HomeFresh Newsಬೆಳ್ಳಾರೆ ಕಾಲೇಜಿನಲ್ಲಿ ಅರೆ ಭಾಷೆ ಐಸಿರಿ -ಅಂತರ್ ಕಾಲೇಜು ಸ್ಪರ್ಧಾ ಕಾರ್ಯಕ್ರಮ

ಬೆಳ್ಳಾರೆ ಕಾಲೇಜಿನಲ್ಲಿ ಅರೆ ಭಾಷೆ ಐಸಿರಿ -ಅಂತರ್ ಕಾಲೇಜು ಸ್ಪರ್ಧಾ ಕಾರ್ಯಕ್ರಮ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿ ಮತ್ತು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ಡಾ.ಕೆ. ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ‘ಅರೆಬಾಷೆ ಐಸಿರಿ- ಅಂತರ್ ಕಾಲೇಜು ಸ್ಪರ್ಧಾ ಕಾರ್ಯಕ್ರಮ’ ವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರಿಂದ ದೀಪ ಹೊತ್ತಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ಡಾ. ಶಿವಕುಮಾರ್ ಹೊಸೊಳಿಕೆ, ವಿಶ್ರಾಂತ ಪ್ರಾದೇಶಿಕ ನಿರ್ದೇಶಕರು, ಐ ಟಿ ಯು ಬೆಳಗಾವಿ ಇವರು ಅರೆಭಾಷೆ ಸಂಸ್ಕೃತಿಯ ಹುಟ್ಟು ಬೆಳವಣಿಗೆ ಮತ್ತು ಆಚಾರ ವಿಚಾರಗಳ ಬಗ್ಗೆ ಸವಿಸ್ತಾರವಾಗಿ ಮಾತನಾಡುವ ಮೂಲಕ ಕಾರ್ಯಕ್ರಮದ ಮೆರಗನ್ನ ಮತ್ತಷ್ಟು ಹೆಚ್ಚಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯ ನುಡಿಯನ್ನು ಅರ್ಥಪೂರ್ಣವಾಗಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ ಅವರು ಬಣ್ಣಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಬಾಲಸುಬ್ರಮಣ್ಯ ಪಿ ಎಸ್ ಮತ್ತು ವಿದ್ಯಾರ್ಥಿ ಕ್ಷೇಮಪಾನಾಧಿಕಾರಿ ಡಾ. ರಾಮಚಂದ್ರ.ಕೆ ಮತ್ತು ಅರೆ ಭಾಷೆ ಅಕಾಡೆಮಿಯ ಸದಸ್ಯ ಸಂಚಾಲಕರಾದ ಶ್ರೀ ಚಂದ್ರಶೇಖರ್ ಪೇರಾಲು ಹಾಗೂ ಕಾರ್ಯಕ್ರಮದ ಸಂಯೋಜಕರಾದ ಶ್ರೀ ಮನೋಜ್ , ಶ್ರೀಮತಿ ಚಂದ್ರಾವತಿ ಬಡ್ಡಡ್ಕ, ಶ್ರೀಮತಿ ಚಂದ್ರಮತಿ, ಡಾ. ಎನ್ ಎ ಜ್ಞಾನೇಶ್ಲ್, ಲತಾ ಪ್ರಸಾದ್ ಕುದುಪಜೆ , ಉದಯವಾಣಿ ಪತ್ರಿಕೆಯ ಸಂಪಾದಕರಾದ ಕಿರಣ್, ಮತ್ತು ಜೀವನ್ ಪುರ ಅರೆಭಾಷೆ ಸಾಹಿತ್ಯ ಸಂಘದ ಅಧ್ಯಕ್ಷ ಲಿಖಿನ್, ಉಪಾಧ್ಯಕ್ಷೆ ಪ್ರಿಯಾಕ ಬಿ ಎಚ್ ಮತ್ತು ಶ್ರೇಯ ಎ ಪಿ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ನಂತರ ವಿವಿಧ ಕಾಲೇಜುಗಳಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ಅರೆಭಾಷೆ ಹಾಡು ( ವೈಯಕ್ತಿಕ ),ಅರೆಭಾಷೆ ನೃತ್ಯ, ಅರಭಾಷೆ ಕಿರು ನಾಟಕ, ಆಶುಭಾಷಣ, ಅರೆಭಾಷೆಯಲ್ಲಿ ಕವನ ರಚನಾ, ರಸಪ್ರಶ್ನೆ ಸ್ಪರ್ಧೆಗಳನ್ನು ನಡೆಸಿ ಸ್ಪರ್ಧೆಯಲ್ಲಿ ಗೆದ್ದಂತ ಸ್ಪರ್ಧಾರ್ಥಿಗಳಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡುವುದರ ಜೊತೆಗೆ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರಮಾಣ ಪತ್ರವನ್ನು ನೀಡಲಾಯಿತು. ಸ್ಪರ್ಧೆಗಳ ಸಮಗ್ರ ಪ್ರಶಸ್ತಿಯನ್ನು ಎನ್ ಎಂ ಸಿ ಕಾಲೇಜ್ ಸುಳ್ಯ ಪಡೆದುಕೊಂಡಿತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments