ಬೆಳ್ಳಾರೆ : ತಂಬಿನಮಕ್ಕಿಯಲ್ಲಿ ಬೈಕ್ ಗಳ ಪರಸ್ಪರ ಡಿಕ್ಕಿ

ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ನಿನ್ನೆ ರಾತ್ರಿ ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೆ ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟ ವ್ಯಕ್ತಿ ಕೊಡಿಯಾಲದ ಗುತ್ತಿನಮನೆ ನಾರಾಯಣ ಎಂಬುದಾಗಿ ತಿಳಿದು ಬಂದಿದೆ.ಘಟನೆಯಿಂದ ಮತ್ತೋರ್ವರಾದ ಸುಜಿತ್ ಗುತ್ತಿನಮನೆ ಎಂಬುವವರು ಗಾಯಾಳಾಗಿ ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.