಳ ಜೊತೆ ಸೇರಿ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ನಾವು ಪ್ರವಾಸಿಗರ ರಕ್ಷಣೆಗೆ ಕಟಿಬದ್ಧರಾಗಿರುತ್ತೇವೆ ಎಂದು ನುಡಿದರು. ಈ ಸಂದರ್ಭ ಉಳ್ಳಾಲ ಘಟಕದ ಅಧಿಕಾರಿ ಶ್ವೀ ಸುನಿಲ್,ಜೀವನ್ ರಾಜ್, ಮಂಗಳೂರು ಘಟಕದ ಧನಂಜಯ, ಸುರತ್ಕಲ್ ಘಟಕಾಧಿಕಾರಿ ಶ್ರೀ ರಮೇಶ್, ಹಾಗೂ ಲಲಿತ,,ಗಿರೀಶ್,ನಾಗರಾಜ್,
ಮನೋರಮಾ ಮುಂತಾದ ಗೃಹರಕ್ಷಕರು ಉಪಸ್ಥಿತರಿದ್ದರು

Related Posts

Leave a Reply

Your email address will not be published.